Release of brochure of the conference: On 24 Kuruba Community Public Awareness Conference

ಸಮಾವೇಶದ ಕರಪತ್ರ ಬಿಡುಗಡೆ : ಆ. 24 ರಂದು ಕುರುಬ ಸಮುದಾಯ ಜನಜಾಗೃತಿ ಸಮಾವೇಶ

ಸಮಾವೇಶದ ಕರಪತ್ರ ಬಿಡುಗಡೆ : ಆ. 24 ರಂದು ಕುರುಬ ಸಮುದಾಯ ಜನಜಾಗೃತಿ ಸಮಾವೇಶ

ಮುದ್ದೇಬಿಹಾಳ : ನಗರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೇದಿಕೆ ಮತ್ತು ಅಹಿಂದ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಕುರುಬ ಸಮುದಾಯದ ಮುಖಂಡರ ಜನಜಾಗೃತಿ ಸಮಾವೇಶ ಆ. 24 ರಂದು ಮುದ್ದೇಬಿಹಾಳದ ವಿಜಯ ಮಹಾಂತೇಶ ಮಂಗಲ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಕೀಲ ಪಿ.ಬಿ.ಮಾತಿನ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ಕುರುಬ ಸಮುದಾಯದ ಜನಜಾಗೃತಿ ಸಮಾವೇಶದ ಕರಪತ್ರವನ್ನು ಬಿಡುಗಡೆ ಮಾಡಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಕುರುಬ ಸಮಾಜದ ನಾಯಕರು ಭಾಗವಹಿಸಲಿದ್ದು ಕುರುಬ ಸಮುದಾಯದ ಎಸ್‌ಟಿ ಮೀಸಲಾತಿ ಜಿಲ್ಲಾ ಕೇಂದ್ರಗಳಲ್ಲಿ ಕನಕಶ್ರೀ ಭವನ, ಐಎಎಸ್, ಕೆಎಎಸ್ ಪರೀಕ್ಷೆಯ ತರಬೇತಿ ಆರಂಭಿಸುವುದು ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗಾಗಿ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

ಸಮಾಜದ ಮುಖಂಡರಾದ ಎಂ. ಬಿ. ಗುಬಚಿ, ವಕೀಲರಾದ ಎಸ್. ಎಸ್. ಬಿರಾದಾರ, ಎಚ್. ಕೆ. ವಾಲೀಕಾರ, ಆರ್. ಎನ್. ದೊಡ್ಡಮನಿ, ಎಸ್. ಎಸ್. ಹುಡೇದ, ಎಲ್. ಎಸ್ ಮೇಟಿ, ವೈ. ವೈ. ಪೂಜಾರಿ ಎಸ್. ಜಿ. ಪಾಟೀಲ್, ಜಗದೀಶ ಬಿರಾದಾರ ಇದ್ದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ