1st State Pencak Silas Games

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗಳಿಸಿದ್ದಾರೆ ಎಂದು ತರಬೇತಿದಾರ ಶಿವಕುಮಾರ ಶಾರದಳ್ಳಿ ತಿಳಿಸಿದರು.

ಮುದ್ದೇಬಿಹಾಳದ ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಈ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಟೂರ್ನಿಯ ಆಯೋಜಕ ಐಪಿಎಸ್‌ಎಫ್ ತಾಂತ್ರಿಕ ನಿರ್ದೇಶಕ ಅಬ್ದುಲ್ ರಜಾಕ್, ಐಪಿಎಸ್‌ಎಫ್ ಉಪಾಧ್ಯಕ್ಷ ವಿಜಯ ಹಂಚನಾಳ ಪ್ರಶಸ್ತಿ ಪ್ರದಾನ ಮಾಡಿದರು.

ವಿದ್ಯಾರ್ಥಿಗಳ ಸಾಧನೆಗೆ ಬಿಎಎಸ್ ಇಂಟರ್‌ನ್ಯಾಷನಲ್ ಸ್ಕೂಲ್ ಅಧ್ಯಕ್ಷ ಮಹಾಂತಗೌಡ ಬಿರಾದಾರ, ಪ್ರಾಚಾರ್ಯ ಸುಪರ್ಣದಾಸ್, ಕಾರ್ಯದರ್ಶಿ ಎ. ಎಸ್. ಬಿರಾದಾರ, ಬಿಎಎಸ್ ಟ್ರಸ್ಟ್ ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ ಸಿಬ್ಬಂದಿ ಅಭಿನಂದಿಸಿದ್ದಾರೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು