Minister Santosh Lad demands ban on IPL match

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಬೆಂಗಳೂರು: ಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ ದಾಳಿ ನಡೆಸುವ ಸಾಧ್ಯತೆಗಳಿರುವುದರಿಂದ ಆಟಗಾರರು ಮತ್ತು ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್ ಪಂದ್ಯಗಳನ್ನು ‌ತಕ್ಷಣದಿಂದಲೇ ನಿಷೇಧಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಆಗ್ರಹಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಮೇಲೆ ಆಪರೇಷನ್‌ ಸಿಂಧೂರ ಹೆಸರಿನ ಕಾರ್ಯಾಚರಣೆ ನಡೆಸಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ದಾಳಿ ನಡೆಸುತ್ತಿದೆ. ಇದರಿಂದ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ಇದೆ. ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್‌ ಪಂದ್ಯಗಳನ್ನು ನಿಲ್ಲಿಸಬೇಕು ಎಂದು ಅವರು ಹೇಳಿದ್ದಾರೆ.

ಆಪರೇಷನ್‌ ಸಿಂಧೂರ ನಂತರ ಕೆಲವು ಐಪಿಎಲ್‌ ಪಂದ್ಯಗಳನ್ನು ಸ್ಥಳಾಂತರ ಮಾಡಲಾಗಿದೆ. ಇದೀಗ ಎಲ್ಲಾ ಪಂದ್ಯಗಳನ್ನು ಸ್ಥಗಿತಗೊಳಿಸಿದರೆ ಒಳ್ಳೆಯದು. ಕ್ರಿಕೆಟ್‌ ವೀಕ್ಷಿಸಲು ಸಾಕಷ್ಟು ಜನರು ಬರುತ್ತಾರೆ. ಆದ್ದರಿಂದ ಬಿಸಿಸಿಐ ಇನ್ನು ಮುಂದಿನ ಎಲ್ಲಾ ಪಂದ್ಯಗಳನ್ನು ನಿಲ್ಲಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಬಿಸಿಸಿಐ ಗೆ ಸೂಚನೆ ನೀಡಬೇಕು ಎಂದು ಲಾಡ್‌ ಅವರು ತಿಳಿಸಿದ್ದಾರೆ.

Latest News

ಬೆಣ್ಣಿಹಳ್ಳ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕಾಮಗಾರಿಗೆ ಆರಂಭಿಕ ರೂ. 200 ಕೋಟಿ ಅನುದಾನ ಬಿಡುಗಡೆ

ಬೆಣ್ಣಿಹಳ್ಳ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕಾಮಗಾರಿಗೆ ಆರಂಭಿಕ ರೂ. 200 ಕೋಟಿ ಅನುದಾನ ಬಿಡುಗಡೆ

ಧಾರವಾಡ, ಮೇ.28: ಧಾರವಾಡ ಜಿಲ್ಲೆಯ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ

ಬೇಡಿಕೆ ಈಡೇರಿಕೆಗೆ ಆಗ್ರಹ ಪೌರ ಕಾರ್ಮಿಕರಿಂದ ಕೆಲಸ ಸ್ಥಗಿತ

ಬೇಡಿಕೆ ಈಡೇರಿಕೆಗೆ ಆಗ್ರಹ ಪೌರ ಕಾರ್ಮಿಕರಿಂದ ಕೆಲಸ ಸ್ಥಗಿತ

ಮುದ್ದೇಬಿಹಾಳ : ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು. ಹೊರಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು

ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ

ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ

ಹುಣಸಗಿ : ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಕರ್ನಾಟಕ ರಾಜ್ಯ ನೌಕರರ ಸಂಘ

ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ ಮಂಡಳಿ ಅಸ್ತಿತ್ವಕ್ಕೆ

ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ ಮಂಡಳಿ ಅಸ್ತಿತ್ವಕ್ಕೆ

ಬೆಂಗಳೂರು ಮೇ, 27: ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ

ಸಂಚಾರಿ ಆರೋಗ್ಯ ಘಟಕಗಳಿಗೆ ಸಚಿವ ಸಂತೋಷ್‌ ಲಾಡ್‌ ಚಾಲನೆ

ಸಂಚಾರಿ ಆರೋಗ್ಯ ಘಟಕಗಳಿಗೆ ಸಚಿವ ಸಂತೋಷ್‌ ಲಾಡ್‌ ಚಾಲನೆ

ಧಾರವಾಡ, ಮೇ 27: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಸಂಚಾರಿ ಆರೋಗ್ಯ ಘಟಕಗಳಿಗೆ ಧಾರವಾಡದ ಸರ್ಕಿಟ್‌ ಹೌಸ್‌ನಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕಟ್ಟಡ ಕಾರ್ಮಿಕರ ಆರೋಗ್ಯ, ಸುರಕ್ಷತೆ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ಪ್ರತಿ

ಛಲವಾದಿ ಅವರನ್ನು ಗಡಿಪಾರು ಮಾಡಿ: ಶಾಂತ ಕುಮಾರ ಎಮ್ ಕಟ್ಟಿಮನಿ ಆಗ್ರಹ

ಛಲವಾದಿ ಅವರನ್ನು ಗಡಿಪಾರು ಮಾಡಿ: ಶಾಂತ ಕುಮಾರ ಎಮ್ ಕಟ್ಟಿಮನಿ ಆಗ್ರಹ

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವಾಚ್ಯ ಶಬ್ದದಿಂದ ನಿಂದನೆ ಮಾಡಿದ್ದಾರೆ. ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದು ಮಾಡಿ ಬಂಧಿಸಿ ಗಡಿಪಾರು ಮಾಡಬೇಕೆಂದು ಕಾಂಗ್ರೆಸ್ ಮುಖಂಡರಾದ ಶಾಂತ ಕುಮಾರ ಎಮ್ ಕಟ್ಟಿಮನಿ ಆಗ್ರಹಿಸಿದರು. ನಾರಾಯಣಸ್ವಾಮಿ ಕ್ಷಮೆ ಕೇಳಿದರೆ ಸಾಲದು. ಯಾವುದೇ ಕಾರ್ಯಕ್ರಮಕ್ಕೆ ಹೋದರೆ ಕಪ್ಪು ಬಾವುಟ ಪ್ರದರ್ಶನ ಮಾಡಬೇಕಾಗುತ್ತದೆ. ಛಲವಾದಿ ಬಿಜೆಪಿ ರಾಷ್ಟ್ರೀಯ ನಾಯಕರಿಗೆ, ಹೈಕಮಾಂಡ್ ಮೆಚ್ಚಿಸಲು ಖರ್ಗೆ