beṅgaḷūru Bengaluru achieved a thrilling win against Chennai

ಚೆನ್ನೈ ವಿರುದ್ಧ ರೋಚಕ ಜಯ ಸಾಧಿಸಿದ ಬೆಂಗಳೂರು

ಚೆನ್ನೈ ವಿರುದ್ಧ ರೋಚಕ ಜಯ ಸಾಧಿಸಿದ ಬೆಂಗಳೂರು

ಬೆಂಗಳೂರು: ಚೆನ್ನೈ ವಿರುದ್ಧ ತವರಿಂನಗಳದಲ್ಲಿ ನಡೆದ ಪಂದ್ಯದಲ್ಲಿ ಆರ್.ಸಿ.ಬಿ ರೋಚಕ 2 ರನ್ ಗಳ ಜಯಸಾಧಿಸಿದೆ‌.

ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಆರಂಭಿಕ ಆಟಗಾರರ ಅಬ್ಬರ ಹಾಗೂ ಅಂತಿಮ ಹಂತದಲ್ಲಿ ಶೆಫರ್ಡ್‌ ರೌದ್ರಾವತಾರದ ಆಟದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 213 ರನ್‌ ಕಲೆಹಾಕಿದ್ದು, 214 ರನ್‌ಗಳ ಗುರಿಯನ್ನು ನೀಡಿತ್ತು.

ಗುರಿ ಬೆನ್ನತ್ತಿದ್ದ ಸಿ.ಎಸ್.ಕೆ ತಂಡ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 211 ರನ್ ಕಲೆ ಹಾಕಿ ವಿರೋಚಿತ ಸೋಲು ಕಂಡಿತ್ತು.

8 ಪಂದ್ಯಗಳನ್ನು ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ 16 ಅಂಕಗಳನ್ನು ಪಡೆದುಕೊಂಡು ಅಗ್ರಸ್ಥಾನಕ್ಕೇರಿದೆ. ಇನ್ನು ಈ ಬಾರಿಯ ಪ್ಲೇಆಫ್‌ ಪ್ರವೇಶಿಸಲು ಕನಿಷ್ಟ 16 ಅಂಕಗಳು ಬೇಕಾಗುವ ಸಾಧ್ಯತೆಗಳು ಹೆಚ್ಚಿದ್ದು, ಆರ್‌ಸಿಬಿ ಈಗಾಗಲೇ ಆ ಅಂಕವನ್ನು ಪಡೆದುಕೊಂಡಿದೆ. ಆರ್‌ಸಿಬಿ ಇನ್ನೂ 3 ಪಂದ್ಯಗಳನ್ನಾಡಲಿದ್ದು ಇದರಲ್ಲಿ ಒಂದು ಪಂದ್ಯವನ್ನು ಗೆದ್ದರು 18 ಅಂಕಗಳಾಗಲಿದ್ದು, ಟಾಪ್‌ 2 ರಲ್ಲಿ ಸ್ಥಾನ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.

17ನೇ ಓವರ್‌ನ ಮೂರನೇ ಎಸೆತದಲ್ಲಿ ಆರ್‌ಸಿಬಿ ವೇಗದ ಬೌಲರ್ ಲುಂಗಿ ಎನ್‌ಗಿಡಿ ಸಿಎಸ್‌ಕೆ ಬ್ಯಾಟರ್ ಡೆವಾಲ್ಡ್ ಬ್ರೆವಿಸ್‌ರನ್ನು ವಿಕೆಟ್ ಮುಂದೆ ಟ್ರ್ಯಾಪ್ ಮಾಡಿದರು. ಆಗ ಅಂಪೈರ್ ತಕ್ಷಣವೇ ಎಲ್‌ಬಿಡಬ್ಲ್ಯೂ ಔಟ್ ಎಂದು ತೀರ್ಮಾನಿಸಿದರು. ಆದರೆ, ಮೈದಾನದ ದೊಡ್ಡ ಪರದೆಯಲ್ಲಿ ಡಿಆರ್‌ಎಸ್ ಗಡಿಯಾರ ಕಾಣಿಸದ ಕಾರಣ, ಬ್ರೆವಿಸ್ ಎರಡು ರನ್‌ಗಾಗಿ ಓಡಲು ಯತ್ನಿಸಿದರು. ಆದರೆ, ಅಂಪೈರ್ ಅವರಿಗೆ ಔಟ್ ಆಗಿರುವುದನ್ನು ತಿಳಿಸಿದಾಗ, ಬ್ರೆವಿಸ್ ಡಿಆರ್‌ಎಸ್ ಮೂಲಕ ತೀರ್ಮಾನವನ್ನು ಪರಿಶೀಲಿಸಲು ಒತ್ತಾಯಿಸಿದರು. ಆದರೆ, ಈ ಸಂದರ್ಭದಲ್ಲಿ ಡಿಆರ್‌ಎಸ್ ಕರೆಗೆ ನಿಗದಿಯಾದ 15 ಸೆಕೆಂಡ್‌ಗಳ ಸಮಯ ಮುಗಿದಿತ್ತು. ಇದರಿಂದಾಗಿ, ಬ್ರೆವಿಸ್ ಗೋಲ್ಡನ್ ಡಕ್‌ನೊಂದಿಗೆ ಪೆವಿಲಿಯನ್‌ಗೆ ಮರಳಬೇಕಾಯಿತು.

17 ವರ್ಷಗಳ ನಂತರ ಆರ್.ಸಿ.ಬಿ ತಂಡ ಚೆನ್ನೈ ವಿರುದ್ಧ ಎರಡು ಪಂದ್ಯಗಳನ್ನು ಗೆದ್ದು ಇತಿಹಾಸ ಸೃಷ್ಟಿಸಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ