Develop an action plan for effective project implementation progress: Minister Lad

ಯೋಜನಾ ಅನುಷ್ಠಾನ ಪ್ರಗತಿ ಪರಿಣಾಮಕಾರಿಗೆ ಕ್ರಿಯಾಯೋಜನೆ ರೂಪಿಸಿ: ಸಚಿವ ಲಾಡ್

ಯೋಜನಾ ಅನುಷ್ಠಾನ ಪ್ರಗತಿ ಪರಿಣಾಮಕಾರಿಗೆ ಕ್ರಿಯಾಯೋಜನೆ ರೂಪಿಸಿ: ಸಚಿವ ಲಾಡ್

ಧಾರವಾಡ, ಜುಲೈ.21: ಈ ವರ್ಷದ ಮೊದಲನೇ ಕೆಡಿಪಿ ಸಭೆಯಲ್ಲಿ ಇಲಾಖೆಗಳ ಆರ್ಥಿಕ ಮತ್ತು ಭೌತಿಕ ಪ್ರಗತಿಯಲ್ಲಿ ಸಾಧನೆ ಆಗಿರುವುದು ತೃಪ್ತಿ ತಂದಿದೆ. ಇಲಾಖಾವಾರು ಅನುದಾನ ಬಿಡುಗಡೆ, ಬಳಕೆ ಮತ್ತು ಭೌತಿಕ ಗುರಿ ಸಾಧನೆಯನ್ನು ಪರಿಶೀಲಿಸಿ, ಯೋಜನಾ ಅನುಷ್ಠಾನ ಪ್ರಗತಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಕ್ರಿಯಾಯೋಜನೆಯನ್ನು ಈಗಿನಿಂದಲೇ ಸಿದ್ದಪಡಿಸಿಕೊಳ್ಳಿ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್.ಲಾಡ್ ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ 2025-26 ನೇ ಸಾಲಿನ ಜುಲೈ 2025 ರ ಅಂತ್ಯಕ್ಕೆ ಸಂಬಂಧಿಸಿದಂತೆ ಮೊದಲನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಪ್ರಸಕ್ತ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಜಿಲ್ಲಾ ಪಂಚಾಯತ ವಲಯದಲ್ಲಿ ನಿಗದಿತ ಗುರಿಗೆ ಶೇ. 77.30 ರಷ್ಟು ಭೌತಿಕ ಮತ್ತು ಶೇ. 35.47 ರಷ್ಟು ಆರ್ಥಿಕ ಪ್ರಗತಿ ಆಗಿದೆ. ರಾಜ್ಯ ವಲಯದಲ್ಲಿ ನಿಗದಿತ ಗುರಿಗೆ ಶೇ. 96.41 ರಷ್ಟು ಭೌತಿಕ ಹಾಗೂ ಶೇ. 88.09 ರಷ್ಟು ಆರ್ಥಿಕ ಪ್ರಗತಿ ಆಗಿದೆ. ಅದೇ ರೀತಿ ಕೇಂದ್ರ ಪ್ರಾಯೋಜಕತ್ವದ ಯೋಜನೆಗಳ ನಿಗದಿತ ಗುರಿಗೆ ಶೇ. 92.39 ರಷ್ಟು ಭೌತಿಕ ಹಾಗೂ ಶೇ. 94.16 ರಷ್ಟು ಆರ್ಥಿಕ ಪ್ರಗತಿ ಆಗಿದೆ. ಒಟ್ಟಾರೆ ಶೇ. 91.84 ರಷ್ಟು ಭೌತಿಕ ಹಾಗೂ ಶೇ. 86.21 ರಷ್ಟು ಆರ್ಥಿಕ ಪ್ರಗತಿಯಾಗಿದೆ ಎಂದು ವಿವರಿಸಿದರು.

ಕೃಷಿ ಇಲಾಖೆಯ ಪ್ರಗತಿ ಪರಿಶೀಲನೆ ಮಾಡಿ, ಸರ್ಕಾರದ ಯೋಜನೆಗಳನ್ನು ರೈತರಿಗೆ ಅನುಕೂಲವಾಗುವಂತೆ ಅನುಷ್ಠಾನಗೊಳಿಸಬೇಕು. ರೈತರ ಕೃಷಿ ಸಮಸ್ಯೆಗಳನ್ನು, ಉತ್ತಮ ತಳಿಯ ಬೀಜಗಳನ್ನು ಬಳಸಿಕೊಳ್ಳಲು ಅನುವಾಗುವಂತೆ ಕೃಷಿ ವಿಶ್ವವಿದ್ಯಾಲಯದ ಸಹಕಾರದೊಂದಿಗೆ ಅಲ್ಲಿನ ಕೃಷಿ ತಜ್ಞರ, ವಿಜ್ಞಾನಿಗಳ ಅನುಭವವನ್ನು ಬಳಸಿಕೊಳ್ಳಬೇಕೆಂದು ತಿಳಿಸಿದರು.

ಕೃಷಿ ಇಲಾಖೆಯಿಂದ ರೈತರಿಗೆ ಆಧುನಿಕ ತಂತ್ರಜ್ಞಾನಗಳನ್ನು ಮತ್ತು ಕೃಷಿ ಉಪಕರಣಗಳನ್ನು ಬಳಸಲು ಪ್ರೋತ್ಸಾಹಿಸಲಾಗುತ್ತಿದೆ. ಬೂಮ್ ಸ್ಪಿಂಕ್ಲರ್‌ ಅನ್ನು ಪ್ರಾಯೋಗಿಕವಾಗಿ ಪರೀಕ್ಷೆ ಮಾಡಿದ್ದಾರೆ. ಅದು ಕಡಿಮೆ ಸಮಯದಲ್ಲಿ ಅತಿ ಬೇಗನೆ ಸ್ಪ್ಲಿಂಕಿಂಗ್ ಕೆಲಸ ಮಾಡುತ್ತದೆ. ಹಾಗೂ ಡ್ರೋನ್ ಮುಖಾಂತರ ಸ್ಪ್ರೇ ಮಾಡಬಹುದು. ಈ ಮಷಿನ್ 15 ನಿಮಿಷದಲ್ಲಿ ಒಂದು ಎಕ್ಕರೆ ಸ್ಪ್ರೇ ಮಾಡುತ್ತದೆ. ಆದ್ದರಿಂದ ಇವುಗಳನ್ನು ವಿಡಿಯೋ ಚಿತ್ರೀಕರಣ ಮಾಡಿ, ಎಲ್ಲ ಗ್ರಾಮಗಳ ಜನರಿಗೆ ತಿಳುವಳಿಕೆ ಮತ್ತು ಮಾಹಿತಿ ನೀಡಲು ಕೃಷಿ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ನರೇಗಾ ಯೋಜನೆ ಉತ್ತಮವಾಗಿ ಅನುಷ್ಠಾನಗೊಳಿಸಬೇಕು. ಕೃಷಿ, ಪಂಚಾಯತ ರಾಜ್, ತೋಟಗಾರಿಕೆ, ಅರಣ್ಯ ಮತ್ತು ರೇಷ್ಮೆ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಎಲ್ಲರೂ ಸಮನ್ವಯದಿಂದ ಕ್ರಿಯಾಯೋಜನೆ ರೂಪಿಸಿ, ಜನರಿಗೆ ಉದ್ಯೋಗವಕಾಶಗಳನ್ನು ಹೆಚ್ಚಿಸಬೇಕು. ಹಾಗೂ ನರೇಗಾದಲ್ಲಿ ನೋಂದಣಿ ಆಗಿರುವ ಜನರು ಕೆಲಸಕ್ಕೆ ಬಾರದೇ ಇದ್ದರೆ, ಅಂತಹವರು ನರೇಗಾ ಕೆಲಸದಲ್ಲಿ ಭಾಗವಹಿಸಲು ಉತ್ತೇಜನ ನೀಡಬೇಕು. ನರೇಗಾ ಯೋಜನೆಯ ಕಾಮಗಾರಿಗಳ ನಿಗದಿತ ಭೌತಿಕ ಗುರಿಯನ್ನು ನಿಯಮಾನುಸಾರ ಕಾಲಮಿತಿಯಲ್ಲಿ ಸಾಧಸಬೇಕೆಂದು ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಕಲಘಟಗಿ, ಧಾರವಾಡ, ಹುಬ್ಬಳ್ಳಿ ಭಾಗದ ರೈತರು ಪರ್ಯಾಯ ಬೆಳೆಯಾಗಿ ಅಡಿಕೆ ತೋಟ ಹಾಗೂ ರೇಷ್ಮೆ ಸಾಕಾಣಿಕೆ ಮಾಡುತ್ತಿದ್ದಾರೆ. ಪ್ರಸಕ್ತ ಸಾಲಿಗೆ ರೇಷ್ಮೆ ಬೆಳೆ ಹಾಗೂ ರೇಷ್ಮೆ ಹುಳು ಸಾಕಾಣಿಕೆ ಕೃಷಿಯನ್ನು ವಿಸ್ತರಣೆ ಮಾಡಲು ಗ್ರಾಮವಾರು ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಇಲಾಖೆಯ ಅಧಿಕಾರಿಗಳಗೆ ಸಚಿವರು ನಿರ್ದೇಶಿಸಿದರು

ಅತಿಯಾದ ಮಳೆಯಿಂದಾಗಿ ಗ್ರಾಮಗಳ ಮುಖ್ಯ ರಸ್ತೆಗಳು ಹಾಗೂ ಸಂಪರ್ಕ ಸೇತುವೆ, ರಸ್ತೆಗಳು ಹಾಳಾಗಿವೆ. ಸಾರ್ವಜನಿಕರ ಅನುಕೂಲಕ್ಕಾಗಿ ತಕ್ಷಣ ಅವುಗಳನ್ನು ದುರಸ್ತಿ ಮಾಡಿ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಸಚಿವರು ಸೂಚಿಸಿದರು.

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಮಾಡಿ, ಶೂನ್ಯ ಫಲಿತಾಂಶ ಮತ್ತು ಶೂನ್ಯ ವಿದ್ಯಾರ್ಥಿ ದಾಖಲಾತಿ ಹೊಂದಿರುವ ಶಾಲೆಗಳಿಗೆ ನೋಟಿಸ್ ನೀಡಿ, ನಿಯಮಾನುಸಾರ ಬಂದ್ ಮಾಡಬೇಕು. ಅಲ್ಲಿನ ಸಿಬ್ಬಂದಿಗಳನ್ನು ಸಿಬ್ಬಂದಿ ಅಗತ್ಯವಿರುವ ಸರ್ಕಾರಿ ಶಾಲೆಗಳಿಗೆ ತಕ್ಷಣ ವರ್ಗಾಯಿಸಬೇಕು. ಇದರಿಂದ ಸರ್ಕಾರದ ಅನುದಾನದ ಅಪವ್ಯಯ ತಪ್ಪುತ್ತದೆ. ಕಳೆದ ಎರಡು ವರ್ಷಗಳಿಂದ ಈ ಕುರಿತು ಗಂಭೀರ ಕ್ರಮ ವಹಿಸಿದ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಧೋರಣೆ ವಿರುದ್ಧ ಕೋಪಗೊಂಡ ಸಚಿವರು ತಕ್ಷಣ ಕ್ರಮವಹಿಸಿ, ವರದಿ ಸಲ್ಲಿಸುವಂತೆ ಸೂಚಿಸಿದರು.

ಶಾಸಕ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ., ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಜಿಲ್ಲಾ ಕೆಡಿಪಿ ಸಭೆಯ ನಾಮನಿರ್ದೇಶಿತ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ