Tribute to Soldiers' Families: May. Tiranga Yatra on 20th

ಸೈನಿಕರ ಕುಟುಂಬದವರಿಗೆ ಸನ್ಮಾನ: ಮೇ. 20 ರಂದು ತಿರಂಗಾ ಯಾತ್ರೆ

ಸೈನಿಕರ ಕುಟುಂಬದವರಿಗೆ ಸನ್ಮಾನ: ಮೇ. 20 ರಂದು ತಿರಂಗಾ ಯಾತ್ರೆ

ಮುದ್ದೇಬಿಹಾಳ : ಪೆಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಉಗ್ರರನ್ನು ಸದೆಬಡಿದ ಭಾರತೀಯ ಸೇನೆಯನ್ನು ಅಭಿನಂದಿಸಿ ವಿಜಯೋತ್ಸವವನ್ನು ಆಚರಿಸಲು ಮೇ.20 ರಂದು ಪಟ್ಟಣದಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಭಾರತೀಯ ಸೇನೆಯ ಪರಾಕ್ರಮವನ್ನು ಇಡೀ ವಿಶ್ವವೇ ನಿಬ್ಬೆರಗು ಕಣ್ಣುಗಳಿಂದ ನೋಡುತ್ತಿದೆ. ಆದರೆ, ಕಾಂಗ್ರೆಸ್ಸಿಗರಿಗೆ ಸೇನೆಯ ಮೇಲೆ ಪೂರ್ಣ ನಂಬಿಕೆ ಇಲ್ಲ. ಅದಕ್ಕಾಗಿಯೇ ಆ ಪಕ್ಷದ ನಾಯಕರು ಸೇನೆಯ ಕಾರ್ಯಾಚರಣೆಗೆ ಸಾಕ್ಷಿ ಕೇಳುವ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.

ಪ್ರಸ್ತುತ ಸೈನ್ಯದಲ್ಲಿ ಸೇವೆಯಲ್ಲಿರುವ ಸೈನಿಕರ ಕುಟುಂಬಸ್ಥರನ್ನು ಕರೆದು ಸನ್ಮಾನಿಸುವ ಕಾರ್ಯ ಮಾಡುತ್ತೇವೆ. ಮೇ.೨೦ ರಂದು ಸಂಜೆ 4ಕ್ಕೆ ಮುದ್ದೇಬಿಹಾಳದ ಸೈನಿಕ ಮೈದಾನದಿಂದ ಎಪಿಎಂಸಿಯಲ್ಲಿರುವ ಕರ್ನಾಟಕ ಬ್ಯಾಂಕ್ ಸಭಾಂಗಣದವರೆಗೆ ರ‍್ಯಾಲಿ ನಡೆಸಲಾಗುತ್ತದೆ. ಅಲ್ಲಿ ಸೈನಿಕರ ಕುಟುಂಬದವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಕೆಲವು ತಿಳಿವಳಿಕೆ ಇಲ್ಲದವರು ಸೇನೆಯ ಕಾರ್ಯಾಚರಣೆಯ ಕುರಿತು ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ. ಕೆಲವು ಕಾಂಗ್ರೆಸ್ ಸಚಿವರು, ಶಾಸಕರು ದೇಶದ ಭದ್ರತೆಯ ವಿಷಯದ ಕುರಿತು ಹಗುರವಾಗಿ ಮಾತನಾಡುತ್ತಿರುವುದು ನಾಚಿಗೇಡಿನ ಸಂಗತಿ ಎಂದರು.

ಕಾಂಗ್ರೆಸ್‌ನ್ನು ದೇಶದಲ್ಲಿ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಪ್ರಜೆಗಳು ಕಳೆದ 15 ವರ್ಷಗಳಿಂದ ತೀರ್ಪು ಕೊಟ್ಟಿದ್ದಾರೆ. ಯಾರು ದೇಶಪ್ರೇಮಿಗಳು ಯಾರು ಅಲ್ಲ ಎಂಬುದನ್ನು ತಿಳಿಸಿದ್ದಾರೆ. ರಕ್ಷಣಾ ಸಚಿವರು ಭಯೋತ್ಪಾದಕರು ಧರ್ಮ ಕೇಳಿ ನಮ್ಮವರನ್ನು ಹತ್ಯೆ ಮಾಡಿದ್ದಾರೆ. ಆದರೆ ಸೇನೆಯವರು ಭಯೋತ್ಪಾದಕರ ಕರ್ಮ ಕೇಳಿ ಅವರ ಎದೆ ಸೀಳುವ ಕೆಲಸ ಮಾಡಿದ್ದಾರೆ. ಇಂತಹ ವಿಚಾರಗಳ ಬಗ್ಗೆ ಎಚ್ಚರದಿಂದ ಮಾತನಾಡಬೇಕು ಎಂದು ಹೇಳಿದರು.

ದೇಶದ ಸೈನ್ಯದ ಕಾರ್ಯಾಚರಣೆಗೆ ಬೆಂಬಲ ಹಾಗೂ ವಿಜಯೋತ್ಸವವಕ್ಕೆ ಪಕ್ಷಾತೀತವಾಗಿ ತಿರಂಗಾಯಾತ್ರೆ ನಡೆಸಲಾಗುತ್ತದೆ. ನಾಗರಿಕ ಸಮಾಜದ ಎಲ್ಲ ಸಂಘಸಂಸ್ಥೆಗಳು ಪಾಲ್ಗೊಳ್ಳಬೇಕು ಎಂದು ವಿನಂತಿಸವುದಾಗಿ ತಿಳಿಸಿದರು.

ವೈದ್ಯಕೀಯ ಪ್ರಕೋಷ್ಠದ ಡಾ. ಸಿ. ಕೆ. ಶಿವಯೋಗಿಮಠ, ಮಾಜಿ ಸೈನಿಕ ಎಸ್. ಕೆ. ಕಟ್ಟಿ, ಲಯನ್ಸ್ ಕ್ಲಬ್‌ನ ಅಧ್ಯಕ್ಷ ರಾವಸಾಹೇಬ ದೇಸಾಯಿ ಮಾತನಾಡಿದರು. ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಡಾ.ವೀರೇಶ ಪಾಟೀಲ, ಸಂಜೀವ ಬಾಗೇವಾಡಿ, ವಿಜಯಕುಮಾರ ಬಡಿಗೇರ, ಬಿಜೆಪಿ ಮುಖಂಡರು, ವಿವಿಧ ಸಂಘ ಸಂಸ್ಥೆಯ ಪ್ರಮುಖರು ಇದ್ದರು.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.