Discovery of talent, respect for achievers: Put books in children's hands instead of mobiles

ಪ್ರತಿಭಾನ್ವೇಷಣೆ, ಸಾಧಕರ ಸನ್ಮಾನ: ಮಕ್ಕಳ ಕೈಯ್ಯಲ್ಲಿ ಮೊಬೈಲ್ ಬದಲು ಪುಸ್ತಕ ಕೊಡಿ

ಪ್ರತಿಭಾನ್ವೇಷಣೆ, ಸಾಧಕರ ಸನ್ಮಾನ: ಮಕ್ಕಳ ಕೈಯ್ಯಲ್ಲಿ ಮೊಬೈಲ್ ಬದಲು ಪುಸ್ತಕ ಕೊಡಿ

ಮುದ್ದೇಬಿಹಾಳ : ಮಕ್ಕಳ ಕೈಯ್ಯಲ್ಲಿ ಮೊಬೈಲ್ ಕೊಡದೇ ಪುಸ್ತಕ ಕೊಟ್ಟರೆ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಲೊಟಗೇರಿಯ ಗುರುಮೂರ್ತಿ ಕಣಕಾಲಮಠ ಸ್ವಾಮೀಜಿ ಹೇಳಿದರು.

ಪಟ್ಟಣದ ಎಸ್.ಎಸ್.ಶಿವಾಚಾರ್ಯ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಸ್ವಾಮಿ ವಿವೇಕಾನಂದ ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಚಾಲೆಂಜ್ ನವೋದಯ ಕೋಚಿಂಗ ಕ್ಲಾಸಿಸ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ ಪರೀಕ್ಷೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳಿಗೆ ಶಾಲೆಗೆ ಹೆಸರು ನೋಂದಣಿ ಮಾಡಿಬಿಟ್ಟರೆ ಆಯಿತು ಎಂಬ ಸ್ವಭಾವದಲ್ಲಿ ಇಂದಿನ ಪಾಲಕರಿದ್ದಾರೆ. ಆದರೆ ಮಕ್ಕಳು ಏನು ಮಾಡುತ್ತಿದ್ದಾರೆ ಎಂಬುದನ್ನು ಸದಾ ಅವಲೋಕನ ಮಾಡುತ್ತಿರಬೇಕು ಎಂದರು.

ಶರಣ ಸೋಮನಾಳದ ಮಹದೇವಯ್ಯ ಶಾಸ್ತ್ರೀಗಳು ಮಾತನಾಡಿ, ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಭವಿಷ್ಯದ ಪರೀಕ್ಷೆಗಳಿಗೆ ದಾರಿದೀಪವಾಗುತ್ತವೆ ಎಂದರು.

ಆಲೂರಿನ ವೇ.ಸಂಗಯ್ಯ ಹಿರೇಮಠ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಸೈನಿಕರು, ವಿವಿಧ ಶಾಲೆಗಳ ಶಿಕ್ಷಕರು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ದುರ್ಗಾಪರಮೇಶ್ವರಿ ಆಶ್ರಮದ ಲಾಲಲಿಂಗೇಶ್ವರ ಶರಣರು, ಮಾವಿನಬಾವಿಯ ಶರಣ ಬಸವರಾಜ ಹೆಳವರ ಮಾತನಾಡಿದರು.ಎಸ್.ಎಸ್.ಶಿವಾಚಾರ್ಯ ಕಾಲೇಜಿನ ಆಡಳಿತಾಧಿಕಾರಿ ರವಿ ನಾಯಕ, ಪಶು ಆಸ್ಪತ್ರೆಯ ವೈದ್ಯ ಡಾ.ಸುರೇಶ ಭಜಂತ್ರಿ, ಕೋಚಿಂಗ್ ಕ್ಲಾಸಸ್‌ನ ಅಧ್ಯಕ್ಷ ವೀರೇಶ ಹವಾಲ್ದಾರ, ಸಂಚಾಲಕಿ ವಿಜಯಲಕ್ಷ್ಮಿ ಹವಾಲ್ದಾರ, ಗಣ್ಯರಾದ ವೀರೇಶ ಗುರುಮಠ ಮೊದಲಾದವರು ಉಪಸ್ಥಿತರಿದ್ದರು.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ