Shankara Hebba is the unopposed choice for Banashankari Patta's cooperative society

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶಂಕರ ಈ. ಹೆಬ್ಬಾಳ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.

ಇಲ್ಲಿನ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ತುರ್ತು ಸಭೆಯಲ್ಲಿ ಸರ್ವ ಸದಸ್ಯರು ಈ ಆಯ್ಕೆಗೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದರು.

ಸಂಘದ ಈ ಹಿಂದಿನ ಅಧ್ಯಕ್ಷರಾಗಿದ್ದ ಬಸಪ್ಪ ಹೆಬ್ಬಾಳ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಿರ್ದೇಶಕ ಶಂಕರ ಹೆಬ್ಬಾಳ ಅವರನ್ನು ಅಧ್ಯಕ್ಷರಾಗಿ ಸರ್ವ ಸದಸ್ಯರು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಸಂಘದ ಪ್ರಧಾನ ವ್ಯವಸ್ಥಾಪಕರಾದ ವಿಜಯಲಕ್ಷ್ಮಿ ಪ್ಯಾಟಿಗೌಡರ ತಿಳಿಸಿದರು.

ಬಸಪ್ಪ ಹೆಬ್ಬಾಳ ಅವರ ನಿಧನದಿಂದ ತೆರವಾದ ನಿರ್ದೇಶಕ ಸ್ಥಾನಕ್ಕೆ ಅವರ ಪುತ್ರ ಚಂದ್ರಕಾಂತ ಹೆಬ್ಬಾಳ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರಮೇಶ ಹೆಬ್ಬಾಳ, ನಿರ್ದೇಶಕರಾದ ಸಂಗಪ್ಪ ಕಲ್ಲುಂಡಿ, ಸುಭಾಷ ರುದ್ರಗಂಟಿ, ಉಮೇಶ ಪ್ಯಾಟಿಗೌಡರ, ದ್ಯಾವಪ್ಪ ಹುಣಶ್ಯಾಳ, ಬಸಪ್ಪ ಹುಣಶ್ಯಾಳ, ಬಸವರಾಜ ಅಗಸಬಾಳ, ಶಂಕ್ರಮ್ಮ ಪ್ಯಾಟಿಗೌಡರ, ಜಯಶ್ರೀ ಹೆಬ್ಬಾಳ, ಚಂದ್ರಕಾಂತ ಹೆಬ್ಬಾಳ ಇದ್ದರು.

ಪ್ರಧಾನ ವ್ಯವಸ್ಥಾಪಕರಾದ ವಿಜಯಲಕ್ಷ್ಮಿ ಪ್ಯಾಟಿಗೌಡರ ನಿರೂಪಿಸಿ ವಂದಿಸಿದರು. ಅಗಲಿದ ಹಿಂದಿನ ಅಧ್ಯಕ್ಷ ಬಸಪ್ಪ ಹೆಬ್ಬಾಳ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು.

ಮುದ್ದೇಬಿಹಾಳದಲ್ಲಿ ಕಳೆದ ಇಪ್ಪತೈದು ವರ್ಷಗಳ ಹಿಂದೆ ಆರಂಭಗೊಂಡಿರುವ ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ ನನ್ನನ್ನು ಆಯ್ಕೆ ಮಾಡಿರುವ ಸರ್ವ ಆಡಳಿತ ಮಂಡಳಿ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.ನನ್ನ ಅವಧಿಯಲ್ಲಿ ಸಂಘದ ಗ್ರಾಹಕರು, ಶೇರುದಾರರ ವಿಶ್ವಾಸ ವೃದ್ಧಿಸಿ ಸಿಬ್ಬಂದಿಯ ಸಹಕಾರದೊಂದಿಗೆ ಸಂಘದ ಅಭಿವೃದ್ಧಿಗೆ ಶ್ರಮಿಸುತ್ತೇನೆ.
–ಶಂಕರ ಈ.ಹೆಬ್ಬಾಳ,ಅಧ್ಯಕ್ಷ, ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘ

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ