Hiremurala-Kesapur road development work started

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಹಿರೇಮುರಾಳ-ಕೇಸಾಪೂರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ 2.20 ಲಕ್ಷ ಕೋಟಿ ರೂ.ಬಿಲ್ ಬಾಕಿ ಇರಿಸಿ ಹೋಗಿದ್ದು ಅದನ್ನು ಪಾವತಿಸುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲಿರಿಸಿ ಹಣಕಾಸಿನ ಅಶಿಸ್ತನ್ನು ತೋರಿಸಿದ್ದಕ್ಕೆ ಎರಡು ವರ್ಷ ಅಭಿವೃದ್ಧಿಗೆ ಅಲ್ಪ ಹಿನ್ನಡೆಯುಂಟಾಗಿದ್ದು ನಿಜ. ಆದರೆ, ಈಗ ಅಭಿವೃದ್ದಿ ಕೆಲಸಗಳಿಗೆ ಸರ್ಕಾರ ಅನುದಾನ ಹಂಚಿಕೆ ಮಾಡುತ್ತಿದೆ ಎಂದು ಶಾಸಕ ಸಿ. ಎಸ್. ನಾಡಗೌಡ ಹೇಳಿದರು.

ತಾಲ್ಲೂಕು ಕೇಸಾಪೂರ ಕ್ರಾಸ್‌ನಲ್ಲಿ ಭಾನುವಾರ ಲೋಕೋಪಯೋಗಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ಹಿರೇಮುರಾಳ-ಹುನಕುಂಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸನ್ 2025-26ರ ಆಯವ್ಯಯದಲ್ಲಿ ತಾಲ್ಲೂಕಿನ ನಾಲತವಾಡ-ಆಲೂರ, ಯರಗಲ್-ಕಮಲದಿನ್ನಿ, ಇಂಗಳಗೇರಿ -ಕೂಚಬಾಳ, ಹಡಗಲಿ- ಅಮರಗೋಳ ಸೇರಿದಂತೆ ಹೊಲಮನೆಗಳಿಗೆ ತಿರುಗಾಡುವ ರಸ್ತೆಗಳನ್ನು ಅಭಿವೃದ್ಧಿ ಮಾಡುವ ಬೇಡಿಕೆ ಇದ್ದು ಆದ್ಯತೆ ಮೇರೆಗೆ ಅಭಿವೃದ್ಧಿಗೊಳಿಸಲಾಗುತ್ತದೆ ಎಂದು ಹೇಳಿದರು.

ರಾಜ್ಯದ ಪ್ರಗತಿಪಥ ಯೋಜನೆಯಡಿಯಲ್ಲಿ 30 ಕಿ.ಮೀ ರಸ್ತೆ ಅಭಿವೃದ್ಧಿಗೆ 21.50 ಕೋಟಿ ಹಣ ಕೊಡುವುದಾಗಿ ತಿಳಿಸಿದ್ದು ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು.ವಿರೋಧ ಪಕ್ಷದವರ ಸುಳ್ಳು ಹೇಳಿಕೆಗಳನ್ನು ಜನರು ನಂಬಬೇಡಿ ಎಂದರು.

ಕೇಸಾಪೂರದ ಮುಖಂಡ ಎಂ. ಎಸ್. ದೇಶಮುಖ, ಕಾಂಗ್ರೆಸ್ ಮುಖಂಡ, ಪ್ರಥಮ ದರ್ಜೆ ಗುತ್ತಿಗೆದಾರ ಸಿ. ಬಿ. ಅಸ್ಕಿ, ಗ್ಯಾರಂಟಿ ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ತಂಗಡಗಿ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ, ಮುಖಂಡ ರಾಜುಗೌಡ ಕೊಂಗಿ, ಅಪ್ಪು ನಾಡಗೌಡ, ಹಿರೇಮುರಾಳ ಪಿಕೆಪಿಎಸ್ ಅಧ್ಯಕ್ಷ ಮಲ್ಲನಗೌಡ ಪಾಟೀಲ, ಭೋವಿ ಸಮಾಜದ ಮುಖಂಡ ಶ್ರೀನಿವಾಸ ಗೌಂಡಿ, ಮಹಾಂತಯ್ಯ ಹಿರೇಮಠ, ನಾಗಯ್ಯ ಹಾಲಗಂಗಾಧರಮಠ, ಗುತ್ತಿಗೆದಾರ ಶ್ರೀಶೈಲ ವಿಭೂತಿ ಮೊದಲಾದವರು ಇದ್ದರು.

ಆಳಂದ ಶಾಸಕ ಬಿ. ಆರ್. ಪಾಟೀಲ್ ಅವರು ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಲಂಚ ಕೊಡಬೇಕು ಎಂಬ ಆಡಿಯೋ ಬಹಿರಂಗಗೊಂಡಿರುವ ವಿಚಾರದ ಕುರಿತು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕ ನಾಡಗೌಡ, ನಾನು ಆಡಿಯೋ ಕೇಳಿದ್ದೇನೆ. ಅವರ ಕ್ಷೇತ್ರದಲ್ಲಿ ಯಾವನೋ ಒಬ್ಬ ಮಧ್ಯವರ್ತಿ ದಂಧಾ ಚಲ್ ರಹಾ ಕ್ಯಾ ಎಂದು ಕೇಳಿದ್ದಾನಂತೆ ಅದಕ್ಕೆ ಅವರು ಹೈ ಎಂದಿದ್ದಾರೆ. ಆದರೆ ಇವರು(ಬಿ.ಆರ್.ಪಾಟೀಲರು) ಒನ್‌ವೇ ಮಾತನಾಡಿದ್ದಾರೆ. ಜಮೀರ್ ಅಹ್ಮದ್ ಆಪ್ತ ಸಹಾಯಕರು ಪಾಟೀಲರ ಮಾತಿಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ನಮ್ಮ ಮತಕ್ಷೇತ್ರದಲ್ಲಿ ಸರ್ಕಾರ ಮನೆ ಕೊಟ್ಟರೆ ಬಡವರಿಗೆ ಕೊಟ್ಟಿರುತ್ತೇವೆ, ಇಲ್ಲದಿದ್ದರೆ ಇಲ್ಲ. ಹಣ ಪಡೆದುಕೊಂಡು ಮನೆ ಕೊಟ್ಟರೆ ಅವರು ನಮಗೆ ಓಟು ಹಾಕುತ್ತಾರೆಯೋ? ಎಂದು ಪ್ರಶ್ನಿಸಿದ ಅವರು, ಹಿಂದಿನ ಸರ್ಕಾರದಲ್ಲಿ ಕೊನೆಯ ಘಳಿಗೆಯಲ್ಲಿ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಮಾಡಿದ್ದರಿಂದಲೇ ಇಂದಗೂ ಅನುಮೋದನೆ ಆಗದೇ ಹಾಗೆ ಉಳಿದುಕೊಂಡಿವೆ ಎಂದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ