Kashi Rudrakshi Garland handed over by devotees to Kuntoji Ratha to the Committee

ಕುಂಟೋಜಿ ರಥಕ್ಕೆ ಭಕ್ತರಿಂದ ಕಾಶಿಯ ರುದ್ರಾಕ್ಷಿ ಮಾಲೆ ಕಮೀಟಿಗೆ ಹಸ್ತಾಂತರ

ಕುಂಟೋಜಿ ರಥಕ್ಕೆ ಭಕ್ತರಿಂದ ಕಾಶಿಯ ರುದ್ರಾಕ್ಷಿ ಮಾಲೆ ಕಮೀಟಿಗೆ ಹಸ್ತಾಂತರ

ಮುದ್ದೇಬಿಹಾಳ : ತಾಲೂಕಿನ ಸುಕ್ಷೇತ್ರ ಕುಂಟೋಜಿಯ ಶ್ರೀ ಬಸವಣ್ಣ, ಸಂಗಮೇಶ್ವರ ನೂತನ ತೇರಿಗೆ ಅಳವಡಿಸಲು ಕಾಶಿಯ ರುದ್ರಾಕ್ಷಿಗಳಿಂದ ತಯಾರಿಸಿದ ಎರಡು ಬೃಹತ್ ರುದ್ರಾಕ್ಷಿ ಮಾಲೆಗಳನ್ನು ಮಂಗಳವಾರ ಗದಗ ಜಿಲ್ಲೆ ನರಗುಂದ ತಾಲೂಕಿನ ಇಬ್ರಾಹಿಂಪುರದಲ್ಲಿರುವ ಶಿವಾನಂದ ಸ್ವಾಮೀಜಿಯವರ ಮಠದಲ್ಲಿ ಕುಂಟೋಜಿ ಬಸವೇಶ್ವರ ದೇವಸ್ಥಾನ ಕಮೀಟಿ ಪದಾಧಿಕಾರಿಗಳು, ಊರಿನ ದೈವಮಂಡಳಿಯ ನಿಯೋಗಕ್ಕೆ ಹಸ್ತಾಂತರಿಸಲಾಯಿತು.

ಅಬ್ಬಿಹಾಳ ಗ್ರಾಮಸ್ಥರು ಮತ್ತು ಮುದ್ದೇಬಿಹಾಳ ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕ ಶರಣು ಹಿರೇಮಠ ಅವರು ತಲಾ ಒಂದು ರುದ್ರಾಕ್ಷಿ ಮಾಲೆಯನ್ನು ಭಕ್ತಿ ಕಾಣಿಕೆಯಾಗಿ ದೇವಸ್ಥಾನಕ್ಕೆ ನೀಡಿದ್ದಾರೆ.

ಒಂದು ಬೃಹತ್ ಮಾಲೆಯನ್ನು ಕೋಟಿ ರುದ್ರಾಕ್ಷಿ ಮಣಿಗಳಿಂದ ತಯಾರಿಸಲಾಗಿದ್ದು ಶಿವಭಕ್ತರು ಧರಿಸುವ ಪವಿತ್ರ ಮಣಿಯಾಗಿರುವುದರಿಂದ ಈ ಮಾಲೆಗೆ ವಿಶೇಷ ಮಹತ್ವ ಇದೆ ಎಂದು ಕಮಿಟಿಯ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ತಿಳಿಸಿದರು.

ಮಾಜಿ ಸೈನಿಕ ನಾಗಲಿಂಗಯ್ಯ ಮಠ, ಈರಯ್ಯ ಶಂಕೀನಮಠ, ಶರಣು ಹಿರೇಮಠ, ಆನಂದ ಗಸ್ತಿಗಾರ, ರಾಮಣ್ಣ ಹುಲಗಣ್ಣಿ, ಮಲಕಾಜಿ ಹೆಬ್ಬಾಳ, ಬಸಲಿಂಗಪ್ಪಗೌಡ ಬಿರಾದಾರ, ಬಸವರಾಜ ಕೋರಿ, ಗುರು ಮಡಿವಾಳರ, ಸಂಗಮೇಶ ಯರಝರಿ, ಬಸವರಾಜ ಹುಲಗಣ್ಣಿ, ಮುತ್ತು ಮದರಿ, ಸಂಗಮೇಶ ಒಣರೊಟ್ಟಿ, ಹಾಜಿ ನಾಯ್ಕೋಡಿ ಸೇರಿ ಹಲವರು ಇದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ