Yoga Ratna-2025 Award Ceremony

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಟಿವಿ ಮಾಧ್ಯಮದ ಸುದ್ದಿ ನಿರೂಪಕರಿಗೆ, ಸಾಮಾಜಿಕ ಜಾಲತಾಣದಲ್ಲಿ ಯೋಗ ಹಾಗೂ ಫಿಟ್ ನೆಸ್ ಕುರಿತು ಅರಿವು ಮೂಡಿಸುತ್ತಿರುವ ಇನ್ ಫ್ಲುಯನ್ಸರ್ ಗಳಿಗೆ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆ.

ಶ್ವಾಸಗುರು ಶ್ರೀ ವಚನಾನಂದ ಸ್ವಾಮೀಜಿ ಸಂಸ್ಥಾಪಕರು, ಶ್ವಾಸ ಯೋಗ ಸಂಸ್ಥೆ ಹಾಗೂ ಖ್ಯಾತ ಯೋಗ ಗುರು ಇವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಮಾನ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ಹಾಗೂ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಎಸ್ ಲಾಡ್ ಅವರು ಉಪಸ್ಥಿತರಿರಲಿದ್ದಾರೆ.

ಖ್ಯಾತ ಗಾಯಕರಾದ ಎಮ್ ಡಿ ಪಲ್ಲವಿ ಹಾಗೂ ವಾಸು ದೀಕ್ಷಿತ್ ಅವರಿಂದ ಸಂಗೀತ ಕಾರ್ಯಕ್ರಮ ಹಾಗೂ India’s Got Talent ಸ್ಪರ್ಧಾಳುಗಳಿಂದ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ