A laborer from Maharashtra, who had come to work as a laborer, was struck by lightning

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

ಮೃತಪಟ್ಟ ಕಾರ್ಮಿಕನನ್ನು ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆ ಜತ್ತ ತಾಲ್ಲೂಕು ಮಣಿಕನಾಳ ಗ್ರಾಮದ ಶ್ರೀಶೈಲ ರಾಮಲಿಂಗ ಮುಗಳಕೋಡ(35)ಎಂದು ಗುರುತಿಸಲಾಗಿದೆ.

ಜತ್ತ ತಾಲ್ಲೂಕಿನಿಂದ 20ಕ್ಕೂ ಹೆಚ್ಚು ಕಾರ್ಮಿಕರು ಕೇಸಾಪೂರ-ಆಲೂರು ಭಾಗದಲ್ಲಿ ನಡೆದಿರುವ ಕಾಲುವೆ ಮರುನವೀಕರಣ ಕೆಲಸಕ್ಕೆ ಬಂದಿದ್ದರು. ಮಂಗಳವಾರ ಮದ್ಯಾಹ್ನ ಏಕಾಏಕಿ ಆರಂಭವಾದ ಸಿಡಿಲು, ಗುಡುಗಿನಿಂದ ಮಳೆಯಿಂದ ಪಾರಾಗಲು ಯತ್ನಿಸಿದರೂ ಶ್ರೀಶೈಲ ಬದುಕುಳಿಯಲಿಲ್ಲ. ಆತನ ಜತೆಗಿದ್ದ ಮರ‍್ನಾಲ್ಕು ಮಹಿಳೆಯರು ಸಿಡಿಲಿನ ಹೊಡೆತದಿಂದ ಬಚಾವಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದರು. ಮೃತ ಶ್ರೀಶೈಲಗೆ ಒಂದು ಮಗು ಇದ್ದು ಪತ್ನಿ ಆರು ತಿಂಗಳ ಗರ್ಭಿಣಿ ಎಂದು ತಿಳಿದು ಬಂದಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ