Adapt the biography of Hande Hanumappa Nayaka into the text

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಹಂಡೆ ಹನುಮಪ್ಪ ನಾಯಕರ ಜೀವನ ಚರಿತ್ರೆ ಪಠ್ಯದಲ್ಲಿ ಅಳವಡಿಸಿ

ಮುದ್ದೇಬಿಹಾಳ : ಹಂಡೇ ಹನುಮಪ್ಪ ನಾಯಕರ ಇತಿಹಾಸ ಈಗಾಗಲೇ ಆಂಧ್ರಪ್ರದೇಶದ ಸರ್ಕಾರ ತನ್ನ ಶಾಲೆಗಳಲ್ಲಿನ ಪಠ್ಯಪುಸ್ತಕದಲ್ಲಿ ಅಳವಡಿಸಿದೆ. ಕರ್ನಾಟಕ ಸರ್ಕಾರವೂ ಹಂಡೇ ಅರಸರ ಜೀವನ ಸಾಧನೆಯನ್ನು ತಿಳಿಸಲು ಪಠ್ಯದಲ್ಲಿ ಅವರ ಇತಿಹಾಸದ ಪಾಠ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಸಮಾಜದಿಂದ ಹೋರಾಟ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎಸ್. ಎಸ್. ಪಾಟೀಲ್ ಹೇಳಿದರು.

ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ. ಎಲ್. ಬಿರಾದಾರ ಮಂಗಲಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವೀರಶೈವ ಲಿಂಗಾಯತ ಹಂಡೇವಜೀರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದಿಂದ ಏರ್ಪಡಿಸಿದ್ದ ಕೂಡಲಸಂಗಮದಲ್ಲಿ ಜರುಗಿದ ರಾಜ್ಯಮಟ್ಟದ ಸಮಾವೇಶದ ಯಶಸ್ವಿಗೆ ಶ್ರಮಿಸಿದವರಿಗೆ ಅಭಿನಂದಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರ್ನಾಟಕ ವೀರಶೈವ ಲಿಂಗಾಯತ ಹಂಡೆವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಶಂಕರಗೌಡ ರಾಯಗೊಂಡ ಮಾತನಾಡಿ, ಕೂಡಲಸಂಗಮದಲ್ಲಿ ಫೆ.2 ರಂದು ನಡೆದ ಸಮಾಜದ ರಾಜ್ಯಮಟ್ಟದ ಸಮಾವೇಶ ಯಶಸ್ವಿಗೆ ತಾಲ್ಲೂಕಿನಿಂದ ಸಮಾಜದ ಬಾಂಧವರು 12 ಲಕ್ಷ ರೂ.ಗಳವರೆಗೆ ಉದಾರವಾದ ದೇಣಿಗೆ ನೀಡಿ ಸಹಕಾರ ಮಾಡಿದ್ದಾರೆ ಎಂದು ತಿಳಿಸಿದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ. ಎಂ. ಬೆಳಗಲ್ ಮಾತನಾಡಿ, ಸಮಾಜದಲ್ಲಿರುವ ಬಡ ಮಕ್ಕಳ ಶಿಕ್ಷಣದ ವೆಚ್ಚಕ್ಕಾಗಿ ಸಮಾಜದ ಬಾಂಧವರು ಉಳಿತಾಯ ಮಾಡಿ ಅದನ್ನು ಅರ್ಹರಿಗೆ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಆಗಬೇಕು ಎಂದರು.

ಸಮಾಜದ ರಾಜ್ಯ ಉಪಾಧ್ಯಕ್ಷ ರಾಜಶೇಖರ ಮೇಗೇರಿ, ಸಮಾಜದ ತಾಲ್ಲೂಕು ಅಧ್ಯಕ್ಷ, ವಕೀಲರಾದ ಎಂ. ಬಿ. ಬಿರಾದಾರ, ಸಮಾಜದ ಜಿಲ್ಲಾಧ್ಯಕ್ಷ ಸಂಗಮೇಶ ಕರಭಂಟನಾಳ, ಎಸ್. ಎಸ್. ಭೂತಲ್ ಮಾತನಾಡಿದರು.

ಯುವ ಘಟಕದ ರಾಜ್ಯಾಧ್ಯಕ್ಷ ಸಂಗನಗೌಡ ಯಂಕಂಚಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭು ಬೆಳ್ಳಿ, ಗೌರವಾಧ್ಯಕ್ಷ ಕೆ. ಎನ್. ಗೌಡರ, ಯುವ ಘಟಕದ ಜಿಲ್ಲಾಧ್ಯಕ್ಷ ನಾಗರಾಜ ತಂಗಡಗಿ, ಮುಖಂಡರಾದ ಬಿ. ಎಲ್. ಬಿರಾದಾರ, ಹಣಮಗೌಡ ಪಾಟೀಲ, ಮಂಜುನಾಥ ಪಾಟೀಲ, ಎಸ್. ಬಿ. ಹಂಡರಗಲ್, ಹೇಮಾ ಬಿರಾದಾರ, ಸಂಗಮೇಶ ಶಿವಣಗಿ ಇದ್ದರು.

ಕಾರ್ಯಕ್ರಮದಲ್ಲಿ ಆಲಕೊಪ್ಪರದ ವಿದ್ಯಾರ್ಥಿನಿ ಗೀತಾ ಬಿರಾದಾರ ಎಸ್.ಎಸ್.ಎಲ್.ಸಿಯಲ್ಲಿ ಶೇ.96ರಷ್ಟು ಅಂಕ ಪಡೆದುಕೊಂಡ ಹಿನ್ನೆಲೆಯಲ್ಲಿ ಆಕೆಗೆ ಸಮಾಜದ ಬಾಂಧವರು ಶೈಕ್ಷಣಿಕ ವೆಚ್ಚಕ್ಕೆಂದು 16 ಸಾವಿರ ರೂ. ಆರ್ಥಿಕ ನೆರವು ನೀಡಿದರು.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ