Jatra Mahotsava mother of seven children: Constitution is the country's bible, myth, scripture - Nad Gowda

ಏಳುಮಕ್ಕಳ ತಾಯಿ ಜಾತ್ರಾ ಮಹೋತ್ಸವ: ಸಂವಿಧಾನವೇ ದೇಶದ ಬೈಬಲ್, ಪುರಾಣ, ಧರ್ಮಗ್ರಂಥ- ನಾಡಗೌಡ

ಏಳುಮಕ್ಕಳ ತಾಯಿ ಜಾತ್ರಾ ಮಹೋತ್ಸವ: ಸಂವಿಧಾನವೇ ದೇಶದ ಬೈಬಲ್, ಪುರಾಣ, ಧರ್ಮಗ್ರಂಥ- ನಾಡಗೌಡ

ಮುದ್ದೇಬಿಹಾಳ : ಶೋಷಿತ ಸಮುದಾಯಗಳಿಗೆ ವಿದ್ಯೆ ಹಾಗೂ ಅಂತಸ್ತು ಸರಿಸಮಾನವಾಗಿ ಬರಬೇಕು ಎಂಬ ಉದ್ದೇಶವಿಟ್ಟುಕೊಂಡು ಡಾ.ಅಂಬೇಡ್ಕರ್ ಬರೆದಿರುವ ಸಂವಿದಾನ ಈ ದೇಶದ ಬೈಬಲ್, ಪುರಾಣ, ಧರ್ಮಗ್ರಂಥ ಆಗಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ಹಳೇ ತಹಸೀಲ್ದಾರ್ ಕಚೇರಿ ಬಳಿ ಇರುವ ಏಳು ಮಕ್ಕಳ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಧರ್ಮಸಭೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರು ಇತಿಹಾಸ ಓದಿ ಮರೆತಿಲ್ಲ. ಅವರು ಸಮಾಜದ ಬಗ್ಗೆ ಯೋಚಿಸಿ ಸಂವಿದಾನ ಬರೆದಿದ್ದಾರೆ. ಅಂಬೇಡ್ಕರ್ ಜಯಂತಿ ಆಚರಣೆ ಮಾಡಿ ಮನೆಗೆ ಹೋಗುವುದಲ್ಲ. ಸಮಾಜದಲ್ಲಿ ಮುಂದೆ ಬರುವ ಚಿಂತನೆ ಇರಬೇಕು. ದೇವರ ಆರಾಧನೆ ಜೊತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿರುವ ಕಾರ್ಯ ಹೊಸ ಚಿಂತನೆ, ಬದಲಾವಣೆಗೆ ಸಾಕ್ಷಿಯಾಗಿದೆ ಎಂದರು.

ಮುದ್ದೇಬಿಹಾಳದಲ್ಲಿ ಎಸ್.ಸಿ. ಎಸ್ಟಿ ಜನಾಂಗದವರ ಮಕ್ಕಳಿಗೆ ಮೂವ್ವತ್ತು ಕೋಟಿ ರೂ. ವೆಚ್ಚದಲ್ಲಿ ವಸತಿ ಕಾಲೇಜು ಕಟ್ಟಿಸಿದ್ದೇವೆ. ನಮ್ಮ ಸರ್ಕಾರ 156 ಭರವಸೆಗಳನ್ನು ಈಡೇರಿಸಿದೆ ಎಂದರು.

ಕುಂಟೋಜಿ ಭಾವೈಕ್ಯತಾ ಮಠದ ಚೆನ್ನವೀರ ಶಿವಾಚಾರ್ಯರು ಮಾತನಾಡಿ, ದೇವಿಗೆ ಬಲಿ ಕೊಡುವ ಸಂಪ್ರದಾಯ ಶಿರಸಿ ಮಾರಿಕಾಂಬಾ ದೇವಸ್ಥಾನದಲ್ಲೂ ಇಲ್ಲ. ಮಹಾತ್ಮಾ ಗಾಂಧೀಜಿ ಅವರು ಅಲ್ಲಿಗೆ ಭೇಟಿ ನೀಡಿದ್ದಾಗ ಪ್ರಾಣಿ ಬಲಿ ವಿರೋಧಿಸಿದರು. ಅಷ್ಟಕ್ಕೂ ದೇವಿಗೆ ರಕ್ತದ ಅಭಿಷೇಕವೇ ಬೇಕಾದರೆ ಸೀರಿಂಜ್‌ನಲ್ಲಿ ಪ್ರಾಣಿಗಳ ಅಲ್ಪ ರಕ್ತ ತೆಗೆದು ದೇವಿಗೆ ನೈವೇದ್ಯ ಅರ್ಪಿಸುವ ಸಲಹೆ ನೀಡಿದಾಗ ಅದನ್ನು ಒಪ್ಪಿ ಇಂದಿಗೂ ಅಲ್ಲಿ ಪ್ರಾಣಿ ಬಲಿ ಆಚರಣೆ ಇಲ್ಲ. ನೀವೆಲ್ಲ ಮೂಢನಂಬಿಕೆ ಬದಿಗಿಡಿ. ದೇವರ ಹೆಸರಿನಲ್ಲಿ ಪ್ರಾಣಿ ಹಿಂಸೆ ಮಾಡಬೇಡಿ ಎಂದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ್, ಕಸಾಪ ಮಾಜಿ ಅಧ್ಯಕ್ಷ ಎಂ. ಬಿ. ನಾವದಗಿ, ಉದ್ಯಮಿ ಎ.ಗಣೇಶ ನಾರಾಯಣಸ್ವಾಮಿ, ಜಿಪಂ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ, ವಾಲ್ಮೀಕಿ ಸಮಾಜದ ಮುಖಂಡ ಹುಲಗಪ್ಪ ನಾಯ್ಕಮಕ್ಕಳ, ಮುಖಂಡರಾದ ರೇವಣೆಪ್ಪ ಹರಿಜನ,ಯಲ್ಲಪ್ಪ ಚಲವಾದಿ, ಕರ್ನಾಟಕ ಅರ್ಬನ್ ಬ್ಯಾಂಕ್ ಅಧ್ಯಕ್ಷ ಸಿ.ಎಲ್.ಬಿರಾದಾರ, ನಿರ್ದೇಶಕ ಶ್ರೀಕಾಂತ ಚಲವಾದಿ, ಅಕ್ಷಯ ಅಜಮನಿ, ವಾಯ್.ಎಚ್.ವಿಜಯಕರ್ ಮೊದಲಾದವರು ಇದ್ದರು. ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶ್ರೀಶೈಲ ಹೂಗಾರ ನೇತೃತ್ವದ ಇಂಚರ ಮೆಲೋಡಿಸ್ ಕಲಾವಿದರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ