Competition on the occasion of Gramdevate Jatra: Cash prize for Rangoli competition winners

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನಗಳನ್ನು ಜಾತ್ರಾ ಕಮೀಟಿಯಿಂದ ಪ್ರದಾನ ಮಾಡಲಾಯಿತು.

ಸ್ಪರ್ಧೆಯಲ್ಲಿ ವಿಜಯಲಕ್ಷ್ಮಿ ಮೋಟಗಿ ಪ್ರಥಮ, ಶಾರದಾ ಬಿರಾದಾರ ದ್ವಿತೀಯ, ದೀಪಾ ಭಜಂತ್ರಿ ತೃತೀಯ, ಶಶಿಕಲಾ ಬಡಿಗೇರ ನಾಲ್ಕನೇ ಹಾಗೂ ಶೋಭಿತಾ ಹೊರಗಿನಮಠ ಐದನೇ ಬಹುಮಾನ ಪಡೆದುಕೊಂಡರು. ಪ್ರಶಸ್ತಿ ವಿಜೇತರಿಗೆ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಬಹುಮಾನ ಪ್ರದಾನ ಮಾಡಿದರು.

ಪುರಸಭೆ ಸದಸ್ಯರಾದ ಪ್ರತಿಭಾ ಅಂಗಡಗೇರಿ, ಶಹಜಾದಬಿ ಹುಣಸಗಿ, ಸಂಗಮ್ಮ ದೇವರಳ್ಳಿ, ಭಾರತಿ ಪಾಟೀಲ, ಅಶೋಕ ವನಹಳ್ಳಿ, ಮಾಜಿ ಸದಸ್ಯ ರಾಜು ಬಳ್ಳೊಳ್ಳಿ, ಮಂಜುಳಾ ಕೆಸರಟ್ಟಿ, ನಿವೃತ್ತ ದೈಹಿಕ ಶಿಕ್ಷಕ ಎಸ್. ಎಲ್. ಗುರವ, ತೀರ್ಪುಗಾರರಾದ ವಿದ್ಯಾ ತಡಸದ, ರೇಖಾ ಇಲ್ಲೂರ, ಡಿ.ಬಿ.ಮಟ್ಟಿಕಲ್ಲ ಇದ್ದರು.

ಫಲಿತಾಂಶದಲ್ಲಿ ತಾರತಮ್ಯ: ನಿರ್ಣಾಯಕರು ಅಂದವಾದ ರಂಗೋಲಿಯನ್ನು ವೀಕ್ಷಿಸಿ ತೀರ್ಪು ನೀಡದೇ ತಮಗೆ ಬೇಕಾದವರಿಗೆ ತೀರ್ಪು ನೀಡಿ ತಾರತಮ್ಯ ಮಾಡಿದ್ದಾರೆ ಎಂದು ಮಾರುತಿ ನಗರದಿಂದ ಸ್ಪರ್ಧೆಗೆ ಆಗಮಿಸಿದ್ದ ಲತಾ ಪೀರಾಪೂರ ದೂರಿದರು. ಸ್ಪರ್ಧೆಯ ನಿಯಮಗಳನ್ನು ಹಾಗೂ ಬಳಸಬೇಕಾದ ಆಕೃತಿಯ ಬಗ್ಗೆ ಮುಂಚಿತವಾಗಿ ತಿಳಿಸಿರಲಿಲ್ಲ. ಆದರೂ ಆಯ್ಕೆಯಾಗದವರು ತಮ್ಮ ರಂಗೋಲಿಗೆ ಏಕೆ ಬಹುಮಾನ ಬಂದಿಲ್ಲ ಎಂದು ಪ್ರಶ್ನಿಸಿದರೆ ನಿರ್ಣಾಯಕರಿಂದ ಸಮರ್ಪಕ ಉತ್ತರ ಬರಲಿಲ್ಲ. ಇದು ನಮಗೆ ಅನುಮಾನಗಳಿಗೆ ಕಾರಣವಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತೀರ್ಪುಗಾರರನ್ನು ಪ್ರಶ್ನಿಸಿದಾಗ, ರಂಗೋಲಿಯ ಆಕೃತಿ, ಚುಕ್ಕಿಗಳ ಇಡುವಿಕೆ ಹಾಗೂ ಬಣ್ಣದ ಅಂದವನ್ನು ಗಮನಿಸಿ ಆಯ್ಕೆ ಮಾಡಿದ್ದು ಇದರಲ್ಲಿ ಯಾವುದೇ ತಾರತಮ್ಮ ಮಾಡಿಲ್ಲ ಎಂದು ನಿರ್ಣಾಯಕರಾಗಿ ಬಂದಿದ್ದ ವಿದ್ಯಾ ತಡಸದ, ರೇಖಾ ಇಲ್ಲೂರ ಸ್ಪಷ್ಪಪಡಿಸಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ