Measures to improve living standards of unorganized workers: Minister Lad

ಅಸಂಘಟಿತ ಕಾರ್ಮಿಕರ ಜೀವನ ಮಟ್ಟ ಸುಧಾರಣೆಗೆ ಕ್ರಮ: ಸಚಿವ ಲಾಡ್

ಅಸಂಘಟಿತ ಕಾರ್ಮಿಕರ ಜೀವನ ಮಟ್ಟ ಸುಧಾರಣೆಗೆ ಕ್ರಮ: ಸಚಿವ ಲಾಡ್

ವಿಜಯಪುರ ಜುಲೈ 23: ವಿವಿಧ ಸಣ್ಣ ಸಣ್ಣ ವೃತ್ತಿ ಕೈಗೊಂಡು, ಅದನ್ನೇ ಅವಲಂಬಿಸಿ ಶ್ರಮಿಜೀವಿಯಾಗಿ ಜೀವನ ನಿರ್ವಹಿಸುತ್ತಿರುವ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಜೀವನ ಮಟ್ಟ ಸುಧಾರಣೆಗೆ ಸರ್ಕಾರ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ಹೇಳಿದರು.

ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ವಿತರಿಸಿ ಅವರು ಮಾತನಾಡಿದರು.

ರಾಜ್ಯದಾದ್ಯಂತ ವಿವಿಧ ವೃತ್ತಿಗಳಲ್ಲಿ ತೊಡಗಿರುವ 91 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದೆ. ಅಸಂಘಟಿತ ವಲಯದ ಕಾರ್ಮಿಕರು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಅಷ್ಟೇನೂ ಸಬಲರಾಗಿರುವುದಿಲ್ಲ. ಸಂಘಟಿತ ಕಾರ್ಮಿಕರಿಗೆ ದೊರಕುವ ಕಾನೂನಾತ್ಮಕ ಸೌಲಭ್ಯಗಳು ಅಸಂಘಟಿತ ಕಾರ್ಮಿಕರಿಗೂ ದೊರೆತು ಅವರ ಜೀವನಮಟ್ಟ ಸುಧಾರಣೆಗೊಳ್ಳಲಿ ಎಂಬುದು ಸರ್ಕಾರದ ಉದ್ದೇಶ. ಆದ್ದರಿಂದ ವಿವಿಧ ಯೋಜನೆಗಳಡಿ ಈ ಕಾರ್ಮಿಕರನ್ನು ಒಳಪಡಿಸಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ಅವರು ಹೇಳಿದರು.

ಅಸಂಘಟಿತ ವಲಯದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿಸಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಸೌಲಭ್ಯ ಒದಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕರ್ನಾಟಕ ಮೋಟಾರ ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ದಿ ಅಧಿನಿಯಮ 2024 ಅನ್ನು ಜಾರಿಗೆ ತಂದಿದ್ದು, ಇದಕ್ಕನುಗುಣವಾಗಿ ನಿಯಮಾವಳಿಗಳನ್ನು ರೂಪಿಸಿ ಮಂಡಳಿ ಮೂಲಕ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ, ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ, ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ, ಕರ್ನಾಟಕ ರಾಜ್ಯ ದಿನ ಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ದಿ ಮಂಡಳಿ, ಕರ್ನಾಟಕ ಸಿನಿಮಾ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರ ಸುಂಕ ಅಧಿನಿಯಮ-2024, ಕರ್ನಾಟಕ ಪ್ಲಾಟ್‍ಫಾರ್ಮ ಆಧಾರಿತ ಗಿಗ್ ಕಾರ್ಮಿಕರ ಅಧಿನಿಮ-2025, ಕಾರ್ಮಿಕರಿಗೆ ಸುರಕ್ಷತೆ ಒದಗಿಸುವ ಕರ್ನಾಟಕ ಕಡ್ಡಾಯ ಉಪಧನ ವಿಮಾ ನಿಯಮಗಳು-2024 ಸೇರಿದಂತೆ ಮಂಡಳಿ ವತಿಯಿಂದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.

ಅಸಂಘಟಿತ ವಲಯದ ಕಾರ್ಮಿಕರಿಗೆ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 91 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದ್ದು, ಸುಮಾರು 30 ರಿಂದ 40 ಲಕ್ಷ ಕಾರ್ಮಿಕರು ಒಳಗೊಂಡಿದ್ದು, ಈ ಕಾರ್ಮಿಕರನ್ನು ಉಚಿತವಾಗಿ ನೊಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ. ಸರ್ಕಾರದಿಂದ ಜಾರಿಗೊಂಡಿರುವ ಸೌಲಭ್ಯಗಳು ಕಾರ್ಮಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಕಾರ್ಡ್ ಒದಗಿಸಲಾಗುತ್ತಿದ್ದು, ಈವರೆಗೆ ರಾಜ್ಯದಲ್ಲಿ 25,45,607 ಕಾರ್ಮಿಕರು ನೊಂದಣಿಯಾಗಿದ್ದು, ವಿಜಯಪುರ ಜಿಲ್ಲೆಯಲ್ಲಿ 102971 ನೊಂದಾಯಿಸಿಕೊಂಡ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ. ಅಸಂಘಟಿತ ಕಾರ್ಮಿಕರು ಸ್ಮಾರ್ಟ್ ಕಾರ್ಡ್ ಪಡೆದುಕೊಂಡು ಸರ್ಕಾರದ ಯೋಜನೆಗಳ ಲಾಭ ಪಡೆದು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಖಾಸಗಿ ವಾಣಿಜ್ಯ ವಾಹನ ಚಾಲಕರು, ನಿರ್ವಾಹಕರು, ಕ್ಲೀನರ್, ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕ್ಕಿಂಗ್ ಗುಮಾಸ್ತ್, ಸಮಯ ಪಾಲಕರು, ಕಾವಲುಗಾರ ಹಾಗೂ ಪರಿಚಾರಕರು, ಮೋಟಾರ್ ಗ್ಯಾರೇಜ್‍ಗಳಲ್ಲಿ ಟೈರ್ ಜೋಡಿಸುವ ಮತ್ತು ಬೇರ್ಪಡಿಸುವ ಘಟಕಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರು ಸೇರಿದಂತೆ ವಿವಿಧ ಕಾರ್ಮಿಕರನ್ನು ಸಾಮಾಜಿಕ ಭದ್ರತಾ ಸೌಲಭ್ಯದಡಿ ಒಳಪಡಿಸಲಾಗಿದೆ ಎಂದು ಅವರು ಹೇಳಿದರು.

ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೀದರ್‌ ಮಾದರಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸೊಸೈಟಿ ರಚನೆ ಮಾಡಿ ಅದರ ಮೂಲಕವೇ ವೇತನ ಪಾವತಿಸುವ ವ್ಯವಸ್ಥೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ವಿವಿಧ ಖಾಸಗಿ ವಲಯದ ಕೈಗಾರಿಕೆ, ಕಾರ್ಖಾನೆಗಳಲ್ಲಿ ಹೆಚ್ಚೆಚ್ಚು ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಆಶಾದೀಪ ಯೋಜನೆಯನ್ನು ಜಾರಿಗೊಳಿಸಿ ಮಾಲೀಕರು ಹಾಗೂ ಉದ್ಯೋಗದಾತರನ್ನು ಉತ್ತೇಜಿಸಲಾಗುತ್ತಿದೆ ಎಂದು ಅವರು ಹೇಳಿದರು.

ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಮಾತನಾಡಿ, ಅಸಂಘಟಿತ ಕಾರ್ಮಿಕರ ಹಿತದೃಷ್ಟಿಯಿಂದ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಅಸಂಘಟಿತ ಕಾರ್ಮಿಕರನ್ನು ಗುರುತಿಸಿ ಸ್ಮಾರ್ಟ್ ಕಾರ್ಡ್ ವಿತರಿಸುವ ಮೂಲಕ ದುರ್ಬಲ ವರ್ಗದವರನ್ನು ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಕಾರ್ಮಿಕರು ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ತಮ್ಮ ಬದುಕನ್ನು ಸುಭದ್ರಗೊಳಿಸಿಕೊಳ್ಳುವಂತೆ ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ 15 ಜನ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಯಿತು. ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆಯಡಿ ಇಬ್ಬರಿಗೆ ಪರಿಹಾರದ ಚೆಕ್, ಅಪಘಾತದಿಂದ ಮರಣ ಹೊಂದಿದ ಇಬ್ಬರೂ ಕಾರ್ಮಿಕರ ಮಕ್ಕಳಿಗೆ ತಲಾ 10 ಸಾವಿರ ರೂ. ಚೆಕ್ ಮತ್ತು ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 10 ಸಾವಿರ ರೂ.ಗಳ ಚೆಕ್‍ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಡಾ.ಆನಂದ ಕೆ., ಜಂಟಿ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿಗಳಾದ ಡಾ.ಎಸ್.ಬಿ. ರವಿಕುಮಾರ, ಕಾರ್ಮಿಕ ಇಲಾಖೆ ಉಪ ಕಾರ್ಮಿಕ ಆಯುಕ್ತರಾದ ಡಿ.ಜಿ.ನಾಗೇಶ, ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ.ನಾಗರಾಜ, ಕಾರ್ಮಿಕ ಅಧಿಕಾರಿ ಶ್ರೀಮತಿ ಉಮಾಶ್ರೀ ಕೋಳಿ ಸೇರಿದಂತೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಕಾರ್ಮಿಕ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ