The ongoing IPL match in Dharamsala has been cancelled

ಧರ್ಮಶಾಲಾದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯ ರದ್ದು

ಧರ್ಮಶಾಲಾದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯ ರದ್ದು

ಧರ್ಮಶಾಲಾ: ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ರದ್ದು ಮಾಡಲಾಗಿದೆ. ಪಂಜಾಬ್ ತಂಡ ಬ್ಯಾಟಿಂಗ್‌ ಮಾಡುತ್ತಿದ್ದ ವೇಳೆ 9 ಗಂಟೆ 29 ನಿಮಿಷಕ್ಕೆ ಮೈದಾನದ ದೀಪಗಳನ್ನು ಆಫ್ ಮಾಡಲಾಯಿತು. ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಮೈದಾನದಲ್ಲಿದ್ದ ಆಟಗಾರರು ಪೆವಿಲಿಯನ್ ನತ್ತ ಧಾವಿಸಿದರೆ, ಪ್ರೇಕ್ಷಕರು ಮೈದಾನದಿಂದ ನಿರ್ಗಮಿಸುತ್ತಿದ್ದಾರೆ. ಪಂದ್ಯ ರದ್ದಾದ ವಿಷಯವನ್ನು ಐಪಿಎಲ್ ಅಧ್ಯಕ್ಷರಾದ ಅರುಣ್ ಧುಮಾಲ್ ಅವರೇ ಖಚಿತಪಡಿಸಿದ್ದಾರೆ.

ಪಂಜಾಬ್ ಮತ್ತು ಡೆಲ್ಲಿ ನಡುವಿನ ಪಂದ್ಯ ರದ್ದಾದ ಕಾರಣ ಈಗ ಎರಡೂ ತಂಡಗಳಿಗೆ ತಲಾ ಒಂದು ಅಂಕವನ್ನು ನೀಡಲಾಗಿದೆ. ಜನರು ಮತ್ತು ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ಎಲ್ಲಾ ಐಪಿಎಲ್ ಪಂದ್ಯಗಳನ್ನು ಸಹ ಮುಂದೂಡುವ ಸಾಧ್ಯತೆಗಳಿವೆ.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ