Ju. On the 30th, the first chariot arrived at Kuntoji from Koppal

ಜು. 30 ರಂದು ಕೊಪ್ಪಳದಿಂದ ಕುಂಟೋಜಿಗೆ ಪ್ರಥಮ ರಥ ಆಗಮನ

ಜು. 30 ರಂದು ಕೊಪ್ಪಳದಿಂದ ಕುಂಟೋಜಿಗೆ ಪ್ರಥಮ ರಥ ಆಗಮನ

ಮುದ್ದೇಬಿಹಾಳ : ತಾಲೂಕಿನ ಕುಂಟೋಜಿ (ನಂದಿ) ಬಸವೇಶ್ವರ ಹಾಗೂ ಸಂಗಮೇಶ್ವರ ದೇವಸ್ಥಾನದ ಜಾತ್ರೆ ಶ್ರಾವಣ ಮಾಸದ ಕೊನೆಯ ಸೋಮವಾರದಿಂದ ಐದು ದಿನಗಳವರೆಗೆ ಜರುಗಲಿದ್ದು ದೇವಸ್ಥಾನದ ಪ್ರಥಮ ರಥೋತ್ಸವ ಈ ಬಾರಿ ಜಾತ್ರೆಯಲ್ಲಿ ಜರುಗಲಿದೆ ಎಂದು ಕುಂಟೋಜಿ ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ಹೇಳಿದರು.

ತಾಲ್ಲೂಕಿನ ಕುಂಟೋಜಿ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಥಮ ರಥವನ್ನು ಕೊಪ್ಪಳದಿಂದ ತರುವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕುಂಟೋಜಿ ಗ್ರಾಮದ ಮತ್ತು ಸುತ್ತಮುತ್ತಲಿನ ಊರುಗಳು, ನಗರ ಮತ್ತು ಬೇರೆ ಬೇರೆ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಬಸವಣ್ಣನ ಭಕ್ತರು ದೇಣಿಗೆ ನೀಡಿ ಕೊಪ್ಪಳದ ಜಕಣಾಚರ‍್ಯ ಮತ್ತು ಅಮೋಘವರ್ಷ ನೃಪತುಂಗ ಪ್ರಶಸ್ತಿ ವಿಜೇತ ರಥಶಿಲ್ಪಿ ಮಲ್ಲಪ್ಪ ಬಡಿಗೇರ ಇವರು ತಮ್ಮ ಎಂ. ಜಿ. ರಥಶಿಲ್ಪಿ ಕಲಾ ಕೇಂದ್ರದಲ್ಲಿ ಸಂಪೂರ್ಣ ಉಚಿತವಾಗಿ ನಿರ್ಮಿಸಿರುವ ಸಾಗವಾನಿ ಮರದ ರಥವನ್ನು ಜು.30 ರಂದು ಮುದ್ದೇಬಿಹಾಳ ನಗರದ ಪಿಲೇಕೆಮ್ಮ ದೇವಿ ದೇವಸ್ಥಾನದಿಂದ ಕುಂಟೋಜಿ ಗ್ರಾಮದವರೆಗೆ ಭವ್ಯ ಮೆರವಣಿಗೆಯ ಮುಖಾಂತರ ಸ್ವಾಗತಿಸಲಾಗುವುದು ಎಂದರು.

ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಜು.27 ರಂದು ರಥವನ್ನು ತರಲು ಕುಂಟೋಜಿಯಿಂದ ಭಕ್ತರು ಮತ್ತು ದೇವಸ್ಥಾನ ಕಮೀಟಿಯವರು ಟ್ರ್ಯಾಕ್ಟರ್ ಮುಖಾಂತರ ಕೊಪ್ಪಳಕ್ಕೆ ತೆರಳಿಲಿದ್ದಾರೆ. ಜುಲೈ 29 ರಂದು ಬೆಳಿಗ್ಗೆ ಕೊಪ್ಪಳದಿಂದ ರಥವನ್ನು ತೆಗೆದುಕೊಂಡು ಹೊರಟು ಅಂದೇ ಸಂಜೆ ಮುದ್ದೇಬಿಹಾಳ ನಗರಕ್ಕೆ ಆಗಮಿಸಿ, 30ರಂದು ಪಿಲೇಕೆಮ್ಮ ದೇವಾಸ್ಥಾನದಿಂದ ರಥವನ್ನು ಮತ್ತು ಅದರ ಜೊತೆಗೆ 21 ಕಿಲೋ ತೂಕದ ಬಸವಣ್ಣ ಮತ್ತು ಸಂಗಮೇಶ್ವರನ ಬೆಳ್ಳಿಯ ಮುಖವಾಡಗಳನ್ನು, ನಾಗರ ಹೆಡೆಯನ್ನು, ತೇರು ಎಳೆಯುವ ಹಗ್ಗ, ತೇರಿಗೆ ರುದ್ರಾಕ್ಷಿ ಮಾಲೆ, ಕಳಸ, ಇವುಗಳನ್ನು ಮೆರವಣಿಗೆ ಮೂಲಕ ಕುಂಟೋಜಿಗೆ ತರಲಾಗುವುದು ಎಂದರು.

ದೇವಸ್ಥಾನ ಕಮೀಟಿಯ ಉಪಾಧ್ಯಕ್ಷ ಆನಂದ ಗಸ್ತಿಗಾರ, ಕಾರ್ಯದರ್ಶಿ ಮಲ್ಲಿಕಾರ್ಜುನ ನಾಟೀಕಾರ, ಸೇರಿದಂತೆ ಕಮೀಟಿ ಸದಸ್ಯರು ಇದ್ದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ