Solve labor problems at factory level: Minister Santosh Lad

ಕಾರ್ಮಿಕರ ಸಮಸ್ಯೆಗಳನ್ನು ಕಾರ್ಖಾನೆಯ ಮಟ್ಟದಲ್ಲೇ ಪರಿಹರಿಸಿ: ಸಚಿವ ಸಂತೋಷ್‌ ಲಾಡ್‌

ಕಾರ್ಮಿಕರ ಸಮಸ್ಯೆಗಳನ್ನು ಕಾರ್ಖಾನೆಯ ಮಟ್ಟದಲ್ಲೇ ಪರಿಹರಿಸಿ: ಸಚಿವ ಸಂತೋಷ್‌ ಲಾಡ್‌

ಬೆಂಗಳೂರು: ಕಲಬುರಗಿ ಜಿಲ್ಲೆಯ ಮುಳಖೇಡದಲ್ಲಿರುವ ರಾಜಶ್ರೀ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ವಿಕಾಸಸೌಧದಲ್ಲಿ ಇಂದು ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಸಚಿವರು, ಕಾರ್ಖಾನೆಯ ನೌಕರರ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಬೇಕು. ಬೆಂಗಳೂರಿನವರೆಗೂ ಸಮಸ್ಯೆಗಳನ್ನು ತರಬಾರದು. ಒಂದೇ ಕಡೆ ಕೆಲಸ ಮಾಡುವವರು ಒಂದು ಕುಟುಂಬದಂತೆ ಇರಬೇಕು ಎಂದು ಸಲಹೆ ನೀಡಿದರು.

ಮ್ಯಾನೇಜ್‌ಮೆಂಟ್‌ ಕಾರ್ಮಿಕರ ಸಮಸ್ಯೆಗಳ ಬಗ್ಗೆ ತಿಳಿಯದೇ ಇದ್ದರೆ ಕೇಳದೇ ಇದ್ದರೆ ಅವುಗಳು ಹೆಚ್ಚಾಗುತ್ತವೆ. ಸಮಸ್ಯೆಗಳನ್ನು ಅಲ್ಲಿಯೇ ಪರಿಹರಿಸಿಕೊಳ್ಳಬೇಕು. ನೌಕರರ ಸಮಸ್ಯೆಗಳನ್ನು ಮಾನವೀಯತೆಯಿಂದ ಬಗೆಹರಿಸಿಕೊಳ್ಳಬೇಕು. ಪ್ರೀತಿ ಮತ್ತು ಕಾಳಜಿಯಿಂದ ನೌಕರರನ್ನು ನೋಡಿ. ಆಗ ಅವರೂ ದಕ್ಷತೆಯಿಂದ, ಬದ್ಧತೆಯಿಂದ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಕಾರ್ಮಿಕರಿಲ್ಲರೆ ಕಾರ್ಖಾನೆ ಇಲ್ಲ. ಹಾಗೇಯೇ ಕಾರ್ಖಾನೆಗೆ ಕಾರ್ಮಿಕರೇ ಜೀವಾಳ. ಕಾರ್ಮಿಕರ ಸಮಸ್ಯೆ ಹೊತ್ತುಕೊಂಡು ಇಲ್ಲಿವರೆಗೆ ಬರುವುದಕ್ಕಿಂತ ಅಲ್ಲೇ ಪರಿಹರಿಸಿಕೊಳ್ಳಿ. ಆದ್ದರಿಂದ ಕಾರ್ಮಿಕರ ಬಗ್ಗೆ ಕಾಳಜಿ ತೋರಿ ಗೌರವ ಕೊಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಇನ್ನು ಮುಂದೆ ಸಮಸ್ಯೆ ಹೊತ್ತುಕೊಂಡು ನನ್ನ ಬಳಿ ಬರಬೇಡಿ ಎಂದರು.

ಈ ವೇಳೆ ನೌಕರರು ತಮಗೆ ವೈದ್ಯಕೀಯ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವಂತೆ ಸಚಿವರಲ್ಲಿ ಮನವಿ ಮಾಡಿದರು. ಇವುಗಳ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಲಾಡ್‌ ಅವರು ಭರವಸೆ ನೀಡಿದರು.

ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಗೋಪಾಲಕೃಷ್ಣ, ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್, ಕಾರ್ಖಾನೆಗಳು ಮತ್ತು ಬಾಯ್ಲರ್ ಇಲಾಖೆಯ ನಿರ್ದೇಶಕ ಶ್ರೀನಿವಾಸ್, ಶ್ರೀ ರಾಥೋಡ್, ಉಪ ನಿರ್ದೇಶಕರಾದ ಶ್ರೀ ನಂಜಪ್ಪ, ಕೇಂದ್ರ ಕಾರ್ಮಿಕ ಇಲಾಖೆಯ ಉಪ ಆಯುಕ್ತರು ಮತ್ತು ಕೇಂದ್ರ ಕಾರ್ಮಿಕ ಇಲಾಖೆಯ ಸಹಾಯ ಕಾರ್ಮಿಕ ಆಯುಕ್ತರು, ರಾಜಶ್ರೀ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಮ್ಯಾನೇಜರ್ ನಾರಾಯಣ್, ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು, ಕಾರ್ಖಾನೆಯ ನೌಕರರು ಪಾಲ್ಗೊಂಡಿದ್ದರು.

Latest News

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ ಕಾಲೇಜಿಗೆ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಅದಿತಿ ಸವಣೂರ ಆಯ್ಕೆಯಾಗಿದ್ದು ಸಂಸ್ಥೆಗೆ ಹೆಮ್ಮೆ ತಂದಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ್ ತಿಳಿಸಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿನಿಯ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ಸಂಸ್ಥೆಯಿoದ