Yoga cures cancer: School students who showed special performance

ಯೋಗದಿಂದ ಕ್ಯಾನ್ಸರ್ ಕಾಯಿಲೆ ದೂರ : ವಿಶೇಷ ಪ್ರದರ್ಶನ ತೋರಿದ ಶಾಲಾ ವಿದ್ಯಾರ್ಥಿಗಳು

ಯೋಗದಿಂದ ಕ್ಯಾನ್ಸರ್ ಕಾಯಿಲೆ ದೂರ : ವಿಶೇಷ ಪ್ರದರ್ಶನ ತೋರಿದ ಶಾಲಾ ವಿದ್ಯಾರ್ಥಿಗಳು

ಮುದ್ದೇಬಿಹಾಳ : ಮಾರಣಾಂತಿಕ ರಕ್ತ ಕ್ಯಾನ್ಸರ್ ಕಾಯಿಲೆಯಿಂದ 14ಲಕ್ಷ ರೂ.ವೆಚ್ಚ ಮಾಡಿದರೂ ಗುಣಮುಖವಾಗದ ಕಾಯಿಲೆ ನಿರಂತರವಾಗಿ ಯೋಗದ ಮೂಲಕ ಚೇತರಿಸಿಕೊಂಡು ಆರೋಗ್ಯವಾಗಿದ್ದು ಯೋಗಕ್ಕೆ ಬಹುದೊಡ್ಡ ಶಕ್ತಿ ಇದೆ ಎಂದು ಮಾದಿನಾಳ ಗ್ರಾಮದ ನಿವಾಸಿ, ಬ್ಲಡ್ ಕ್ಯಾನ್ಸರ್‌ನಿಂದ ಗುಣಮುಖವಾಗಿರುವ ಯಲ್ಲಮ್ಮ ಶಿರೋಳ ಹೇಳಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಶನಿವಾರ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಯೋಗ ಸಾಧನೆಯಿಂದ ಆಗಿರುವ ಪ್ರಯೋಜನವನ್ನು ಹೇಳಿದರು.

ಯೋಗ ಸ್ವಾತಂತ್ರ್ಯ ಯೋಗ ಸಮೀತಿ ಸಂಚಾಲಕಿ ಪ್ರೇಮಾ ಗುಡದಿನ್ನಿ ಮಾತನಾಡಿ, ನಮ್ಮ ಆಹಾರ ಕ್ರಮವೇ ನಮ್ಮ ಆರೋಗ್ಯ ವಿಷಮಗೊಳ್ಳಲು ಕಾರಣವಾಗಿದ್ದು ನಿತ್ಯವೂ ಮನುಷ್ಯನ ದೇಹಕ್ಕೆ 80ಕ್ಕೂ ಹೆಚ್ಚು ವಿಷಕಾರಿ ಅಂಶಗಳು ಆಹಾರದ ಮೂಲಕ ಸೇವಿಸುತ್ತಿದ್ದೇವೆ. ಕ್ಯಾನ್ಸರ್ ಒಂದೇ ಅಲ್ಲ ಎಲ್ಲ ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಯೋಗಕ್ಕಿದೆ. ಅಡುಗೆ ಮನೆಯಿಂದ ಕುಕ್ಕರ್, ಮೈದಾ, ಸಕ್ಕರೆ, ಉಪ್ಪು ಅತಿಯಾದ ಬಳಕೆಯಿಂದ ದೂರವಿಟ್ಟು ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡಿದರೆ ಆರೋಗ್ಯದಿಂದ ಇರುತ್ತೇವೆ ಎಂದು ತಿಳಿಸಿದರು.
ಕಸಾಪ ಮಾಜಿ ಅಧ್ಯಕ್ಷ ಎಂ. ಬಿ. ನಾವದಗಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಪತ್ರಕರ್ತ ಶಂಕರ ಹೆಬ್ಬಾಳ, ಪುರಸಭೆ ಸದಸ್ಯರಾದ ಸಂಗಮ್ಮ ದೇವರಳ್ಳಿ, ಸಹನಾ ಬಡಿಗೇರ, ಕಾಂಗ್ರೆಸ್ ಮುಖಂಡೆ ಸರಸ್ವತಿ ಪೀರಾಪೂರ ಮಾತನಾಡಿದರು.

ಅಲ್ಲಲ್ಲಿ ಯೋಗ ದಿನಾಚರಣೆ : ಮುದ್ದೇಬಿಹಾಳ ತಾಲ್ಲೂಕಿನ ಹಲವು ಶಾಲೆ, ಕಾಲೇಜು ಸಂಘ ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಪಟ್ಟಣದ ಪೊಲೀಸ್ ಠಾಣೆ, ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್, ವಿದ್ಯಾಸ್ಪೂರ್ತಿ ಇಂಟರನ್ಯಾಶನಲ್ ಸ್ಕೂಲ್, ಬಿದರಕುಂದಿಯ ಆರ್. ಎಂ. ಎಸ್. ಎ, ಪ್ರಾರ್ಥನಾ ವಿದ್ಯಾಮಂದಿರ ಶಾಲೆಯಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ