Devadurga Job Guarantee Illegality: Attempt to cover up the case

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ

ಖಾತ್ರಿ ಯೋಜನೆಯಡಿ ನಡೆದಿರುವ ಅಕ್ರಮ ಪ್ರಕರಣವನ್ನು ಸಿಬಿಐ ತನಿಖೆಗೆವಹಿಸಿ ತಪ್ಪಿತಸ್ಥ ಎಲ್ಲಾ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ಶರಣಬಸವ ಹೂಗಾರ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

2020-21 ಮತ್ತು 2021-22 ಸಾಲಿನಲ್ಲಿ ದೇವದುರ್ಗ ತಾಲೂಕಿನ 33 ಗ್ರಾಮಗಳ ಉದ್ಯೋಗ ಖಾತ್ರಿ ಯೋಜನೆಯಡಿ ಅಕ್ರಮವಾಗಿರುವ ಕುರಿತು ಸಾಮಾಜಿಕ ಲೆಕ್ಕ ಪರಿಶೋಧನೆಯ ತಂಡ ಪರಿಶೀಲನೆ ವರದಿ ನೀಡಿದೆ. 140 ಕೋಟಿ ರೂ ಅಕ್ರಮವಾಗಿ ರುವ ಕುರಿತು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಜಿಲ್ಲಾ ತಾಲೂಕ ಪಂಚಾಯ್ತಿ ಅಧಿಕಾರಿಗಳು ಸೇರಿ ಪಂಚಾಯ್ತಿ ಪಿಡಿಓಗಳು ಹಾಗೂ ಹೊರಗುತ್ತಿಗೆ ನೌಕರರ ಲೋಪವನ್ನು ಮಧ್ಯಂತರ ವರದಿಯಲ್ಲಿ ಉಲ್ಲೇಖಿಸಿ ನೀಡಲಾಗಿ ದೆ. ಆದರೂ ಪಿಡಿಓಗಳ ಸಾಮೂಹಿಕ ವರ್ಗಾವಣೆ ಹೊರತುಪಡಿಸಿದರೆ ತಾಲೂಕ ಪಂಚಾಯ್ತಿ ಉದ್ಯೋಗ ಖಾತ್ರಿ ಯೋಜನೆ ಉಪನಿರ್ದೇಶಕರುಗಳು, ಜಿಲ್ಲಾ ಪಂಚಾಯ್ತಿ ಹಾಗೂ ರಾಜ್ಯ ಮಟ್ಟದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮವಾಗಿಲ್ಲ. ತನಿಖಾ ವರದಿಯಲ್ಲಿ ಹಣ ದುರುಪಯೋಗ ಪಡೆಸಿಕೊಂಡವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಿ ಹಣವಸೂಲಿ ಮಾಡು ಸೂಚಿಸಿದ್ದರೂ ಕ್ರಮವಾಗುತ್ತಿಲ್ಲ. ಪಂಚಾಯತ್ ರಾಜ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಂದಿನ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ನೋಡೆಲ್ ಅಧಿಕಾರಿಗಳು ಸೇರಿದಂತೆ ಹಣ ವ್ಯವಹಾರ ನಡೆಸಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗುತ್ತಿಲ್ಲ. ತನಿಖೆ ಅಕ್ರಮ ಬಹಿರಂಗಗೊಂಡರೂ ರಕ್ಷಣೆ ಮಾಡಲಾಗುತ್ತಿದೆ. ಕೂಡಲೇ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಶಿಫಾರಸ್ಸು ಮಾಡಬೇಕು, ಅಕ್ರಮಗಳು ನಡೆಯದಂತೆ ತಡೆಯಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.ಮತ್ತು ಸಾಮಾಜಿಕ ಪರಿಶೋಧನ ನಿರ್ದೇಶನಾಲಯದ ರಾಜ್ಯ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೆಲವು ಅಧಿಕಾರಿಗಳು ಅಕ್ರಮ ದಲ್ಲಿ ಭಾಗಿಯಾಗಿ ತನಿಖೆ ನಡೆಸದಿರಲು ಹಣದ ಆಮಿಷ ಒಡ್ಡಿ ಕುಮ್ಮುಕ್ಕು ನೀಡುತ್ತಿರುವುದು ಕಂಡುಬಂದಿರುತ್ತದೆ ಆದ್ದರಿಂದ ಶೀಘ್ರವೇ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈ ಗೊಳ್ಳದಿದ್ದರೆ ಉಗ್ರಾ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ ಮತ್ತು ಸಂಬಂದಿಸಿದ ಎಲ್ಲಾ ಧಾಖಲೆಗಳನ್ನು ಮುಖ್ಯ ಮಂತ್ರಿ ಹಾಗು ಸಚಿವರಿಗೆ ನೀಡುತ್ತೇವೆ ಎಂದು ತಿಳಿಸಿರುತ್ತಾರೆ

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ