Work stoppage by civil workers demanding fulfillment of demand

ಬೇಡಿಕೆ ಈಡೇರಿಕೆಗೆ ಆಗ್ರಹ ಪೌರ ಕಾರ್ಮಿಕರಿಂದ ಕೆಲಸ ಸ್ಥಗಿತ

ಬೇಡಿಕೆ ಈಡೇರಿಕೆಗೆ ಆಗ್ರಹ ಪೌರ ಕಾರ್ಮಿಕರಿಂದ ಕೆಲಸ ಸ್ಥಗಿತ

ಮುದ್ದೇಬಿಹಾಳ : ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು. ಹೊರಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಖಾಯಂ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ಪೌರಕಾರ್ಮಿಕರ ಸಂಘದ ವತಿಯಿಂದ ಇಲ್ಲಿನ ಪೌರಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಪುರಸಭೆ ಎದುರಿಗೆ ಬುಧವಾರದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.

ಸಂಘದ ಉಪಾಧ್ಯಕ್ಷ ರಾಮು ಹಂಗರಗಿ ಮಾತನಾಡಿ, ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು ಹಾಗೂ ಕೆ.ಜಿ.ಐ.ಡಿ., ಜಿ.ಪಿ.ಎಫ್., ಜ್ಯೋತಿ ಸಂಜೀವಿನಿ, ಸೇರಿದಂತೆ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯವನ್ನು ಪೌರ ನೌಕರರಿಗೂ ಜಾರಿ ಮಾಡಬೇಕು. ಸುಮಾರು 25-30 ವರ್ಷಗಳಿಂದ ಹೊರಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ವಾಹನ ಚಾಲಕರು, ನೀರು ಸರಬರಾಜು ಸಿಬ್ಬಂದಿಗಳು, ಲೋಡರ್ಸ್, ಗುತ್ತಿಗೆ ಲೆಕ್ಕಿಗರು, ಕ್ಲೀನರ್ ಪೌರಕಾರ್ಮಿಕರು, ಸೂಪರ್ ವೈಸರ್ಸ್, ಕಂಪ್ಯೂಟರ್ ಆಪರೇಟರಗಳು, ಜ್ಯೂನಿಯರ್ ಪ್ರೋಗ್ರಾಸ್ ಸಿಬ್ಬಂದಿಗಳನ್ನು ಖಾಯಂ ಮಾಡಬೇಕು ಎಂದು ಒತ್ತಾಯಿಸಿದರು.

ಕುಡಿವ ನೀರು ಪೂರೈಕೆ ವಿಭಾಗದ ಶಿವಣ್ಣ ಬೋಳಿ ಮಾತನಾಡಿ, ಕುಡಿವ ನೀರುಪೂರೈಕೆ ಯತಾಸ್ಥಿತಿಯಲ್ಲಿರಲಿದ್ದು ಇನ್ನುಳಿದ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಿ ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಶಿವಪ್ಪ ಅಜಮನಿ, ಬಸಪ್ಪ ಚಲವಾದಿ, ಸಾಬಣ್ಣ ಚಲವಾದಿ, ಶರಣಪ್ಪ ಮೂಕಿಹಾಳ, ಪರಸಪ್ಪ ಚಲವಾದಿ, ಬಸಪ್ಪ ಚಲವಾದಿ, ಸಂತೋಷ್ ಚಲವಾದಿ, ಬಸವರಾಜ್ ಚಲವಾದಿ, ವಿಶ್ವನಾಥ್ ಅಜಮನಿ, ರೇಣುಕಾ ಚಲವಾದಿ, ಯಲ್ಲವ ಚಲವಾದಿ, ರೇಣುಕಾ ವಡವಡಗಿ, ಸತ್ಯವ್ವ ದೊಡಮನಿ ಇದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ