Dharamsabha in Jattagi, mass marriage: Mass marriages are a model for society

ಜಟ್ಟಗಿಯಲ್ಲಿ ಧರ್ಮಸಭೆ, ಸಾಮೂಹಿಕ ವಿವಾಹ: ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ

ಜಟ್ಟಗಿಯಲ್ಲಿ ಧರ್ಮಸಭೆ, ಸಾಮೂಹಿಕ ವಿವಾಹ: ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ

ಮುದ್ದೇಬಿಹಾಳ : ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿಯಾಗಿದ್ದು ಉಳ್ಳವರು ತಮ್ಮ ಮಕ್ಕಳ ಮದುವೆಗಳಲ್ಲಿ ಬಡವರ ಮದುವೆಗಳನ್ನು ಮಾಡಿಕೊಡುವ ಸಂಪ್ರದಾಯ ಆಚರಣೆಯಲ್ಲಿ ತರಬೇಕು ಎಂದು ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಸ್ವಾಮೀಜಿ ಹೇಳಿದರು.

ತಾಲ್ಲೂಕು ಜಟ್ಟಗಿಯ ಬೆಳ್ಳೇಶ್ವರ ಜಾತ್ರೋತ್ಸವದ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಲವು ವರ್ಷಗಳಿಂದ ಜಟ್ಟಗಿ ಬೆಳ್ಳೇಶ್ವರ ಜಾತ್ರಾ ಮಹೋತ್ಸವದಲ್ಲಿ ಗ್ರಾಮಸ್ಥರೆ ದೇಣಿಗೆ ಸಂಗ್ರಹಿಸಿ ಇಂತಹ ಧಾರ್ಮಿಕ ಕಾರ್ಯ ನಡೆಸುತ್ತಿರುವುದು ಸಮಾಜದಲ್ಲಿರುವ ಉಳ್ಳವರಿಗೆ ಮಾದರಿಯಾಗಿದೆ ಎಂದರು.

ಜಾತ್ರಾ ಕಮೀಟಿ ಅಧ್ಯಕ್ಷ ಬಿ.ಕೆ.ಬಿರಾದಾರ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ ಮಾತನಾಡಿ, ನಾವು ಮಾಡುವ ಜಾತ್ರೆಗಳು ಮತ್ತೊಬ್ಬರಿಗೆ ಭಾರವಾಗದಂತೆ ಇರಬೇಕು. ಬಡವರಿಗೆ ಅನುಕೂಲ ಕಲ್ಪಿಸುವ ಕಾರ್ಯಕ್ರಮಗಳನ್ನು ಜಾತ್ರೆಯ ಕಾರ್ಯಕ್ರಮಗಳಲ್ಲಿ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಸಿ.ಎಸ್.ನಾಡಗೌಡ, ಗೊಳಸಾರಮಠದ ಅಭಿನವ ಪುಂಡಲೀಕ ಸ್ವಾಮೀಜಿ, ಸೀತಿಮನಿಯ ವೈಶಿಷ್ಟ ಸ್ವಾಮೀಜಿ, ಜಟ್ಟಗಿಯ ಸೋಮಲಿಂಗ ಸ್ವಾಮೀಜಿ, ಬಾಗಲಕೋಟೆ ಶಾಸಕ ಎಚ್.ವಾಯ್.ಮೇಟಿ, ಹುಲ್ಲೂರು ಗ್ರಾಪಂ ಅಧ್ಯಕ್ಷೆ ನೈನಾ ಚವ್ಹಾಣ, ಮಾಜಿ ಅಧ್ಯಕ್ಷ ಹಣಮಂತಗೌಡ ಬಿರಾದಾರ, ಗ್ರಾಪಂ ಮಾಜಿ ಅಧ್ಯಕ್ಷೆ ಚೆನ್ನಮ್ಮ ಗೌಡರ, ಗ್ರಾಪಂ ಸದಸ್ಯರಾದ ಭೀಮಪ್ಪ ಮಾದರ, ಶಿವಾನಂದ ಲಮಾಣಿ, ವಾಯ್. ಎಚ್. ವಿಜಯಕರ್, ಬಿ. ಎಚ್. ಶಿರೋಳ, ಕಿರಣ ಮದರಿ, ವಾಯ್. ಕೆ. ಹಳೇಮನಿ, ಎಂ. ಎಚ್. ಚನ್ನಿ ಮೊದಲಾದವರು ಇದ್ದರು. ಸಾಮೂಹಿಕ ವಿವಾಹದಲ್ಲಿ ಐದು ಜೋಡಿಗಳು ನವಜೀವನಕ್ಕೆ ಕಾಲಿರಿಸಿದರು.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ