Labor Minister Santosh Lad thundered in the protest against the central government

ಕೇಂದ್ರ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಗುಡುಗು

ಕೇಂದ್ರ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಗುಡುಗು

ಪಹಲ್ಗಾಮ್‌ ದಾಳಿಗೆ ತಕ್ಕ ಪ್ರತೀಕಾರವನ್ನು ಭಾರತ ಪಡೆಯಲೇ ಬೇಕು

ಹುಬ್ಬಳ್ಳಿ, ಮೇ 1: ಪಹಲ್ಗಾಮ್‌ ದಾಳಿಯಲ್ಲಿ ನಮ್ಮ ದೇಶದ ಜನರು ಪ್ರಾಣ ಕಳೆದುಕೊಂಡರು. ಇದಕ್ಕೆ ಪ್ರತಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯಿರಿ. ಪಾಕಿಸ್ತಾನದ ಮನೆಮನೆಗೆ ನುಗ್ಗಿ ಹೊಡೆಯಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಗುಡುಗಿದರು.

ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಕೆಪಿಸಿಸಿ ವತಿಯಿಂದ ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿದ್ದ ಬೃಹತ್‌ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನಕ್ಕೆ ಬುದ್ಧಿಕಲಿಸಬೇಕು ಎಂದು ಹೇಳಿದರು.

ಪಹಲ್ಗಾಮ್‌ ಘಟನೆಗೆ ರಾಹುಲ್‌ ಗಾಂಧಿ ಅವರು ಮೋದಿಜಿ ಅವರು ಕೈಗೊಳ್ಳುವ ಕ್ರಮಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಡೀ ದೇಶದ ನೂರನಲವತ್ತು ಕೋಟಿ ಜನರು ಮೋದಿ ಅವರ ಜೊತೆಗಿದೆ. ದಯಮಾಡಿ ತಾವು ಪಾಕಿಸ್ತಾನದ ಒಳಗಡೆ ನುಗ್ಗಿ ಆತಂಕವಾದವನ್ನು ಬೆಂಬಲಿಸುವ ಆ ದೇಶಕ್ಕೆ ಬುದ್ಧಿ ಕಲಿಸಿ ಎಂದು ಹೇಳಿದರು.

ಭಾರತದ ಮೇಲೆ ದಾಳಿ ಮಾಡಿರುವ ಪಾಕಿಸ್ತಾನಕ್ಕೆ ದಾಳಿ ಮಾಡಿ. ನಮ್ಮ ದೇಶದಲ್ಲಿ ಭಯೋತ್ಪಾದನಾ ಕೃತ್ಯ ಮಾಡಿರುವ ಅವರಿಗೆ ತಕ್ಕ ಉತ್ತರ ನೀಡಬೇಕು. ಪಹಲ್ಗಾಮ್‌ ನಲ್ಲಿ ನಮ್ಮ ಜನರನ್ನು ಕೊಂದಿದ್ದಾರೆ. ಅವರ ಪರವಾಗಿ ನಮ್ಮ ಪಕ್ಷದ ಮುಖಂಡರಾದ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು, ಡಿ ಕೆ ಶಿವಕುಮಾರ್‌ ಅವರು ಸೇರಿದಂತೆ ನಾವೆಲ್ಲರೂ ಮೋದಿಜಿ ಅವರಿಗೆ ಬೆಂಬಲ ನೀಡಿದ್ದೇವೆ. ಈ ದೇಶದ ಸಮಸ್ತ ಭಾರತೀಯರು ನಿಮ್ಮ ಜೊತೆ ಇದ್ದೇವೆ ಎಂದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ