Allegation of insulting women's commission chairperson Chaudhary: Lawyer Jagadish's tongue will be cut-Basarakoda

ಮಹಿಳಾ ಆಯೋಗದ ಅಧ್ಯಕ್ಷೆ ಚೌಧರಿಗೆ ಅವಹೇಳನ ಆರೋಪ: ವಕೀಲ ಜಗದೀಶನ ನಾಲಿಗೆ ಕಟ್ ಮಾಡುವೆವು-ಬಸರಕೋಡ

ಮಹಿಳಾ ಆಯೋಗದ ಅಧ್ಯಕ್ಷೆ ಚೌಧರಿಗೆ ಅವಹೇಳನ ಆರೋಪ: ವಕೀಲ ಜಗದೀಶನ ನಾಲಿಗೆ ಕಟ್ ಮಾಡುವೆವು-ಬಸರಕೋಡ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ನಾಗಲಕ್ಷ್ಮಿ ಚೌಧರಿ ಮಹಿಳೆಯರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುತ್ತಿದ್ದು ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ವಕೀಲ ಜಗದೀಶನ ನಾಲಿಗೆ ಕಟ್ ಮಾಡುವೆವು ಎಂದು ನಾಗಲಕ್ಷ್ಮಿ ಚೌಧರಿ ಅಭಿಮಾನಿ ಬಳಗದ ಸದಸ್ಯೆ ಶಿವಲೀಲಾ ಬಸರಕೋಡ ಎಚ್ಚರಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರ ಹಕ್ಕುಗಳ ಕುರಿತು ಜಾಗೃತಿ ಮೂಡಿಸುತ್ತಾ ಸಮಾಜದಲ್ಲಿ ಮಹಿಳೆಯರು ನಾಲ್ಕು ಗೋಡೆಗಳನ್ನು ಬಿಟ್ಟು ಹೊರ ಬಂದು ದುಡಿಯುವುದಕ್ಕೆ ಧೈರ್ಯ ತುಂಬುತ್ತಿದ್ದಾರೆ. ಆದರೆ ಇಂತಹ ದಿಟ್ಟ ಹೋರಾಟಗಾರ್ತಿಯ ಕುರಿತು ವಕೀಲ ವೃತ್ತಿಯಲ್ಲಿದ್ದುಕೊಂಡು ಕೀಳುಮಟ್ಟದಲ್ಲಿ ಮಾತನಾಡಿರುವುದು ಶೋಭೆ ತರುವುದಿಲ್ಲ ಎಂದು ಹೇಳಿದರು.

ಮಾದಿಗ ಮೀಸಲಾತಿ ಹೋರಾಟ ಸಮೀತಿ ತಾಲ್ಲೂಕು ಅಧ್ಯಕ್ಷ ತಿಪ್ಪಣ್ಣ ದೊಡಮನಿ, ಅಭಿಮಾನಿ ಬಳಗದ ಮುಖಂಡ ಮುತ್ತು ಟಕ್ಕಳಕಿ ಮಾತನಾಡಿ, ವಕೀಲ ಜಗದೀಶ ಇದೇ ರೀತಿ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡುವುದು ಮುಂದುವರೆಸಿದ್ದಲ್ಲಿ ಅವರ ಮನೆಗೆ ಮುತ್ತಿಗೆ ಹಾಕುವುದಕ್ಕು ಹಿಂಜರಿಯುವುದಿಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಲಲಿತಾ ಮುರಾಳ, ಮಾಳಿಂಗರಾಯ ಯರಝರಿ, ಹಣಮಗೌಡ ಗೌಡರ,ರೇಣುಕಾ ಚಲವಾದಿ, ಭವ್ಯ ಹಿಪ್ಪರಗಿ, ಲಕ್ಷ್ಮಿಬಾಯಿ ಇಂಗಳಗೇರಿ, ರಿಜಾದ ನದಾಫ, ಗೌರಮ್ಮ ಭೋವಿ, ಲೋಕೇಶ ಹಾವರಗಿ, ನಿಂಗು ಬಂಡೆಪ್ಪನಹಳ್ಳಿ, ಅನೀಲ ವಾಲೀಕಾರ ಇದ್ದರು.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ