SSLC Exam: Rank for Brilliant School in Myleswar

ಎಸ್.ಎಸ್.ಎಲ್.ಸಿ ಪರೀಕ್ಷೆ: ಮೈಲೇಶ್ವರದ ಬ್ರಿಲಿಯಂಟ್ ಶಾಲೆಗೆ ರ‍್ಯಾಂಕ್

ಎಸ್.ಎಸ್.ಎಲ್.ಸಿ ಪರೀಕ್ಷೆ: ಮೈಲೇಶ್ವರದ ಬ್ರಿಲಿಯಂಟ್ ಶಾಲೆಗೆ ರ‍್ಯಾಂಕ್

ತಾಳಿಕೋಟಿ: ಪಟ್ಟಣದ ಮೈಲೇಶ್ವರ ಕ್ರಾಸ್‌ನಲ್ಲಿರುವ ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಗಗನಸಿಂಗ್ ಮೂಲಿಮನಿ ಎಸ್.ಎಸ್.ಎಲ್.ಸಿ.ಪರಿಕ್ಷೆಯಲ್ಲಿ 625ಕ್ಕೆ 621(99.36%) ಅಂಕ ಗಳಿಸುವದರೊಂದಿಗೆ ರಾಜ್ಯಕ್ಕೆ ರ‍್ಯಾಂಕ್ ಪಡೆದು ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾನೆ.

ಪಟ್ಟಣದ ಪುರಸಭಾ ಸದಸ್ಯ ಜೈಸಿಂಗ್ ಮೂಲಿಮನಿ ಅವರ ಪುತ್ರನಾಗಿರುವ ಗಗನಸಿಂಗ್ ಪ್ರಾಥಮಿಕ ಶಿಕ್ಷಣದಿಂದ ಪ್ರೌಢಶಿಕ್ಷಣದವರೆಗೂ ಬ್ರಿಲಿಯಂಟ್ ಶಾಲೆಯಲ್ಲಿ ಓದಿದ್ದಾನೆ. ಎಸ್.ಎಸ್.ಎಲ್.ಸಿ. ಪರಿಕ್ಷೆಯಲ್ಲಿ ಕನ್ನಡಕ್ಕೆ 125ಕ್ಕೆ 125 ಅಂಕ, ಸಮಾಜ ವಿಜ್ಞಾನ 100ಕ್ಕೆ 100, ಹಿಂದಿ 100ಕ್ಕೆ 100, ಗಣಿತ 100ಕ್ಕೆ 99, ವಿಜ್ಞಾನ 100ಕ್ಕೆ 99, ಇಂಗ್ಲೀಷ 100ಕ್ಕೆ 98 ಅಂಕಗಳನ್ನು ಗಳಿಸಿದ್ದು ಈ ವಿದ್ಯಾರ್ಥಿಯ ಸಾಧನೆಯಿಂದ ಶಾಲೆಯಲ್ಲಿ ಹಾಗೂ ವಿದ್ಯಾರ್ಥಿಯ ಮನೆಯಲ್ಲಿ ಸಂತಸ ಮನೆ ಮಾಡಿದೆ.

ಬ್ರಿಲಿಯಂಟ್ ಶಿಕ್ಷಣ ಸಂಸ್ಥೆಯ ಚೇರಮನ್ ನಾನಾಗೌಡ ನಡುವಿನಮನಿ ಮಾತನಾಡಿ, ಗಗನಸಿಂಗ್ ಮೂಲಿಮನಿ ಸಾಧನೆಯ ಗುರಿಯೊಂದಿಗೆ ಬೆಳೆದು ಬಂದ ವಿದ್ಯಾರ್ಥಿಯಾಗಿದ್ದಾನೆ. ರಾಜ್ಯಕ್ಕೆ ಪ್ರಥಮ ಸ್ಥಾನದೊಂದಿಗೆ ಗುರಿತಿಸಿಕೊಳ್ಳಬೇಕೆಂಬ ಬಯಕೆ ಅವನದ್ದಾಗಿತ್ತು. ಆದರೆ 4 ಅಂಕ ಕಡಿತಗೊಂಡಿದೆ. ಆದರೂ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದು ಇನ್ನಷ್ಟು ಅಂಕ ಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.

ವಿದ್ಯಾರ್ಥಿ ಗಗನಸಿಂಗ ಮೂಲಿಮನಿ ಮಾತನಾಡಿ, ಪ್ರಾಥಮಿಕ ಹಂತದಿಂದಲೂ ಬ್ರಿಲಿಯಂಟ್ ಶಾಲೆಯಲ್ಲಿ ನೀಡಿದ ಭೋದನಾ ಕೌಶಲ್ಯ ಮತ್ತು ಶಿಕ್ಷಕರ ಮಾಡಿದ ಉತ್ತಮ ಭೋದನೆ ಅದರ ಜೊತೆಗೆ ನನ್ನ ತಂದೆ ಜೈಸಿಂಗ್ ಅವರು ಹಿಂದೆ ಉತ್ತಮ ಗುರುಗಳಿದ್ದಾರೆ. ಮುಂದೆ ನಮಗೆ ಗುರಿ ಎಂಬುದು ಇರಬೇಕು.ಈ ತಿಳಿವಳಿಕೆ ಕಾರಣವಾಗಿದೆ. ಪಿಯುಸಿ ವಿಜ್ಞಾನ ವಿಭಾಗದೊಂದಿಗೆ ಜೆಇಇ ಗುರಿ ಇದೆ ಎಂದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ