Implementation of many programs for social security of unorganized workers: Minister Lad

ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಹಲವು ಕಾರ್ಯಕ್ರಮ ಜಾರಿ: ಸಚಿವ ಲಾಡ್

ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಹಲವು ಕಾರ್ಯಕ್ರಮ ಜಾರಿ: ಸಚಿವ ಲಾಡ್

ಓಬದೇನಹಳ್ಳಿ (ಬೆಂ.ಗ್ರಾ.ಜಿಲ್ಲೆ) ಜುಲೈ10: ರಾಜ್ಯ ಸರ್ಕಾರವು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿದೆ. ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಅನುಷ್ಠಾನಗೊಳಿಸಲಾಗಿದ್ದು ಈ ಯೋಜನೆಯಿಂದ 23 ಅಸಂಘಟಿತ ವರ್ಗದ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಹೇಳಿದರು.

ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವುಗಳ ಸಂಯುಕ್ತಾಶ್ರಯದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಓಬದೇನಹಳ್ಳಿಯಲ್ಲಿ ನಿರ್ಮಿಸಿರುವ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಉದ್ಘಾಟನೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 91 ಅಸಂಘಟಿತ ವಲಯಗಳನ್ನು ಗುರುತಿಸಲಾಗಿದ್ದು, ಕಾರ್ಮಿಕ ಇಲಾಖೆಯ ಮಂಡಳಿಗಳ ಮೂಲಕ ಹಲವು ಸೌಲಭ್ಯ ಒದಗಿಸುತ್ತಿದ್ದೇವೆ. ಕಾರ್ಮಿಕರಿಗೆ ಪಿಂಚಣಿ, ಹೆರಿಗೆ, ಅಂತ್ಯಕ್ರಿಯೆ, ಶೈಕ್ಷಣಿಕ, ವೈದ್ಯಕೀಯ, ಅಪಘಾತ ಮದುವೆ ಸಹಾಯಧನ, ತಾಯಿ ಮಗು ಸಹಾಯ ಹಸ್ತ ಮುಂತಾದ ಸೌಲಭ್ಯಗಳನ್ನು ನೀಡಲಾಗುತ್ತಿದೆ. 23 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರಿಗೆ ಉಚಿತವಾಗಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಅಸಂಘಟಿತ ವಲಯದ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರು, ಪತ್ರಿಕಾ ವಿತರಕ ಕಾರ್ಮಿಕರು ಹಾಗೂ ಖಾಸಗಿ ವಾಣಿಜ್ಯ ಸಾರಿಗೆ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ಪ್ರತ್ಯೇಕ ಯೋಜನೆ ರೂಪಿಸಲಾಗಿದೆ ಎಂದರು.

ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ: ಕರ್ನಾಟಕ ಸರ್ಕಾರವು ರಾಜ್ಯದ ಗಿಗ್ ಕಾರ್ಮಿಕರಿಗಾಗಿ ವಿಶೇಷ ವಿಮಾ ಯೋಜನೆಯನ್ನು ಜಾರಿಗೊಳಿಸಿದೆ. ಸ್ವಿಗ್ಗಿ, ಜೊಮ್ಯಾಟೋ, ಅಮೆಜಾನ್, ಫ್ಲಿಪ್‌ಕಾರ್ಟ್, ಬಿಗ್‌ಬಾಸ್ಕೆಟ್ ಮುಂತಾದ ಇ-ಕಾಮರ್ಸ್ ಸಂಸ್ಥೆಗಳಲ್ಲಿ ಡೆಲಿವರಿ ಕೆಲಸ ಮಾಡುವವರಿಗೆ ಹಲವು ಪ್ರಯೋಜನಗಳನ್ನು ನೀಡುತ್ತಿದೆ. ಅಪಘಾತದಲ್ಲಿ ಮೃತಪಟ್ಟವರಿಗೆ ಮೊದಲು ಅವರಿಗೆ ರೂ. 2 ಲಕ್ಷ ನೀಡಲಾಗುತ್ತಿತ್ತು, ಈಗ ರೂ. 5 ಲಕ್ಷ ಕೊಡುತ್ತಿದ್ದೇವೆ. ಇದರ ಉದ್ದೇಶ ಅವರ ಕುಟುಂಬಕ್ಕೆ ಆರ್ಥಿಕವಾಗಿ ಅವರ ಜೀವನ ನಡೆಸಲು ಆಸರೆಯಾಗಬೇಕು ಎನ್ನುವುದು ನಮ್ಮ ಆಶಯ ಎಂದರು.

ಆಶಾದೀಪ ಯೋಜನೆ: ರಾಜ್ಯ ಸರ್ಕಾರವು, ಖಾಸಗಿ ವಲಯದ ಕೈಗಾರಿಕೆ, ಕಾರ್ಖಾನೆಗಳಲ್ಲಿ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಹೆಚ್ಚು ಹೆಚ್ಚು ನೇಮಕಾತಿ ಮಾಡಿಕೊಳ್ಳಲು ಮಾಲೀಕರನ್ನು/ ಉದ್ಯೋಗದಾತರನ್ನು ಉತ್ತೇಜಿಸುವ ದೃಷ್ಟಿಯಿಂದ ಹಾಗೂ ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಪಡೆಯಲು ಅನುಕೂಲವಾಗುವಂತೆ ಆಶಾದೀಪ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ಮಾಲೀಕರು ಪಾವತಿಸುವ ಇ.ಎಸ್.ಐ. ಮತ್ತು ಇ.ಪಿ.ಎಫ್. ವಂತಿಕೆ ಮರುಪಾವತಿ ಮಾಡಲಾಗುವುದು. ಅಪ್ರೆಂಟಿಸ್ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳ ಶಿಷ್ಯವೇತನ (Stipend) ಮರುಪಾವತಿ ಮಾಡಲಾಗುವುದು. ಕೌಶಲ್ಯಾಭಿವೃದ್ಧಿ ಇಲಾಖೆಯ ಮುಖಾಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಗಳನ್ನು ಏರ್ಪಡಿಸಿ, ಸ್ವಾವಲಂಬಿಗಳಾಗಲು ಉತ್ತೇಜನ ನೀಡಲಾಗುತ್ತದೆ ಎಂದರು.

ದೊಡ್ಡಬಳ್ಳಾಪುರದಲ್ಲಿನ ಇಎಸ್ಐ ಆಸ್ಪತ್ರೆ ಕಟ್ಟಡಕ್ಕೆ ಸೌಲಭ್ಯ ಒದಗಿಸಲು ಕೇಂದ್ರ ಸಚಿವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಹೆಚ್ ಮುನಿಯಪ್ಪ ಅವರು ವಸತಿ ಸಮುಚ್ಚಯಗಳನ್ನು ಉದ್ಘಾಟಿಸಿ ಮಾತನಾಡಿದರು. ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಭಾರತಿ, ಕಾರ್ಮಿಕ ಇಲಾಖೆ ಆಯುಕ್ತ ಡಾ. ಎಚ್‌. ಎನ್‌. ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಎ.ಬಿ. ಬಸವರಾಜು, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಮಾಜಿ ಶಾಸಕರಾದ ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿಶ್ವನಾಥ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ