Failed in SSLC exam: Parents who gave courage by cutting a cake

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್: ಪೋಷಕರು ಕೇಕ್ ಕಟ್ ಮಾಡಿ ಧೈರ್ಯ ತುಂಬಿದ್ದರು

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್: ಪೋಷಕರು ಕೇಕ್ ಕಟ್ ಮಾಡಿ ಧೈರ್ಯ ತುಂಬಿದ್ದರು

ಬಾಗಲಕೋಟೆ: ಎಸ್ಎಸ್ಎಲ್.ಸಿ ಪರೀಕ್ಷೆಯಲ್ಲಿ 6 ವಿಷಯಗಳಲ್ಲಿ ಫೇಲ್ ಆದ ಮಗನಿಗೆ ಕೇಕ್ ತಿನ್ನಿಸಿ ಪೋಷಕರು ಧೈರ್ಯ ತುಂಬಿರಿವ ಘಟನೆ ನಗರದಲ್ಲಿ ನಡೆದಿದೆ. ಬಾಗಲಕೋಟೆ ನವನಗರದ ನಿವಾಸಿಯಾಗಿರುವ ಅಭಿಷೇಕ್ ಚೊಳಚಗುಡ್ಡ ಆರು ವಿಷಯಗಳಲ್ಲಿ ಫೇಲ್ ಆಗಿದ್ದರಿಂದ ದುಖಃದಲ್ಲಿದ್ದ. ಆತನಿಗೆ ಕುಟುಂಬದ ಸದಸ್ಯರು ಕೇಕ್ ಕಟ್ ಮಾಡಿಸಿ, ತಿನ್ನಿಸುವ ಮೂಲಕ ಧೈರ್ಯ ಹೇಳಿದ್ದಾರೆ.

ನಗರದ ಬಸವೇಶ್ವರ ಆಂಗ್ಲ ಮಾಧ್ಯಮದಲ್ಲಿ ಓದುತ್ತಿದ್ದ ಅಭಿಷೇಕ 625ಕ್ಕೆ 200 ಅಂಕ ಪಡೆದು ಶೇ.32 ಅಂಕ ಪಡೆದು ಅನುತೀರ್ಣವಾಗಿ ದುಃಖದಲ್ಲಿರುವ ಮಗನಿಗೆ ತಂದೆ ಯಲ್ಲಪ್ಪ ಅವರು, ಸಿಹಿ ತಿನ್ನಿಸಿ ಮುತ್ತು ಕೊಟ್ಟು, ಪರೀಕ್ಷೆ ಒಂದೇ ಜೀವನವಲ್ಲ‌, ಮತ್ತೆ ಪ್ರಯತ್ನ‌ ಮಾಡು ಎಂದು ಹೆಗಲ‌ ಮೇಲೆ‌ ಕೈ ಇಟ್ಟು ಧೈರ್ಯ ತುಂಬಿದ್ದಾರೆ.

ಅಭಿಷೇಕ್‌, ಹದಿನೈದು ತಿಂಗಳ‌ ಮಗುವಾಗಿದ್ದಾಗ ಎರಡು ಪಾದ ಸುಟ್ಟು ನೆನಪಿನ ಶಕ್ತಿ ಕಳೆದುಕೊಂಡಿದ್ದ. ಹೀಗಾಗಿ ಉತ್ತರ ನೆನಪಿಟ್ಟುಕೊಂಡು ಬರೆಯಲು ವಿದ್ಯಾರ್ಥಿ ವಿಫಲವಾಗಿದ್ದಾನೆ.

ಫೇಲ್ ಆಗಿದ್ದರಿಂದ ಬಹಳ ಬೇಜಾರಾಗಿತ್ತು‌. ನಮ್ಮ ತಂದೆ ತಾಯಿ ಎಲ್ಲರೂ ಧೈರ್ಯ ಹೇಳಿದರು. ಫೇಲ್ ಆದರೂ ಧೈರ್ಯ ಹೇಳಿ ಕೇಕ್ ತಿನ್ನಿಸಿ ಸಂಭ್ರಮಿಸಿದ್ದಾರೆ. ಮತ್ತೆ ಪ್ರಯತ್ನ ಮಾಡಿ ಪಾಸ್ ಆಗ್ತೀನಿ. ಪರೀಕ್ಷೆಯಲ್ಲಿ ಫೇಲ್ ಆದರೂ ಜೀವನದಲ್ಲಿ ಸಾಧಿಸಿ ತೋರಿಸ್ತೀನಿ ಎಂದು ಅಭಿಷೇಕ್ ಹೇಳಿದ್ದಾನೆ.‌

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ