Bennihalla flood control and water utilization works initially Rs. 200 crore grant release

ಬೆಣ್ಣಿಹಳ್ಳ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕಾಮಗಾರಿಗೆ ಆರಂಭಿಕ ರೂ. 200 ಕೋಟಿ ಅನುದಾನ ಬಿಡುಗಡೆ

ಬೆಣ್ಣಿಹಳ್ಳ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕಾಮಗಾರಿಗೆ ಆರಂಭಿಕ ರೂ. 200 ಕೋಟಿ ಅನುದಾನ ಬಿಡುಗಡೆ

ಧಾರವಾಡ, ಮೇ.28: ಧಾರವಾಡ ಜಿಲ್ಲೆಯ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆಗೆ ಅಗತ್ಯ ಯೋಜನೆ ಸಿದ್ಧಗೊಳಿಸಿದ್ದು, ಶಾಶ್ವತ ಪರಿಹಾರ ಕ್ರಮಕೈಗೊಳ್ಳಲು ಆರಂಭಿಕವಾಗಿ ರೂ. 200 ಕೋಟಿ ಹಣ ಈಗಾಗಲೇ ಬಿಡುಗಡೆ ಆಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು.

ನವಲಗುಂದ ತಾಲೂಕಿನ ಯಮನೂರು ಗ್ರಾಮದ ಸೇತುವೆ ಹತ್ತಿರ ಬೆಣ್ಣಿಹಳ್ಳದ ನಾಲೆಯನ್ನು ವೀಕ್ಸಿಸಿದ ನಂತರ ಅವರು ಮಾತನಾಡಿದರು.

ಬೆಣ್ಣೆಹಳ್ಳದಿಂದ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ 6 ತಾಲೂಕುಗಳ 56 ಹಳ್ಳಿಗಳು ಬಾಧಿತವಾಗುತ್ತವೆ. ಈ ಹಳ್ಳವು ಈ ಮೂರು ಜಿಲ್ಲೆಗಳ 148 ಕಿ.ಮೀ ಹರಿಯುತ್ತದೆ. ಇದು ಸುಮಾರು 4,800 ಚದರ ಕಿ.ಮೀ ಜಲಾನಯನ ಪ್ರದೇಶವನ್ನು ಹೊಂದಿದೆ. 2012ರಲ್ಲಿ ನೀರಾವರಿ ತಜ್ಞ ಡಾ. ಜಿ.ಎಸ್. ಪರಮಶಿವಯ್ಯ ಅವರು ತುಪ್ಪರಿಹಳ್ಳ ಮತ್ತು ಬೆಣ್ಣಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕುರಿತು ನೀಡಿದ ಅಧ್ಯಯನ ವರದಿಯನ್ನು ಸರಕಾರ ಪರಿಶೀಲಿಸಿದೆ. ಅದರ ಆಧಾರದ ಮೇಲೆ ನೀರಾವರಿ ನಿಗಮದ ವರದಿ ಪಡೆದು ಅನುಷ್ಠಾನಗೊಳಿಸುತ್ತದೆ ಎಂದು ಸಚಿವರು ಹೇಳಿದರು.

ಸ್ಥಳೀಯ ಶಾಸಕರಾದ ಶ್ರೀ ಎನ್.ಎಚ್. ಕೋನರಡ್ಡಿ ಅವರ ನಿರಂತರ ಪ್ರಯತ್ನ ಹಾಗೂ ಒತ್ತಾಯದ ಫಲವಾಗಿ ಮಾನ್ಯ ಮುಖ್ಯಮಂತ್ರಿಗಳು 2024-25ನೇ ಸಾಲಿನ ಆಯವ್ಯಯದಲ್ಲಿ ರೂ. 200 ಕೋಟಿಗಳ ಅನುದಾನ ನೀಡಿ, ಹಣ ಬಿಡುಗಡೆ ಮಾಡಿದ್ದಾರೆ. ಕಾಮಗಾರಿಗೆ ಟೆಂಡರ್ ಕರೆಯಲಾಗಿದ್ದು, ಅಂತಿಮ ಹಂತದಲ್ಲಿದೆ. ಮಳೆಗಾಲ ಮುಗಿದ ನಂತರ ಕಾಮಗಾರಿ ಪ್ರಾರಂಭಿಸಲಾಗುತ್ತದೆ. ಯಮನೂರ ಸೇತುವೆ ಹತ್ತಿರ ಸಾರ್ವಜನಿಕರ ಹಾಗೂ ಪ್ರವಾಸಿಗರ ಅನುಕೂಲಕ್ಕಾಗಿ ಹಾಗೂ ಬೆಣ್ಣಿಹಳ್ಳ ದಡದಲ್ಲಿ ಸ್ನಾನಘಟ್ಟ, ಉತ್ತಮ ರಸ್ತೆ, ಹೂಳು ಹಳ್ಳಕ್ಕೆ ಬರದಂತೆ ತಡೆಯಲು ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಪ್ರವಾಹ, ವಿಪತ್ತು ನಿರ್ವಹಣೆಗೆ ಅಗತ್ಯ ನೆರವು: ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳ ಮಳೆಗಾಲದಲ್ಲಿ ಉಂಟಾಗುವ ಹಳ್ಳಗಳ ಪ್ರವಾಹ, ಅತಿವೃಷ್ಟಿ ಸಮಸ್ಯೆಗಳನ್ನು ಸಮರ್ಪಕವಾಗಿ ಎದುರಿಸಿ, ಯಾವುದೇ ಜನ, ಜಾನುವಾರುಗಳಿಗೆ ಹಾನಿ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಈಗಾಗಲೇ ಜಿಲ್ಲಾಮಟ್ಟದಲ್ಲಿ ಸಭೆ ಜರುಗಿಸಿ, ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕೇಂದ್ರ ಸ್ಥಾನ ಬಿಡದಂತೆ ಮತ್ತು ಕರ್ತವ್ಯ ನಿರ್ವಹಣೆಯಲ್ಲಿ ನಿಷ್ಕಾಳಜಿ ತೋರದಂತೆ ನಿರ್ದೇಶಿಸಿ, ಎಚ್ಚರಿಕೆ ನೀಡಲಾಗಿದೆ ಎಂದರು.

ಪ್ರವಾಹ ಪರಿಸ್ಥಿತಿ ಎದುರಿಸಲು ಅನುವಾಗುವಂತೆ ನವಲಗುಂದ ಪಟ್ಟಣದಲ್ಲಿ ಅಗ್ನಿಶಾಮಕ ದಳದ ತಾತ್ಕಾಲಿಕ ನಿಲ್ದಾಣ ತೆರೆಯಲಾಗಿದೆ. ಬೋಟ್ ಸೇರಿದಂತೆ ಎಲ್ಲ ಜೀವ ರಕ್ಷಕ ಪರಿಕರಗಳನ್ನು ಪೂರೈಸಲಾಗಿದೆ. ಸ್ಥಳೀಯ ಈಜುಗಾರರನ್ನು, ಸ್ವಯಂಸೇವಕರ ತಂಡಗಳನ್ನು ಗ್ರಾಮ ಮಟ್ಟದಲ್ಲಿ ರಚಿಸಲಾಗಿದೆ. ಸ್ಥಳೀಯರ ಸಹಭಾಗಿತ್ವದಲ್ಲಿ ತಕ್ಷಣ ಸ್ಪಂದಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಯೋಜನೆ ರೂಪಿಸಿ, ಅನುಷ್ಠಾನಗೊಳಿಸಿದ್ದಾರೆ ಎಂದು ಅವರು ಹೇಳಿದರು.

ನವಲಗುಂದ ತಾಲೂಕಿನಲ್ಲಿ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳ ಎರಡು ಹಳ್ಳಗಳು ಹರಿದು, ಇದೇ ತಾಲೂಕಿನಲ್ಲಿ ಕೂಡಿ, ಮುಂದೆ ಗದಗ ಜಿಲ್ಲೆಗೆ ಹೋಗುವುದರಿಂದ ಪ್ರವಾಹ ಹೆಚ್ಚಿನ ಮಟ್ಟದಲ್ಲಿರುತ್ತದೆ. ಅದಕ್ಕಾಗಿ ಪ್ರವಾಹ ಪರಿಸ್ಥಿತಿ ಎದುರಿಸಲು ಪ್ರತ್ಯೇಕ 10 ತಂಡಗಳನ್ನು ರಚಿಸಿ, ಸನ್ನದ್ಧಗೊಳಿಸಲು ಸಚಿವರು ನಿರ್ದೇಶಿಸಿದರು.

ಈಗಾಗಲೇ ಜನರ ಸಂರಕ್ಷಣೆಗೊಸ್ಕರ ಐದು ತಂಡವನ್ನು ಸಿದ್ಧ ಮಾಡಲಾಗಿದೆ. ಅವರು ನವಲಗುಂದ ತಾಲೂಕಿನಲ್ಲಿ ದಿನದ 24 ಗಂಟೆ ಸಿದ್ಧರಿರುತ್ತಾರೆ. ಒಂದೂ ಜೀವ ಹಾನಿ ಆಗಬಾರದು ಎಂದು ಮೊದಲೇ ವ್ಯವಸ್ಥೆ ಮಾಡಿಕೊಳ್ಳುವ ದೃಷ್ಟಿಯಿಂದ ಐದು ತಂಡಗಳು ಸಿದ್ಧಪಡಿಸಲಾಗಿದೆ. ಮುಂದಿನ ಮೂರು ತಿಂಗಳು ಬೇರೆ ಭಾಗದಲ್ಲಿ ಮಳೆ ಆದರೂ ಇಲ್ಲಿನ ಪರಿಸ್ಥಿತಿ ತೊಂದರೆಗೆ ಉಂಟಾಗಬಹುದು ಎಂದು ಎಲ್ಲಿಯವರೆಗೆ ಮಳೆಯ ಆತಂಕ ಇರುತ್ತದೆಯೋ ಅಲ್ಲಿಯವರೆಗೆ ಈ ಐದು ತಂಡಗಳು ಜನರ ಸಂರಕ್ಷಣೆಗೆ ಇರುತ್ತಾರೆ ಎಂದು ಹೇಳಿದರು.

ಶಾಸಕರಾದ ಎನ್.ಎಚ್. ಕೋನರಡ್ಡಿ ಅವರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದ್ದು, ಇದಕ್ಕಾಗಿ ಮಾನ್ಯ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ಪ್ರತಿ ಜಿಲ್ಲೆಯಲ್ಲಿರುವ ಉಸ್ತುವಾರಿ ಸಚಿವರು ಮತ್ತು ಶಾಸಕರು, ಜಿಲ್ಲಾಧಿಕಾರಿಯವರು ಜಿಲ್ಲೆಯಲ್ಲಿ ಬರುವ ಪ್ರತಿಯೊಂದು ಪ್ರವಾಹ ಪೀಡಿತ ಪ್ರದೇಶಗಳನ್ನು ಮತ್ತು ಹಳ್ಳಗಳನ್ನು ಪರೀಕ್ಷಿಸಿ, ವರದಿ ಸಲ್ಲಿಸಬೇಕೆಂದು ಹೇಳಿದ್ದಾರೆ. ಅದರಂತೆ ನಮ್ಮ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಬೆಣ್ಣಿಹಳ್ಳ ಹಾಗೂ ತುಪ್ಪರಿಹಳ್ಳದ ಪ್ರವಾಹ ಪೀಡತವಾಗಬಹುದಾದ ಪ್ರದೇಶಗಳಿಗೆ ಇಂದು ಭೇಟಿ ನೀಡಿದ್ದಾರೆ. ನವಲಗುಂದ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪ್ರವಾಹ ಪೀಡತ ಪ್ರದೇಶಗಳನ್ನು ತೋರಿಸಿ, ವಿವರಿಸಲಾಗಿದೆ ಎಂದು ಅವರು ಹೇಳಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಅಧಿಕವಾಗಿರುವುದರಿಂದ ಜಿಲ್ಲೆಯ ಬಹುತೇಕ ಭಾಗದಲ್ಲಿ ಬಿತ್ತನೆ ಆರಂಭವಾಗಿರುವುದಿಲ್ಲ. ರೈತರಿಗೆ ಅಗತ್ಯವಿರುವ ಬೀಜ, ರಸಗೊಬ್ಬರಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಿಸಲಾಗುತ್ತಿದೆ ಎಂದರು.

ಅತಿವೃಷ್ಟಿಯಿಂದ ಉಂಟಾಗುವ ಪ್ರವಾಹ ಹಾಗೂ ಇತರ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರವಾಹದಲ್ಲಿನ ಜೀವ ರಕ್ಷಣೆ ಕುರಿತ ಅಣುಕು ಪ್ರದರ್ಶನ

ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ನೀಲಮ್ಮನ ಕೆರೆಯಲ್ಲಿ ಪ್ರವಾಹದ ಮುನ್ನಚ್ಚರಿಕೆ ಕುರಿತು ನೀರಿನಲ್ಲಿ ಮುಳುಗಿದವರವನ್ನು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಅಣುಕು ಪ್ರದರ್ಶನದ ಮೂಲಕ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನಾಗರಿಕರ ರಕ್ಷಣೆಯ ತಾಲೀಮು ನಡೆಸಲಾಯಿತು. ನೀರಿನಲ್ಲಿ ಮುಳುಗಿರುವ ಹಾಗೆ ಸಂದರ್ಭವನ್ನು ಸೃಷ್ಟಿಸುವ ಮೂಲಕ ಕಾಲ್ಪನಿಕ ತುರ್ತು ಪರಿಸ್ಥಿತಿ ಸೃಷ್ಟಿಸಿ, ಅಗ್ನಿಶಾಮಕ ದಳದ ಎಲ್ಲ ಸಿಬ್ಬಂದಿ ಸೇರಿ ತಾಲೀಮು ನಡೆಸಿದರು.

ನವಲಗುಂದ ಕ್ಷೇತ್ರ ವ್ಯಾಪ್ತಿಯಲ್ಲಿನ ಬೆಣ್ಣಿಹಳ್ಳ ಬದಿಯ ಹಳ್ಳಿಗಳ ಜನರಿಗೆ ಮಳೆಗಾಲದಲ್ಲಿ ಅನಾನುಕೂಲ ಆಗಬಹುದು ಎಂದು ಮುಂಜಾಗ್ರತಾ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ನಾವು, ಜಿಲ್ಲಾಡಳಿತ, ಶಾಸಕರು ಸೇರಿ ಜನರಿಗೆ ಜಾಗೃತಿ ಮೂಡಿಸಲು ಅಗ್ನಿಶಾಮಕ ಇಲಾಖೆಯಿಂದ ಅಣುಕು ಪ್ರದರ್ಶನ ನಡೆಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಎಂ. ಬ್ಯಾಕೋಡ್, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಬೃಹತ್‌ ನೀರಾವರಿ ಇಲಾಖೆಯ ಎಇಇ ರವೀಂದ್ರ ಜಾಲಗಾರ, ನವಲಗುಂದ ತಹಶೀಲ್ದಾರ ಸುಧೀರ ಸಾವುಕಾರ, ಪುರಸಭೆ ಮುಖ್ಯಾಧಿಕಾರಿ ಶರಣು ಪೂಜಾರ, ಅಗ್ನಿಶಾಮಕ ದಳದ ಅಧಿಕಾರಿ ಅಮೃತ ಮತ್ತು ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ, ನವಲಗುಂದ ತಾಲೂಕಿನ ವಿವಿಧ ಇಲಾಖೆಗಳ ಮುಖ್ಯಸ್ಥರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ