Exile Chhalavadi: Shanta Kumar M Kattimani demand

ಛಲವಾದಿ ಅವರನ್ನು ಗಡಿಪಾರು ಮಾಡಿ: ಶಾಂತ ಕುಮಾರ ಎಮ್ ಕಟ್ಟಿಮನಿ ಆಗ್ರಹ

ಛಲವಾದಿ ಅವರನ್ನು ಗಡಿಪಾರು ಮಾಡಿ: ಶಾಂತ ಕುಮಾರ ಎಮ್ ಕಟ್ಟಿಮನಿ ಆಗ್ರಹ

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವಾಚ್ಯ ಶಬ್ದದಿಂದ ನಿಂದನೆ ಮಾಡಿದ್ದಾರೆ. ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದು ಮಾಡಿ ಬಂಧಿಸಿ ಗಡಿಪಾರು ಮಾಡಬೇಕೆಂದು ಕಾಂಗ್ರೆಸ್ ಮುಖಂಡರಾದ ಶಾಂತ ಕುಮಾರ ಎಮ್ ಕಟ್ಟಿಮನಿ ಆಗ್ರಹಿಸಿದರು.

ನಾರಾಯಣಸ್ವಾಮಿ ಕ್ಷಮೆ ಕೇಳಿದರೆ ಸಾಲದು. ಯಾವುದೇ ಕಾರ್ಯಕ್ರಮಕ್ಕೆ ಹೋದರೆ ಕಪ್ಪು ಬಾವುಟ ಪ್ರದರ್ಶನ ಮಾಡಬೇಕಾಗುತ್ತದೆ. ಛಲವಾದಿ ಬಿಜೆಪಿ ರಾಷ್ಟ್ರೀಯ ನಾಯಕರಿಗೆ, ಹೈಕಮಾಂಡ್ ಮೆಚ್ಚಿಸಲು ಖರ್ಗೆ ಕುಟುಂಬದ ಬಗ್ಗೆ ಇಲ್ಲ ಸಲ್ಲದ ಕೀಳುಮಟ್ಟದ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಛಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ ಪಕ್ಷದಲ್ಲಿ ಬಂದಾಗ ಮುಂಚಿತ ಇದ್ದ ದಲಿತರನ್ನೇ ಬದಿಗಿಟ್ಟು ಈಗ ತಮ್ಮ ಸ್ವಾರ್ಥಕ್ಕಾಗಿ ತಾವೇ ವಿಧಾನಪರಿಷತ್ ಸದಸ್ಯರಾಗಿದ್ದೀರಿ ಇದು ದಲಿತರಿಗೆ ಮಾಡಿರು ಅನ್ಯಾಯ ಅಲ್ವ ಎಂದು ಅವರು ಪ್ರಶ್ನಿಸಿದರು?. ತನ್ನ ನೀಚ ಬುದ್ದಿ ಕರ್ನಾಟಕ ಜನತೆಗೆ ಗೊತ್ತಿಲ್ವಾ ಮತ್ತು ಬಿಜೆಪಿಯ ಸರ್ವ ಮುಖಂಡರು ಮಾಡುತ್ತಿರುವ ಕುತಂತ್ರವನ್ನು ಎಳೆ ಎಳೆಯಾಗಿ ಬಿಚ್ಚಿಡುತ್ತಿರುವ ಡೈನಾಮಿಕ್ ಲೀಡರ್ ನಾಯಕರಾಗಿ ಅವರನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ . ಕಲ್ಬುರ್ಗಿ ಜಿಲ್ಲೆಗೆ ವಿಶೇಷವಾಗಿ ಅಭಿವೃದ್ಧಿ ಆಗುತ್ತಿರುವುದನ್ನು ಹಾಗೂ ಉದ್ಯೋಗ ಮೇಳ ಹೀಗೆ ಹತ್ತು ಹಲವಾರು ಯೋಜನೆಗಳನ್ನು ಮಾಡುತ್ತಿರುವುದನ್ನು ಇವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಅವರು ಆರೋಪಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರ ಜನಪ್ರಿಯತೆ ಕುಗ್ಗಿಸುವ ಬಿಜೆಪಿ ಹಾಗೂ ಆರ್‌ಎಸ್‌ಎಸ್ ತಂತ್ರ ಫಲಿಸದು ಎಂದು ಅವರು ಹೇಳಿದ್ದಾರೆ. ಖರ್ಗೆ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮೂಲಕ ವೈಯಕ್ತಿಕ ದಾಳಿಗಿಳಿದಿವೆ. ಆದರೆ, ಜನಪರ ಕಾಳಜಿಯುಳ್ಳ ಸಚಿವ ಹಾಗೂ ಡೈನಾಮಿಕ್ ನಾಯಕರೊಬ್ಬರನ್ನು ತೇಜೋವಧೆ ಮಾಡುತ್ತಿರುವ ಬಿಜೆಪಿಯ ಕುತಂತ್ರ ಇದಾಗಿದೆ ಎಂದು ಹರಿಹಾಯ್ದಿದ್ದಾರೆ.

ವರದಿಗಾರ : ಶಿವು ರಾಠೋಡ

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ