Falling onion prices: Growers panic

ಕುಸಿದ ಈರುಳ್ಳಿ ದರ: ಬೆಳೆಗಾರರು ಕಂಗಾಲು

ಕುಸಿದ ಈರುಳ್ಳಿ ದರ: ಬೆಳೆಗಾರರು ಕಂಗಾಲು

ಮುದ್ದೇಬಿಹಾಳ : ಬೆಲೆಯ ಅನಿಶ್ಚಿತತೆಯಲ್ಲಿಯೇ ಒದ್ದಾಡುವ ಬೆಳೆ ಈರುಳ್ಳಿಗೆ ಏಕಾಏಕಿ ದರ ಕುಸಿತದ ಪರಿಣಾಮ ಬಿತ್ತಿದ ಖರ್ಚು ವೆಚ್ಚವನ್ನು ಸರಿದೂಗಿಸಲಾಗದೇ ಬೆಳೆದ ಈರುಳ್ಳಿಯನ್ನು ನೆಲಸಮ ಮಾಡಿದ ಘಟನೆ ತಾಲ್ಲೂಕಿನ ರೂಢಗಿ ಗ್ರಾಮದಲ್ಲಿ ಈರುಳ್ಳಿ ಬೆಳೆಗಾರರೊಬ್ಬರು ಮಾಡಿದ್ದಾರೆ.

ರೂಢಗಿ ಗ್ರಾಮದ ಈರುಳ್ಳಿ ಬೆಳೆಗಾರ ಬಸವರಾಜ ಈಳಗೇರ ಅವರ 6 ಎಕರೆಯಲ್ಲಿ ಬೆಳೆಯಲಾಗಿದ್ದ ಈರುಳ್ಳಿ ಬೆಳೆಗೆ ಸರಿಯಾದ ಬೆಲೆ ಸಿಗದೇ ಬೆಳೆಯಲು ಹಾಕಿದ ಬಂಡವಾಳವೂ ಬಾರದ್ದರಿಂದ ಹೊಲದ ಬದುವಿನಲ್ಲೇ ಹಾಕುವ ಮೂಲಕ ಈರುಳ್ಳಿ ಅವರ ಕಣ್ಣಲ್ಲಿ ಕಣ್ಣೀರು ತರಿಸಿದೆ.

ಈ ಕುರಿತು ಮಾತನಾಡಿದ ರೈತ ಬಸವರಾಜ ಈಳಗೇರ ಅವರು, ಆರು ಎಕರೆಯಲ್ಲಿ ಈರುಳ್ಳಿ ಬೆಳೆದಿದ್ದೇವು. ಒಳ್ಳೆಯ ಫಸಲು ಬಂದಿದೆ ಎಂದು ಮಾರಾಟ ಮಾಡಲು ಹೋದರೆ ಕ್ವಿಂಟಾಲ್‌ಗೆ 300-400 ರೂ.ಗೆ ಕೇಳುತ್ತಿದ್ದಾರೆ. ದೂರ ಹುಬ್ಬಳ್ಳಿ, ಬೆಂಗಳೂರು, ಬಾಗಲಕೋಟೆಗೆ ಲಾರಿ ಬಾಡಿಗೆ, ಆಳುಗಳ ಕೂಲಿ, ಈರುಳ್ಳಿ ತುಂಬುವ ಚೀಲಗಳು, ಹಮಾಲರಿಗೆ ಕೊಡುವ ಕೂಲಿ ಎಲ್ಲವೂ ಸೇರಿದರೆ ಬೆಳೆಗೆ ಮಾಡಿರುವ ಖರ್ಚು ಸೇರಿ ನಷ್ಟವೇ ಆಗುವುದನ್ನು ಮನಗಂಡು ಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದರು.

ಒಮ್ಮೆ ಲಾರಿ ಬಾಡಿಗೆ ಮಾಡಿಕೊಂಡು ಮಾರಾಟಕ್ಕೆ ತಗೆದುಕೊಂಡು ಹೋದ ವೇಳೆ ನನ್ನ ಜೇಬಿನಿಂದಲೇ 400 ರೂ. ಕೈ ಬಿಟ್ಟವು. ಆದರೆ ಲಾಭ ಮಾತ್ರ ದೊರೆಯಲಿಲ್ಲ. ಹೀಗಾಗಿ ಹೊಲದಲ್ಲಿ ಬೆಳೆದಿದ್ದ ಸುಮಾರು 500 ಕ್ವಿಂಟಾಲ್ ಈರುಳ್ಳಿ ನೆಲಸಮ ಮಾಡಿದ್ದೇನೆ ಎಂದು ಹೇಳಿದರು.

ಯುವ ಮುಖಂಡ ಕಿರಣ ಹಿರೇಗೌಡರ ಮಾತನಾಡಿ, ಈ ಭಾಗದ ಮುದ್ದೇಬಿಹಾಳ, ಬ.ಬಾಗೇವಾಡಿ, ಕೊಲ್ಹಾರ, ಕೂಡಗಿ ಸುತ್ತಮುತ್ತಲಿನ ಗ್ರಾಮದ ರೈತರು ಈರುಳ್ಳಿ ಬೆಳೆದಿದ್ದು ಒಳ್ಳೆಯ ಫಸಲು ಬಂದಿದೆ. ಆದರೆ ಅದಕ್ಕೆ ಸರಿಯಾದ ಬೆಲೆ ಸಿಗದೇ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ಹಲವು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸುತ್ತದೆ. ಈರುಳ್ಳಿ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸುವ ಕಾರ್ಯ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ಈ ಭಾಗದ ರೈತರು ಈರುಳ್ಳಿ ಬೆಳೆಯಲು ಮಾಡಿದ ಖರ್ಚಿ ತಗೆಯಲು ಪರದಾಡುತ್ತಿದ್ದು ಅವರ ಕಣ್ಣಲ್ಲಿ ನೀರು ತರಿಸುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಅವರ ನೆರವಿಗೆ ಬರಬೇಕು ಎಂಬ ಆಗ್ರಹ ರೈತರಿಂದ ಕೇಳಿ ಬಂದಿವೆ.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ