Gali Janardhan Reddy's MLA canceled

ಗಾಲಿ ಜನಾರ್ಧನ್ ರೆಡ್ಡಿ ಶಾಸಕತ್ವ ರದ್ದು

ಗಾಲಿ ಜನಾರ್ಧನ್ ರೆಡ್ಡಿ ಶಾಸಕತ್ವ ರದ್ದು

ಬೆಂಗಳೂರು: ಗಂಗಾವತಿ ಶಾಸಕರಾದ ಗಾಲಿ ಜನಾರ್ಧನ್ ರೆಡ್ಡಿ ಅವರ ಶಾಸಕತ್ವವನ್ನು ರದ್ದುಗೊಳಿಸಲಾಗಿದೆ. ಓಬಳಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್​​ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಚಂಚಲಗೂಡ ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಮತ್ತೊಂದು ಆಘಾತವಾಗಿದೆ.

ಏಳು ವರ್ಷ ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹರಗೊಂಡಿದ್ದಾರೆ. ಈ ಮೂಲಕ ಸಿಬಿಐ ಸ್ಪೆಷಲ್ ಕೋರ್ಟ್ ನಿಂದ ಶಿಕ್ಷೆಗೆ ಒಳಗಾಗಿರುವಂತ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

ಶಾಸಕ ಸ್ಥಾನದಿಂದ ಜನಾರ್ಧನ ರೆಡ್ಡಿ ಮುಂದಿನ 6 ವರ್ಷಗಳ ಅವಧಿಗೆ ಅನರ್ಹಗೊಳಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಹಾಗೂ ಸಂಸದ 2 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Latest News

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಮಾರನಾಳ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮಾರನಾಳದಿಂದ ಶ್ರೀ ಘತ್ತರಗಿ ಭಾಗ್ಯವಂತಿಯವರೆಗೆ ಪಾದಯಾತ್ರೆಯನ್ನು

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ

ಕಾರ್ಮಿಕರ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸುರಕ್ಷಾ ಕಿಟ್ (ಗೌಂಡಿ, ಎಲೆಕ್ಟ್ರಿಷಿಯನ್, ಕಾರಪೇಂಟರ್ ವೆಲ್ಡಿಂಗ್, ಪ್ಲಂಬರ್, ಪೇಂಟರ್) ವಿತರಿಸಲು ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಯಿಂದ ನೋಂದಣಿಯಾದ ಫಲಾನುಭವಿಗಳಿಗೆ ಸುರಕ್ಷಾ ಕಿಟ್ ವಿತರಿಸಲಾಗುವುದು. ಫಲಾನುಭವಿಗಳು ಚಾಲ್ತಿಯಲ್ಲಿರುವ ಕಾರ್ಮಿಕ ಗುರುತಿನ ಚೀಟಿ, ಆಧಾರ್ ಕಾರ್ಡ, ಬ್ಯಾಂಕ್ ಪಾಸ್ ಪುಸ್ತಕ, ಫಲಾನುಭವಿಯ ಎರಡು ಭಾವಚಿತ್ರ ಹಾಗೂ ದ್ವಿಪ್ರತಿಗಳಲ್ಲಿ ಅ.24ರೊಳಗೆ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಬೆಂಗಳೂರು: ಋತುಚಕ್ರ ರಜೆ ನೀತಿ ಕುರಿತು, ಕಾರ್ಮಿಕ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾದ ಅಶೋಕ್‌ ಬಿ ಹಿಂಚಿಗೇರಿ ಅವರೊಂದಿಗೆ, ಚರ್ಚೆ ನಡೆಸಿದರು. ಸಚಿವರ ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ಈ ಭೇಟಿ ಮಾಡಲಾಯಿತು. ಋತುಚಕ್ರ ರಜೆ ನೀತಿಗೆ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ನೀತಿಯನ್ವಯ ಖಾಸಗಿ ಮತ್ತು ಸರ್ಕಾರ ವಲಯಗಳಲ್ಲಿ ದುಡಿಯುವ ಉದ್ಯೋಗಸ್ಥ ಮಹಿಳೆಯರು ತಿಂಗಳಲ್ಲಿ ಒಂದು ದಿನ