Funeral of a soldier with state honours

ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ

ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ

ಜುಮಾಲಾಪುರ್ ತಾಂಡಾ : ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ವೆಂಕಟೇಶ್. ಎಂ. ರಾಠೋಡ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಜುಮಾಲಾಪುರ್ ತಾಂಡದಲ್ಲಿ ಶುಕ್ರವಾರ ನೆರವೇರಿತು.

ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಬಿಳಿರಕ್ತ ಕಣಗಳು ಕಡಿಮೆ ಆಗಿ ಯೋಧ ಮೃತಪಟ್ಟಿದ್ದು, ಮೃತರ ಪಾರ್ಥಿವ ಶರೀರವು ಬಾಗಲಕೋಟ ಆಸ್ಪತ್ರೆಯಿಂದ ಗುರುವಾರ ಮದ್ಯರಾತ್ರಿ ಬಾಗಲಕೋಟದಿಂದ ಬಂದು ಶುಕ್ರವಾರ ಬೆಳಿಗ್ಗೆ ಜುಮಾಲಾಪುರ್ ತಾಂಡಕ್ಕೆ
ತರಲಾಯಿತು. ಅಲ್ಲಿಂದ ರಸ್ತೆ ಮೂಲಕ ಆಂಬುಲೆನ್ಸ್‌ ವಾಹನದ ಮೂಲಕ ತರಲಾಯಿತು.

ನಾರಾಯಣಪುರದಿಂದ ಸುಮಾರ 15 ಕಿ.ಮೀ ದೂರವಿರುವ ಯೋಧನ ಸ್ವಗ್ರಾಮ, ಜುಮಾಲಾಪುರ್ ತಾಂಡವರೆಗೆ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು.

ಮೆರವಣಿಗೆ ಉದ್ದಕ್ಕೂ ವೆಂಕಟೇಶ ಅಮರ ರಹೇ, ಬೋಲೊ ಭಾರತ್ ಮಾತಾಕಿ ಜೈ, ಘೋಷಣೆಗಳು ಮೊಳಗಿದವು. ಮೆರವಣಿಗೆಯಲ್ಲಿ ಮಾಜಿ ಸೈನಿಕರು, ಯುವಕರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಮೃತ ಯೋಧನ ಪಾರ್ಥಿವ ಶರೀರ ಕಂಡು ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿತ್ತು. ಯೋಧನ ಅಗಲಿಕೆಗೆ ಗ್ರಾಮಸ್ಥರು ಕಂಬನಿ ಮಿಡಿದರು. ಸ್ವಗ್ರಾಮದ ಹೊರವಲಯದಲ್ಲಿ ಸಾರ್ವಜನಿಕರಿಗೆ ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಹುಣಸಗಿ ತಶೀಲದಾರರು ಹುಸೇನಾ. ಎ. ಸರ್ಕಾವಾಸ್, ಕೊಡೇಕಲ್ ಉಪ ತಶೀಲದಾರರು ಕಾಲಪ್ಪ ಜಂಜಿಗಡ್ಡಿ, ಗ್ರಾಮ ಆಡಳಿತ ಅಧಿಕಾರಿ ಪರಶುರಾಮ, ಹುಣಸಗಿ ಪೊಲೀಸ್ ಸಿ.ಪಿ.ಐ ರವಿಕುಮಾರ್, ಕೊಡೇಕಲ್ ಪಿ.ಎಸ್.ಐ ಅಯ್ಯಣ್ಣನವರು ಪೊಲೀಸ್ ಬಂದೋಬಸ್ತ್ ನೀಡಿದರು. ಜೊತೆಯಲ್ಲಿ ಮೃತ ಯೋಧನಿಗೆ ಅಂತಿಮ ನಮನ ಸಲ್ಲಿಸಿದರು.

ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತ ಯೋಧ ವೆಂಕಟೇಶ ಎಂ ರಾಠೋಡ ಅವರ ಅಂತ್ಯಕ್ರಿಯೆ ನೆರವೇರಿತು.

ವರದಿಗಾರ : ಶಿವು ರಾಠೋಡ

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ