ಮುದ್ದೇಬಿಹಾಳ : ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರ 56ನೇ ಜನ್ಮದಿನದ ಅಂಗವಾಗಿ ಜು.22ರಂದು ಅವರ ಅಭಿಮಾನಿಗಳು ಹಲವು ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.
ಬೆಳಗ್ಗೆ 9 ಕ್ಕೆ ಸರಕಾರಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ,11ಕ್ಕೆ ಮಾರುತಿ ನಗರದಲ್ಲಿರುವ ಮಾಜಿ ಶಾಸಕರ ತೋಟದ ಮನೆಯಲ್ಲಿ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಉಚಿತ ಶಿಬಿರ ನಡೆಯಲಿದ್ದು ನಂತರ ನಡಹಳ್ಳಿ ಅವರ ಹುಟ್ಟು ಹಬ್ಬದ ಕಾರ್ಯಕ್ರಮದ ಬಹಿರಂಗ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಎ.ಎಸ್.ಪಾಟೀಲ ನಡಹಳ್ಳಿ ಅಭಿಮಾನಿ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.