Doubts surround death: Hescom section officer Areshankar's dead body found hanging

ಸಾವಿನ ಸುತ್ತ ಅನುಮಾನದ ಹುತ್ತ: ಹೆಸ್ಕಾಂ ಸೆಕ್ಷನ್ ಅಧಿಕಾರಿ ಆರೇಶಂಕರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಸಾವಿನ ಸುತ್ತ ಅನುಮಾನದ ಹುತ್ತ: ಹೆಸ್ಕಾಂ ಸೆಕ್ಷನ್ ಅಧಿಕಾರಿ ಆರೇಶಂಕರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಮುದ್ದೇಬಿಹಾಳ : ಹೆಸ್ಕಾಂನ ಗ್ರಾಮೀಣ ವಲಯದ ಸೆಕ್ಷನ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ತಾಲ್ಲೂಕಿನ ಕುಂಟೋಜಿ ಗ್ರಾಮದ ಶಿವಪ್ಪ ಎಂ. ಆರೇಶಂಕರ ಅವರ ಶವ ಬುಧವಾರ ಕುಂಟೋಜಿ ಸೀಮೆಯಲ್ಲಿ ಬರುವ ಬಸವ ಇಂಟರ್‌ನ್ಯಾಶನಲ್ ಸ್ಕೂಲ್ ಹಿಂಭಾಗದ ಜಮೀನೊಂದರ ಗಿಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಕಳೆದ ನಾಲ್ಕು ವರ್ಷಗಳಿಂದ ಹೆಸ್ಕಾಂನಲ್ಲಿ ಗ್ರಾಮೀಣ ಭಾಗದ ಸೆಕ್ಷನ್ ಅಧಿಕಾರಿಯಾಗಿ ಒಳ್ಳೆಯ ಹೆಸರು ಮಾಡಿದ್ದ ಆರೇಶಂಕರ ಸಾವನ್ನಪ್ಪಿದ್ದ ಸುದ್ದಿ ತಿಳಿದ ಅವರ ಸ್ನೇಹಿತರು, ಬಂಧುಗಳು ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಪಿಎಸ್‌ಐ ಸಂಜಯ ತಿಪರೆಡ್ಡಿ ಭೇಟಿ ನೀಡಿದ್ದು ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಏತನ್ಮಧ್ಯೆ ಶಿವಪ್ಪ ಸಾವನ್ನಪ್ಪುವ ಮುನ್ನ ತನ್ನ ಸ್ನೇಹಿತರಿಗೆ, ಸಹೋದರರಿಗೆ ವಾಟ್ಸಾಪ್‌ನಲ್ಲಿ ಕೆಲವು ಸಂದೇಶ ಹಾಕಿದ್ದ ಎನ್ನಲಾಗಿದ್ದು ಪೊಲೀಸ್ ತನಿಖೆಯಿಂದಲೇ ಸಾವಿಗೆ ನೈಜ ಕಾರಣ ತಿಳಿದು ಬರಬೇಕಿದೆ.

ಶಿವಪ್ಪ ಆರೇಶಂಕರ ಸಾಮಾಜಿಕ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿದ್ದರು. ಗ್ರಾಮದ ಯಾವುದೇ ಜಾತ್ರೆ, ಉತ್ಸವಗಳು ಬಂದರೆ ಅಲ್ಲಿ ತಮ್ಮ ಕೈಲಾದಷ್ಟು ಮಟ್ಟಿಗೆ ದೇಣಿಗೆಯನ್ನು ಕೊಟ್ಟು ಜನರ ಪ್ರೀತಿ ಸಂಪಾದಿಸಿದ್ದರು. ಇದೀಗ ಅವರ ಸಾವು ಅವರ ಸ್ನೇಹಿತರು, ಆಪ್ತರಿಗೆ ದಿಗ್ಭ್ರಮೆ ಮೂಡಿಸಿದೆ.ಆರೇಶಂಕರ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ