Implementation of ERT; Recognition of the opinion of the people's representatives and the public

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಹುಬ್ಬಳ್ಳಿ ಧಾರವಾಡ ಕಾರಿಡಾಡ್‌ನಲ್ಲಿ ಎಲೆಕ್ಟ್ರಿಕ್ ರ‍್ಯಾಪಿಡ್‌ ಟ್ರಾನ್ಸಿಟ್ (ಇ.ಆರ್.ಟಿ) ಸೌಲಭ್ಯ ಆರಂಭಿಸಲು ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಅಭಿಪ್ರಾಯಗಳನ್ನು ಪಡೆದು, ಉತ್ತಮ ಯೋಜನಾ ವರದಿ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹೇಳಿದರು.

ನಗರದ ಸೃಜನಾ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಹುಬ್ಬಳ್ಳಿ-ಧಾರವಾಡ ಕಾರಿಡಾರ್‌ನಲ್ಲಿ ಇ.ಆರ್.ಟಿ. ಸಾರಿಗೆ ವ್ಯವಸ್ಥೆ ಕುರಿತು ಸಾರ್ವಜನಿಕರು ಮತ್ತು ಭಾಗೀದಾರರ ಸಭೆಯಲ್ಲಿ ಮಾತನಾಡಿದರು.

ಹುಬ್ಬಳ್ಳಿ- ಧಾರವಾಡ ಕಾರಿಡಾರ್‌ ನಲ್ಲಿ ಎಲೆಕ್ಟ್ರಿಕ್ ರ‍್ಯಾಪಿಡ್‌ ಟ್ರಾನ್ಸಿಟ್ (ಇ.ಆರ್.ಟಿ.) ಸಾರಿಗೆ ವ್ಯವಸ್ಥೆಯನ್ನು ಸರ್ಕಾರ ಮತ್ತು ಖಾಸಗಿ (ಪಿಪಿಪಿ ಮಾಡಲ್) ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ವ್ಯವಸ್ಥೆಯನ್ನು ಜಾರಿಗೊಳಿಸಲು ವಿಸೃತ ಯೋಜನಾ ವರದಿ (ಡಿಪಿಆರ್)ಯನ್ನು ಸಿದ್ಧಗೊಳ್ಳಿಸಲಾಗುತ್ತಿದೆ. ಸರ್ಕಾರವು 3 ತಿಂಗಳ ಕಾಲಾವಕಾಶ ನೀಡಿದ್ದು, ಈಗಾಗಲೇ ಒಂದು ತಿಂಗಳ ಅಧ್ಯಯನ ನಡೆಸಲಾಗಿದ್ದು, ಮುಂದಿನ ಎರಡು ತಿಂಗಳಲ್ಲಿ ಅಂತಿಮ ವಿಸೃತ ಯೋಜನಾ ವರದಿಯನ್ನು ಸರ್ಕಾರಕ್ಕೆ ಸಂಸ್ಥೆಯು ಸಲ್ಲಿಸಲಿದೆ ಎಂದು ಹೇಳಿದರು.

ಸಭೆಯಲ್ಲಿ ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಹಾಗೂ ವಿವಿಧ ಪ್ರತಿನಿಧಿಗಳು, ಸಾರ್ವಜನಿಕರು ಮಾತನಾಡಿ, ತಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳ ಜೊತೆಗೆ ಮನವಿಗಳನ್ನು ಸಲ್ಲಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಮ್., ಬಿ.ಆರ್.ಟಿ.ಎಸ್. ವ್ಯವಸ್ಥಾಪಕ ನಿರ್ದೇಶಕಿ ಸಾವಿತ್ರಿ ಕಡಿ, ಉಪ ಪೊಲೀಸ್ ಆಯುಕ್ತ ರವೀಶ ಸಿ.ಆರ್., ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ