Devotee's declaration to Lord Amareshwar Swamiji to lead the responsibility of the new Math

ಅಮರೇಶ್ವರ ದೇವರು ಸ್ವಾಮೀಜಿಗೆ ಹೊಸಮಠದ ಜವಾಬ್ದಾರಿ ಮುನ್ನಡೆಸಲು ಭಕ್ತರ ನಿವೇದನೆ

ಅಮರೇಶ್ವರ ದೇವರು ಸ್ವಾಮೀಜಿಗೆ ಹೊಸಮಠದ ಜವಾಬ್ದಾರಿ ಮುನ್ನಡೆಸಲು ಭಕ್ತರ ನಿವೇದನೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾಗಲ್ಲಿಯಲ್ಲಿರುವ ಹೊಸಮಠದ ಜವಾಬ್ದಾರಿ ವಹಿಸಿಕೊಂಡು ಮುದ್ದೇಬಿಹಾಳ ನಗರದ ಜನತೆಗೆ ಧರ್ಮ ಮಾರ್ಗದರ್ಶನ ಮಾಡಬೇಕು ಎಂದು ಕೋರಿ ಹುನಗುಂದದಲ್ಲಿರುವ ಗಚ್ಚಿನಮಠದ ಪೀಠಾಧಿಪತಿ ಅಮರೇಶ್ವರ ದೇವರು ಸ್ವಾಮೀಜಿ ಅವರಿಗೆ ಮುದ್ದೇಬಿಹಾಳದ ಭಕ್ತರು ಭಾನುವಾರ ಆಹ್ವಾನ ನೀಡಿದ್ದಾರೆ.

ಮುದ್ದೇಬಿಹಾಳದಿಂದ ಹುನಗುಂದಕ್ಕೆ ತೆರಳಿದ್ದ ಪ್ರಮುಖ ಮುಖಂಡರ ನಿಯೋಗ ಸ್ವಾಮೀಜಿಯವರನ್ನು ಭೇಟಿಯಾಗಿ ಅವರನ್ನು ಸನ್ಮಾನಿಸಿ ಮುದ್ದೇಬಿಹಾಳ ಭಕ್ತರ ಕೋರಿಕೆಯನ್ನು ಮುಂದಿಟ್ಟಿದ್ದಾರೆ.

ಈ ಕುರಿತು ದೂರವಾಣಿಯಲ್ಲಿ ಮಾತನಾಡಿದ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಕಳೆದ ಮೂರು ವರ್ಷದ ಹಿಂದೆ ಹುನಗುಂದಕ್ಕೆ ತೆರಳಿ ಅಮರೇಶ್ವರ ದೇವರನ್ನು ಭೇಟಿ ಮಾಡಿ ನಮ್ಮ ಭಕ್ತರ ಇಚ್ಛೆಯನ್ನು ತಿಳಿಸಿದ್ದೇವು. ಗಚ್ಚಿನಮಠಕ್ಕೆ ಈಗಾಗಲೇ ಪೀಠಾಧಿಕಾರಿಯಾಗಿರುವ ಅವರು ಮುದ್ದೇಬಿಹಾಳದ ಹೊಸಮಠವನ್ನು ಶಾಖಾ ಮಠವನ್ನಾಗಿ ಮಾಡಿಕೊಂಡು ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಲು ಭಕ್ತರು ಸಹಕಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾಗಿ ಹೇಳಿದರು.

ಸ್ವಾಮೀಜಿಯವರನ್ನು ಮುದ್ದೇಬಿಹಾಳಕ್ಕೆ ಕರೆತರಲು ಮುದ್ದೇಬಿಹಾಳದ ಭಕ್ತರ ಅಭಿಪ್ರಾಯ ಸಂಗ್ರಹಿಸಲು ಆ.3 ರಂದು ಕಿಲ್ಲಾದ ಹೊಸಮಠದಲ್ಲಿ ಸಭೆ ಕರೆಯಲಾಗಿದ್ದು ಅಂದೇ ಅವರನ್ನು ಮುದ್ದೇಬಿಹಾಳದ ಮಠದ ಉಸ್ತುವಾರಿ, ಜವಾಬ್ದಾರಿ ವಹಿಸಿಕೊಂಡು ಮುನ್ನಡೆಸಲು ಚರ್ಚೆ ನಡೆಸಿ ಸಂಪೂರ್ಣ ಒಪ್ಪಿಗೆಯನ್ನು ಭಕ್ತರ ಮೂಲಕ ತಿಳಿಸಲಾಗುವುದು. ಇದಕ್ಕೆ ಸ್ವಾಮೀಜಿಯವರು ಅಂದಿನ ಸಭೆಗೆ ಬರಲು ಒಪ್ಪಿಕೊಂಡಿದ್ದಾರೆ ಎಂದು ಕಲ್ಬುರ್ಗಿ ತಿಳಿಸಿದರು.

ಹೊಸಮಠ ಹಾಗೂ ಹುನಗುಂದದ ಗಚ್ಚಿನಮಠಕ್ಕೂ ಅವಿನಾಭಾವ ಸಂಬಂಧವಿದ್ದು ಅಮರೇಶ್ವರ ದೇವರು ಸ್ವಾಮೀಜಿಯವರ ಸಂಬಂಧಿಕರೇ ಹೊಸಮಠದ ಜವಾಬ್ದಾರಿ ಹಿಂದೆ ನಿಭಾಯಿಸುತ್ತಿದ್ದರು ಎಂದು ಕಲ್ಬುರ್ಗಿ ತಿಳಿಸಿದರು.

ನಿಯೋಗದಲ್ಲಿ ಮುಖಂಡರಾದ ಅಶೋಕ ನಾಡಗೌಡ, ಶಿವಾನಂದ ಹಿರೇಮಠ, ಕಾಮರಾಜ ಬಿರಾದಾರ, ಗೋಪಿ ಮಡಿವಾಳರ, ಬಸಲಿಂಗಪ್ಪ ರಕ್ಕಸಗಿ, ನಾಗಭೂಷಣ ನಾವದಗಿ, ಅಮರೇಶ ಗೂಳಿ, ರಾಜು ರಾಯಗೊಂಡ, ಪ್ರವೀಣ ನಾಗಠಾಣ, ಪುಟ್ಟು ರಾಯನಗೌಡ, ಸುಧೀರ ನಾವದಗಿ, ಮಹಾಂತೇಶ ಬೂದಿಹಾಳಮಠ, ಮುರುಗೇಶ ಮೋಟಗಿ, ಲೋಹಿತ ನಾಲತವಾಡ, ರವಿ ಅಮರಣ್ಣವರ, ಶರಣಯ್ಯ ಹಿರೇಮಠ ಮೊದಲಾದವರು ಇದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ