Minister Santhosh Lad launched our Nagar, Swachh Nagar special campaign

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ʼನಮ್ಮ ನಗರ; ಸ್ವಚ್ಛ ನಗರʼ ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ಮಾಳಮಡ್ಡಿ ಸುತ್ತಮುತ್ತಲಿನ ಪ್ರದೇಶ, ರೈಲು ನಿಲ್ದಾಣ ರಸ್ತೆ ಸಮೀಪ ಹಾಗೂ ಮಹಿಷಿ ರಸ್ತೆ ಹತ್ತಿರ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಚ್ಛತಾ ಅಭಿಯಾನಕ್ಕೆ ಸಾರ್ವಜನಿಕರಾದ ನೀವು ಕೈ ಜೋಡಿಸಿ ನಮ್ಮ ನಗರ, ಸ್ವಚ್ಛ ನಗರ ಎಂಬ ಅಭಿಮಾನ ಪ್ರಜ್ಞೆ ನಗರದ ಪ್ರತಿ ನಾಗರಿಕರಲ್ಲಿ ಇರಬೇಕು. ಅಂದಾಗ ಮಾತ್ರ ನಗರದ ಸೌಂದರ್ಯ ಹೆಚ್ಚಿಸಲು ಮತ್ತು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಮಹಾನಗರ ಪಾಲಿಕೆಯಿಂದ ಆರಂಭಿಸಿರುವ ಸ್ವಚ್ಛತಾ ಅಭಿಯಾನಕ್ಕೆ ಎಲ್ಲರೂ ಕೈ ಜೋಡಿಸಿ ಹಾಗೂ ನಗರ ನಿವಾಸಿಗಳು ಸಕ್ರಿಯವಾಗಿ ಭಾಗವಹಿಸಿದರೆ, ನಗರ ಸ್ವಚ್ಛತೆ ಕಾಪಾಡಬಹುದು ಎಂದು ಸಾರ್ವಜನಿಕರಿಗೆ ತಿಳಿಸಿದರು.

ಮಹಾನಗರ ಪಾಲಿಕೆಯಿಂದ ಈ ಸ್ವಚ್ಛತಾ ಅಭಿಯಾನವನ್ನು ಪ್ರತಿವಾರ ನಡೆಸಬೇಕು. ಅವಳಿನಗರದ ನಾಗರಿಕರಲ್ಲಿ ಹೆಚ್ಚೆಚ್ಚು ಸಿವಿಕ್ ಸೆನ್ಸ್ ಬಳಸಬೇಕು. ಪ್ರತಿಯೊಬ್ಬರು ಪೌರ ಕಾರ್ಮಿಕರಂತೆ ತಮ್ಮ ಮನೆ ಹಾಗೂ ತಮ್ಮ ಮನೆ ಸುತ್ತಮುತ್ತಲಿನ ಪ್ರದೇಶವನ್ನು ತಾವೇ ಪ್ರತಿದಿನ ಸ್ವಚ್ಛವಾಗಿ ಇಡಬೇಕು. ತಮ್ಮ ಮನೆಯ ಹಿಂದೆ ಮುಂದೆ ಸರಕಾರಿ ಜಮೀನು, ರಸ್ತೆ ಇದ್ದರೂ ಅದು ತಮ್ಮದೆಂದು ತಿಳಿದು ಕ್ಲೀನ್ ಮಾಡಿ ಇಟ್ಟಕೊಳ್ಳಬೇಕು. ಇದು ನಮ್ಮ ನಗರ ಎಂಬ ಹೆಮ್ಮೆ ಮತ್ತು ಇದು ನನ್ನ ಕೆಲಸ ಎಂಬ ಭಾವನೆ ಇದ್ದಾಗ ಮಾತ್ರ ನಗರ ಸುಂದರ, ಹಸಿರು ಆಗಲು ಸಾಧ್ಯವೆಂದು ಸಚಿವರು ತಿಳಿಸಿದರು.

ಧಾರವಾಡ ನಗರದಲ್ಲಿ ರೈಲ್ವೆ ಸ್ಟೇಶನ್, ಮಾಳ ಮಡ್ಡಿ, ವನವಾಸಿ ರಾಮಮಂದಿರ, ಕಬ್ಬೂರ ರಸ್ತೆ ಮತ್ತು ರಾಮನಗೌಡ ಆಸ್ಪತ್ರೆ, ಮಾಳಾಪುರ ಲಾಸ್ಟ್ ಬಸ್ ನಿಲ್ದಾಣ, ಮತ್ತು ಶಿವಾಜಿ ಸರ್ಕಲ್, ಹೆಬ್ಬಳ್ಳಿ ಅಗಸಿ, ಚರಂತಿಮಠ ಗಾರ್ಡನ್, ಹೊಸಯಲ್ಲಾಪುರ ರಸ್ತೆ ಮತ್ತು ಪೌಲ್ ಕ್ಯಾಂಟಿನ್, ಸರಸಗಂಗಾ ಶಾಲೆ, ಜನ್ನತನಗರ ಪ್ರದೇಶಗಳಿಗೆ ಭೇಟಿ ನೀಡಿ, ಪೌರಕಾರ್ಮಿಕರೊಂದಿಗೆ ಸ್ವಚ್ಛತಾ ಕಾರ್ಯಕ್ಕೆ ಕೈ ಜೋಡಿಸಿ, ಸಲಿಕೆಯಿಂದ ತ್ಯಾಜ್ಯ ಸಂಗ್ರಹಿಸಿದರು, ಬುಟ್ಟಿ ತುಂಬಿ ಕಸದ ಟ್ರ್ಯಾಕ್ಟರಿಗೆ ಸ್ವತಃ ಕಸ ಹಾಕಿದರು. ಕಸಬರಿಗೆಯಿಂದ ಕಸಗೂಡಿಸಿದರು. ಸಚಿವರು, ಜಿಲ್ಲಾಧಿಕಾರಿಗಳು ಬುಟ್ಟಿ, ಕಸಬರಿಗೆ ಹಿಡಿದು ಸ್ವಚ್ಛತೆಗೆ ಕೈ ಜೋಡಿಸಿದ್ದರಿಂದ, ಪೌರಕಾರ್ಮಿಕರ ಆತ್ಮಸ್ಥೈರ್ಯ ಹೆಚ್ಚಿ, ಅವರ ಅಭಿಮಾನ, ಗೌರವ, ಹೆಮ್ಮೆಯಿಂದ ಇನ್ನಷ್ಟು ಕೆಲಸ ಮಾಡಲು ಸ್ಫೂರ್ತಿ ದೊರೆಯಿತು.

ಅಭಿಯಾನದಲ್ಲಿ ಜಿ.ಪಂ. ಸಿಇಓ ಭುವನೇಶ ಪಾಟೀಲ, ಎಸ್.ಪಿ. ಡಾ.ಗೋಪಾಲ ಬ್ಯಾಕೋಡ, ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ ಆದಿಯಾಗಿ ಜಿಲ್ಲೆಯ ಎಲ್ಲ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ತಮ್ಮ ಇಲಾಖೆ, ಕಚೇರಿ ಸಿಬ್ಬಂದಿಗಳೊಂದಿಗೆ ಭಾಗವಹಿಸಿ, ಸಚಿವರ ಕನಸಿನ ಸ್ವಚ್ಛನಗರ ಅಭಿಯಾನಕ್ಕೆ ಕೈ ಜೋಡಿಸಿ, ಕಸಕಡ್ಡಿ, ಚರಂಡಿ ತ್ಯಾಜ್ಯ ತೆಗೆದರು.

ಕೊಳೆತ ಕಸಕಡ್ಡಿ ಚಲ್ಲಬೇಡಿ: ಚರಂಡಿ ಸ್ವಚ್ಛಗೊಳಿಸುವುದು, ತ್ಯಾಜ್ಯದ ಕಸ ತುಂಬುವುದು, ಪರಿಕರಗಳಿಂದ ತ್ಯಾಜ್ಯ ತುಂಬುವುದರ ಮೂಲಕ ಅವರು ಎಲ್ಲೆಂದರಲ್ಲಿ ಕಸ, ಮುಸುರೆ, ತ್ಯಾಜ್ಯ ಚೆಲ್ಲದಂತೆ ಹಾಗೂ ಅಲ್ಲಿಯೇ ತರಕಾರಿ ಮಾರುವವರಿಗೆ ಬೇಡವಾದ, ಕೊಳೆತ ತಪ್ಪಲು, ತರಕಾರಿಯನ್ನು ಎಲ್ಲಿ ಬೇಕಂದರಲ್ಲಿ ಎಸೆಯದಂತೆ ಸಚಿವರು ವಿನಂತಿಸಿದರು.

ಹೂಳು ತುಂಬಿದ ಚರಂಡಿ ಕ್ಲೀನ್: ಧಾರವಾಡ ರೈಲ್ವೆ ಸ್ಟೇಷನ್ ರಸ್ತೆ ಹತ್ತಿರ ಹುಳು ತುಂಬಿದ ಗಟಾರು ಸ್ವತಃ ಅವರೇ ಸ್ವಚ್ಛಗೊಳಿಸಿದರು, ಕಸಚಲ್ಲಿದ ಬ್ಲ್ಯಾಕ್ ಸ್ಪಾಟ್ ಗಳನ್ನು ಎಲ್ಲಾ ಅಧಿಕಾರಿಗಳು ಸೇರಿಕೊಂಡು ಸ್ವಚ್ಛತೆ ಕಾರ್ಯ ಮಾಡಿದರು. ಮನೆಯ ಕಾಂಪೌಂಡಿಗೆ ಹಚ್ಚಿ ಫುಟಪಾತ್ ಮೇಲೆ ಮಣ್ಣಿನ ರಾಶಿ ಬಿದ್ದಿರುವುದನ್ನು ಕಂಡು ತಕ್ಷಣವೇ ಜೆಸಿಬಿ ಮುಖಾಂತರ ತೆರವುಗೊಳಿಸಿದರು. ರಸ್ತೆಯಿಂದ ಮೇಲಿರುವ ಮತ್ತು ಕೆಳಗಿರುವ ಮ್ಯಾನ್ ಹೋಲ್ ಮುಚ್ಚಳಗಳು, ಕಸ ತುಂಬಿದ ಖಾಲಿ ಸೈಟ್‍ಗಳನ್ನು ಪರಿಶೀಲಿಸಿ, ತಕ್ಷಣ ಸಂಬಂಧಿಸಿದವರ ಮೇಲೆ ಕ್ರಮಕೈಗೊಳ್ಳಲು ಸೂಚಿಸಿದರು.

ಸ್ವಚ್ಛತಾ ಅಭಿಯಾನದಲ್ಲಿ ಐಎಎಸ್ ಪ್ರೊಬೇಷನರಿ ಅಧಿಕಾರಿ ರಿತಿಕಾ ವರ್ಮಾ, ಮಹಾನಗರಪಾಲಿಕೆ ಮಹಾಪೌರ ರಾಮಪ್ಪ ಬಡಿಗೇರ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ ಸಂತೋಷ ಬಿರಾದಾರ, ಶಾಲಾ ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಎಸ್. ಕೆಳದಿಮಠ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಮಹಾನಗರಪಾಲಿಕೆಯ ಸದಸ್ಯರು, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧ್ಯಾಪಕರು, ಶಿಕ್ಷಕರು, ಇತರ ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ಪೌರಕಾರ್ಮಿಕರು ಭಾಗವಹಿಸಿದ್ದರು.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ