Fatal attack on college lecturer

ಕಾಲೇಜು ಉಪನ್ಯಾಸಕಿ ಮೇಲೆ ಮಾರಣಾಂತಿಕ ಹಲ್ಲೆ

ಕಾಲೇಜು ಉಪನ್ಯಾಸಕಿ ಮೇಲೆ ಮಾರಣಾಂತಿಕ ಹಲ್ಲೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮನೆ ಬಾಡಿಗೆ ಕೇಳುವ ನೆಪದಲ್ಲಿ ಮನೆಗೆ ಬಂದ ಆಗುಂತಕನೊಬ್ಬ ಕಾಲೇಜು ಉಪನ್ಯಾಸಕಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆಗೈದು ತಡೆಯಲು ಹೋದ ಉಪನ್ಯಾಸಕಿ ತಾಯಿಯನ್ನು ಎಳೆದಾಡಿದ ಘಟನೆ ಪಟ್ಟಣದ ಸಾಯಿ ನಗರದ ಹೇಮರಡ್ಡಿ ದೇವಸ್ಥಾನದ ಹಿಂಭಾಗದಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ.

ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಉಪನ್ಯಾಸಕಿ ಸುಮಂಗಲಾ ಅಂಗಡಿ(46) ಆಗುಂತಕ ವ್ಯಕ್ತಿಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡವರು. ಪಿಎಸ್‌ಐ ಸಂಜಯ ತಿಪರೆಡ್ಡಿ ಅವರ ಎದುರಿಗೆ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಅಂಬ್ಯುಲೆನ್ಸ್ನಲ್ಲಿ ಬಾಗಲಕೋಟ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಘಟನೆಯ ಸಂದರ್ಭವನ್ನು ವಿವರಿಸಿದ ಉಪನ್ಯಾಸಕಿ ಸುಮಂಗಲಾ, ಎರಡು ದಿನದ ಹಿಂದೆ ವ್ಯಕ್ತಿಯೊಬ್ಬ ಮನೆ ಬಾಡಿಗೆ ಕೇಳಿಕೊಂಡು ಬಂದಿದ್ದ. ಕೊಠಡಿ ಖಾಲಿ ಇದೆ ಎಂದು ತಿಳಿಸಿದ್ದೇವು. ಶನಿವಾರ ಮದ್ಯಾಹ್ನದ ಹೊತ್ತಿಗೆ ಮನೆ ಬಾಡಿಗೆ ಕೇಳುವ ನೆಪದಲ್ಲಿ ಹಿಂದಿ ಭಾಷೆಯನ್ನು ಮಾತನಾಡುತ್ತಿದ್ದ ಆತನಿಗೆ ಮನೆಯ ಮೇಲಿನ ಮಹಡಿ ಖಾಲಿ ಇದ್ದು ಬಾಡಿಗೆಗೆ ನೋಡುವಂತೆ ತಿಳಿಸಿದೆವು. ಆತ ಮನೆಯ ಫೋಟೋ ತೆಗೆದುಕೊಳ್ಳುವುದಾಗಿ ಹೇಳಿ ಮೊದಲು ಮನೆಯ ಪೂರ್ತಿ ಫೋಟೋ ತಗೆದುಕೊಂಡು ನಂತರ ಬಾಡಿಗೆ ಇರುವ ಕೊಠಡಿಯ ಫೋಟೋ ಬೇಕು ಎಂದ. ಅದಕ್ಕೆ ನಾವು ಕೊಠಡಿಯ ಫೋಟೋ ಯಾವುದಕ್ಕೆ ಎಂದು ಪ್ರಶ್ನಿಸಿದಾಗ ತಮ್ಮ ಕಂಪನಿಯವರಿಗೆ ತೋರಿಸಬೇಕು ಎಂದು ತಿಳಿಸಿದ. ಮೇಲಿನ ಮಹಡಿ ಕೊಠಡಿಗೆ ಹೋಗುತ್ತಿದ್ದಂತೆ ಏಕಾಏಕಿ ನನ್ನ ಮುಖಕ್ಕೆ ಬಲವಾಗಿ ಗುದ್ದಲು ಶುರು ಮಾಡಿದ. ಇದರಿಂದ ಗಾಬರಿಯಾಗಿ ನಾನು ನನ್ನ ತಾಯಿಯನ್ನು ಕೂಗಿದಾಗ ಅವರು ಓಡಿ ಬಂದು ನೋಡುವಷ್ಟರಲ್ಲಿ ತಾಯಿಯವರಿಗೂ ಆತ ಹೊಡೆದಿದ್ದಾನೆ. ಅವರ ಕನ್ನಡಕ ನೆಲಕ್ಕೆ ಬಿದ್ದು ಒಡೆದಿದ್ದು ಅವರು ಹೊರಗೆ ಹೋಗಿ ಓಣಿಯ ಜನರನ್ನು ಕರೆಯಲು ಯತ್ನಿಸುತ್ತಾರೆ ಎಂದು ಅವರನ್ನು ಎಳೆದಾಡಿ ಬಟ್ಟೆ ಹರಿದಿದ್ದಾನೆ. ಘಟನೆಯಿಂದ ನಮಗೆ ತುಂಬಾ ಗಾಬರಿಯಾಗಿದ್ದು ಆತನನ್ನು ಬಿಡಬೇಡಿ ಎಂದು ಹೇಳಿಕೊಂಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು ಹೆಚ್ಚಿನ ವಿಚಾರಣೆ ಬಳಿಕವೇ ಆತ ಏಕೆ ಹೋಗಿದ್ದ ಎಂಬ ಮಾಹಿತಿ ತಿಳಿದು ಬರಲಿದೆ.

ಹಾಡಹಗಲೇ ನಡೆದ ಘಟನೆಯಿಂದ ಪಟ್ಟಣದ ಜನತೆ ಆತಂಕಗೊಂಡಿದ್ದು ಮನೆಯಲ್ಲಿ ಒಂಟಿ ಮಹಿಳೆಯರು ಇದ್ದಾಗ ಘಟನೆ ನಡೆದಿರುವುದು ಜನರನ್ನು ಭಯಭೀತರನ್ನಾಗಿಸಿದೆ. ಗಾಯಗೊಂಡಿದ್ದ ಉಪನ್ಯಾಸಕಿ ಸುಮಂಗಲಾ ಹಾಗೂ ಅವರ ತಾಯಿ ವಿಜಯಲಕ್ಷ್ಮಿ ಅಂಗಡಿ ಅವರನ್ನು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಾಲೇಜು ಆಡಳಿತ ಮಂಡಳಿ ಪದಾಧಿಕಾರಿಗಳಿಂದ ಸಾಂತ್ವನ : ಘಟನೆಯ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಸರಕಾರಿ ಆಸ್ಪತ್ರೆಗೆ ಆಗಮಿಸಿದ ಎಂ.ಜಿ.ವಿ.ಸಿ ಕಾಲೇಜಿನ ಕಾರ್ಯದರ್ಶಿ ಅಶೋಕ ತಡಸದ, ಪ್ರಾಚಾರ್ಯ ಎಸ್.ಎನ್.ಪೊಲೇಶಿ, ಉಪನ್ಯಾಸಕ ರಹೀಂ ಮುಲ್ಲಾ, ಸಿಬ್ಬಂದಿ ಬಾಬು ಚವ್ಹಾಣ ಉಪನ್ಯಾಸಕಿ ಸುಮಂಗಲಾ ಅಂಗಡಿ ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಅಲ್ಲದೇ ತಕ್ಷಣ ಅವರನ್ನು ಬಾಗಲಕೋಟ ಜಿಲ್ಲಾಸ್ಪತ್ರೆಗೆ ಕಳಿಸಲು ನೆರವು ನೀಡಿದರು.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ