Horrible accident near Nalatwad: Bike rider died on the spot

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್ ಬಳಿ ಇಂದು ಸಂಜೆ ನಡೆದಿದೆ. ನಾರಾಯಣಪುರದಿಂದ ಮುದ್ದೇಬಿಹಾಳ ಕಡೆಗೆ ಸಾಗುತ್ತಿದ್ದ ಸರಕಾರಿ ಬಸ್ ಗೆ ಬುಧವಾರ ಸಂಜೆ ಬೈಕ್ ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮೃತ ವ್ಯಕ್ತಿಯನ್ನು ನಾಲತವಾಡ ಪಟ್ಟಣದ 5ನೇ ವಾರ್ಡಿನ ನಿವಾಸಿ ಸಂಗಪ್ಪ ಬಸಪ್ಪ ಗೌಡೂರ (28) ಎಂದು ಗುರುತಿಸಲಾಗಿದೆ. ಸ್ಥಳೀಯ ಪ.ಪಂಯಲ್ಲಿ ಪೌರ ಕಾರ್ಮಿಕನಾಗಿ ಸೇವೆ ಸಲ್ಲಿಸುತ್ತಿದ್ದ ಅವರು, ಪರಿಚಯದ ಮಹಿಳೆಯೊಂದಿಗೆ ಬೈಕ್‌ನಲ್ಲಿ ಆರೇಶಂಕರ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಆರೇಶಂಕರ ಕ್ರಾಸ್ ಹತ್ತಿರ, ಮುಂಭಾಗದಿಂದ ಬಂದ ಬಸ್ ಹಠಾತ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಸಂಗಪ್ಪ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿ ಜೊತೆಗಿದ್ದ ಮಹಿಳೆಗೆ ಲಘು ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಪೊಲೀಸರು ಮುದ್ದೇಬಿಹಾಳ ಪಿಎಸ್ಐ ಸಂಜೀವ ತಿಪ್ಪಾರಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಪರಿಣಾಮ ಗ್ರಾಮದಲ್ಲಿ ಶೋಕವಾತಾವರಣ ಮನೆಮಾಡಿದೆ.

ಸೋಮವಾರ ಎರಡು ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದರು. ಇದಾದ ಮೇಲೆ ಬುಧವಾರ ಮತ್ತೇ ಈ ಅಪಘಾತ ನಡೆದಿದೆ. ಎರಡು ದಿನಗಳಲ್ಲಿ ನಾಲತವಾಡ ಗ್ರಾಮದ ಮೂರು ಜನರು ದುರ್ಮಣಕ್ಕೆ ಈಡಾಗಿದ್ದಾರೆ.

ವರದಿ : ಶಿವು ರಾಠೋಡ

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ