Arrested pervert who created fake account and leaked obscene video

ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ವಿಡಿಯೋ ಹರಿಬಿಟ್ಟ ವಿಕೃತಿ ಬಂಧನ

ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ವಿಡಿಯೋ ಹರಿಬಿಟ್ಟ ವಿಕೃತಿ ಬಂಧನ

ಬಳ್ಳಾರಿ, (ಜೂನ್ 18): ನಕಲಿ‌ ಖಾತೆ ಸೃಷ್ಟಿಸಿ (Fake Accounts) ಮಹಿಳೆ ಹಾಗೂ ಯುವತಿಯರ ನಗ್ನ ಪೋಟೋ, ವಿಡಿಯೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಮೋಸ್ಟ್ ವಾಂಟೆಡ್​ ಕಾಮುಕ ಕೊನೆಗೂ ಬಳ್ಳಾರಿಯ (Bellary) ಸಂಡೂರಿನಲ್ಲಿ (Sandur) ಸಿಕ್ಕಿಬಿದ್ದಿದ್ದಾನೆ.

ಶುಭಂ ಕುಮಾರ್ ಮನೋಜ್ ಪ್ರಸಾದ್ ಸಿಂಗ್(25) ಎನ್ನುವಾತ ನಕಲಿ ಖಾತೆಯಲ್ಲಿ ಬೆತ್ತಲೆ ಫೋಟೋ, ವಿಡಿಯೋ ಅಪ್ಲೋಡ್ ಮಾಡಿ ಮಹಿಳೆಯರ ಮಾನಹಾನಿ ಮಾಡುತ್ತಿದ್ದ. ಈ ಸಂಬಂಧ ವಿದ್ಯಾರ್ಥಿನಿಯೋರ್ವಳು ನೀಡಿದ್ದ ದೂರಿನ ಮೇರೆಗೆ ಹಲವು ದಿನಗಳಿಂದ ತನಿಖೆ ನಡೆಸಿದ್ದ ಮುಂಬೈ ಪೊಲೀಸರು (Mumbai Police) ಗೂಗಲ್​ ಸಹಾಯದಿಂದ ಸಂಡೂರಿನಲ್ಲಿ ಕಾಮುಕ ಶುಭಂನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನ ಮೊಬೈಲ್​​ ನಲ್ಲಿ ಬರೋಬ್ಬರಿ 13,000ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ಛಾಯಾಚಿತ್ರಗಳು ಮತ್ತು ವೀಡಿಯೊಗಳು ಪತ್ತೆಯಾಗಿದ್ದು, ಇವುಗಳನ್ನು ನೋಡಿ ಪೊಲೀಸರೇ ದಂಗಾಗಿದ್ದಾರೆ.

ದೆಹಲಿಯಲ್ಲಿ ಕಂಪ್ಯೂಟರ್ ಸಾಫ್ಟ್‌ವೇರ್‌ನಲ್ಲಿ ಡಿಪ್ಲೊಮಾ ಪಡೆದಿದ್ದ ಶುಭಂ, ಸಂಡೂರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರು, ಯುವತಿಯರನ್ನು ಪರಿಚಯ ಮಾಡಿಕೊಂಡು ಬಳಿಕ ಅವರಿಗೆ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಪೀಡಿಸುತ್ತಿದ್ದ. ಇದಕ್ಕೆ ಒಪ್ಪದಿದ್ದಾಗ ಅವರ ಹೆಸರಿನಲ್ಲೇ ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ಫೋಟೋ, ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದ.

ತನ್ನ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಸಂಬಂಧ ವಿದ್ಯಾರ್ಥಿನಿಯೊಬ್ಬಳು ನೀಡಿದ್ದ ದೂರು ದಾಖಲಿಸಿಕೊಂಡ ಬಳಿಕ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದರು. ಈ ಪ್ರಕರಣ ಸಂಬಂಧ ಗೂಗಲ್‌ನಿಂದ ತಾಂತ್ರಿಕ ಮಾಹಿತಿ ಸಂಗ್ರಹಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶುಭಂ 10 ನಕಲಿ ಖಾತೆಗಳನ್ನು ಮತ್ತು 90ಕ್ಕೂ ಹೆಚ್ಚು ಇ-ಮೇಲ್ ಐಡಿಗಳನ್ನು ಸೃಷ್ಟಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಆರೋಪಿಯು ಮಹಿಳೆಯರಿಗೆ ನಗ್ನ ವಿಡಿಯೋ ಕಾಲ್ ಮಾಡುವಂತೆ ಕಿರುಕುಳ ನೀಡುತ್ತಿದ್ದ. ಅವರು ಒಪ್ಪದಿದ್ದಾಗ, ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ರಚಿಸಿ ಅಶ್ಲೀಲ ವಿಷಯವನ್ನು ಪೋಸ್ಟ್ ಮಾಡಿ ಮಾನಹಾನಿ ಮಾಡುತ್ತಿದ್ದ. ಹೀಗೆ ವಿದ್ಯಾರ್ಥಿನಿಯೊಬ್ಬಳ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಫೋಟೋ, ವಿಡಿಯೋಗಳನ್ನು ಹಾಕಿ ಮಾನಹಾನಿ ಮಾಡುತ್ತಿದ್ದ. ಈ ಸಂಬಂಧ ವಿದ್ಯಾರ್ಥಿನಿ ಕೊಟ್ಟ ದೂರಿನ ಮೇರೆಗೆ ಮುಂಬೈ ಪೊಲೀಸರು ಗೂಗಲ್‌ನಿಂದ ತಾಂತ್ರಿಕ ಮಾಹಿತಿ ಪಡೆದುಕೊಂಡು ಕಾಮುಕ ಶುಭಂನನ್ನು ಸಂಡೂರಿನಲ್ಲಿ ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ