Massive protest in Samsitham Bachao: Congress leaders lash out against the central government's price hike

ಸಂವಿಧಾನ್ ಬಚಾವೋ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ ನಾಯಕರ ವಾಗ್ದಾಳಿ

ಸಂವಿಧಾನ್ ಬಚಾವೋ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ ನಾಯಕರ ವಾಗ್ದಾಳಿ

ಹುಬ್ಬಳ್ಳಿ, ಮೇ 1: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಹುಬ್ಬಳ್ಳಿಯ ಗಿರಣಿಚಾಳ ಮೈದಾನದಲ್ಲಿ ಹಮ್ಮಿಕೊಂಡಿದ್ದ “ಸಂವಿಧಾನ್ ಬಚಾವೋ” ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ನರೇಂದ್ರ ಮೋದಿ ಅವರು ಕೇವಲ ಒಂದು ಪದಾರ್ಥದ ಬೆಲೆ ಏರಿಸಲಿಲ್ಲ. ಅಕ್ಕಿ, ಚಿನ್ನ, ಬೇಳೆ, ಪೆಟ್ರೋಲ್‌, ಔಷಧ, ಗೊಬ್ಬರ ಹೀಗೆ ಎಲ್ಲಾ ವಸ್ತುಗಳ ಬೆಲೆ ಏರಿಸಿದರು ಎಂದರು.

ಬೆಲೆ ಏರಿಕೆ ನಿಯಂತ್ರಣ ಮಾಡಲೇ ಇಲ್ಲ. ಒಳ್ಳೆಯ ದಿನ ಬರುತ್ತೆ ಎಂದು ಹೇಳಿ ಎಲ್ಲಾ ಪದಾರ್ಥಗಳ ಬೆಲೆ ಏರಿಸಿದರು. ನಾವು ಹಾಲಿನ ಬೆಲೆ ಏರಿಕೆ ಮಾಡಿದೆವು. ಆದರೆ ಅದರ ಹಣವನ್ನು ರೈತರಿಗೆ ವರ್ಗಾವಣೆ ಮಾಡಿದ್ದೇವೆ. ಆದರೆ ಕೇಂದ್ರ ಸರ್ಕಾರ ಬೆಲೆ ಏರಿಸಿ ಬಡವರ ಬದುಕನ್ನು ದುರ್ಬರ ಮಾಡಿದೆ ಎಂದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಮಾತನಾಡಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಸುಲಿಗೆ ಮಾಡುತ್ತಿದೆ. ಇದರಿಂದ ಜನರ ಬದುಕು ಕಷ್ಟವಾಗುತ್ತಿದೆ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ, ಕೇಂದ್ರ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಸಲ್ಲಿಸಿದರು.

ಎಐಸಿಸಿಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಣದೀಪ್ ಸಿಂಗ್ ಸುರ್ಜೆವಾಲಾ, ಸಂಪುಟ ಸದಸ್ಯರು, ವಿಧಾನ ಪರಿಷತ್‌ ಸದಸ್ಯರು, ಪಕ್ಷದ ಹಲವಾರು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ