Give food to starving children, don't waste it: Basavaraja Kori

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು.

ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ “ಹಾಲು ಕುಡಿಯುವ ಹಬ್ಬ”ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಲ್ಲಿನ ನಾಗರಕ್ಕೆ ಹಾಲೆರೆಯುವುದನ್ನು 12 ನೇ ಶತಮಾನದಲ್ಲಿ ಬಸವಾದಿ ಶರಣರು ಖಂಡಿಸಿ ಚಳುವಳಿ ನಡೆಸಿ, ಜನರಲ್ಲಿ ಜಾಗೃತಿ ಮೂಡಿಸಿದರು. ಅಮೂಲ್ಯವಾದ ಹಾಲು, ಸಮತೋಲನ ಆಹಾರವಾಗಿದೆ. ಪೌಷ್ಟಿಕಾಂಶ, ಖನಿಜಗಳನ್ನು ಹೊಂದಿರುವ ಹಾಲನ್ನು ಕಲ್ಲಿಗೆ ಹಾಕದೇ ನಾವು ಕುಡಿದರೆ ದೇಹ ಶಕ್ತಿ ಪಡೆಯುತ್ತದೆ ಎಂದರು. ಹಸಿರು ತೋರಣ ಬಳಗದ ಅಧ್ಯಕ್ಷರಾದ ಬಿ.ಎಚ್.ಬಳಬಟ್ಟಿ ಮಾತನಾಡಿ, ಪೌಷ್ಟಿಕಾಂಶಗಳ ಕೊರತೆಯಿಂದ ಮಕ್ಕಳು, ಬಾಣಂತಿಯರು ಸಾವನ್ನಪ್ಪಿದ ವರದಿ ಓದುತ್ತಿದ್ದೇವೆ. ಅಮೂಲ್ಯವಾದ ಹಾಲನ್ನು ಕಲ್ಲಿಗೆ ಎರೆಯದೇ ಅದನ್ನು ಎಲ್ಲರೂ ಕುಡಿದು ಆರೋಗ್ಯವಂತರಾಗಬೇಕೆಂದರು.

ಹತೋಗೆಬ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಹಸಿರು ತೋರಣ ಗೆಳೆಯರ ಬಳಗವು ಪರಿಸರ ಸಂರಕ್ಷಣೆ ಜೊತೆ ಜೊತೆಯಲ್ಲಿಯೇ ಸಮಾಜದಲ್ಲಿ ಬೇರೂರಿರುವ ಮೌಢ್ಯಗಳನ್ನು ಕಡಿಮೆ ಮಾಡಲು ಮತ್ತು ಆಹಾರದ ಮಹತ್ವ ಸಾರುವ ಕೆಲಸ ಮಾಡುತ್ತಿದೆ ಎಂದರು. ಬಳಗದ ಮಾಜಿ ಅಧ್ಯಕ್ಷರಾದ ರವಿ ಗೂಳಿ ಮಾತನಾಡಿ, ಸಮಾಜದಲ್ಲಿ ಮನೆ ಮಾಡಿರುವ ಅನಿಷ್ಟಗಳು, ಮೂಢ ನಂಬಿಕೆಗಳು ಕ್ರಮೇಣ ಕಡಿಮೆ ಆಗುತ್ತ ನಡೆದಿವೆ ಎಂದರು.

ಡಾ.ವೀರೇಶ ಇಟಗಿ ಮಾತನಾಡಿ, ಹಾಲು ಹಲವು ಪೌಷ್ಟಿಕಾಂಶಗಳಿಂದ ಕೂಡಿದ್ದು, ಅದನ್ನು ವ್ಯರ್ಥ ಮಾಡಬಾರದು ಎಂದರು. ವೇದಿಕೆಯಲ್ಲಿ ಹತೋಗೆಬ ಕಾರ್ಯದರ್ಶಿ ಅಮರೇಶ ಗೂಳಿ, ಗಣ್ಯರಾದ ರಾಮು ಪೂಜಾರಿ, ಮಾಜಿ ಅಧ್ಯಕ್ಷರಾದ ಕೆ. ಆರ್. ಕಾಮಟೆ, ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ಗೌರವಾಧ್ಯಕ್ಷ ಜಿ.ಎಂ.ಹುಲಗಣ್ಣಿ, ಸದಸ್ಯರಾದ ಮಲ್ಲಿಕಾರ್ಜುನ ಬಾಗೇವಾಡಿ, ಮುಖ್ಯ ಗುರುಗಳಾದ ಚಿನ್ನಪ್ಪ ಬಿ. ಚಿತ್ತರಗಿ, ಬಿ. ಎಂ. ಪಲ್ಲೇದ, ಸುರೇಶ ಕಲಾಲ, ರವಿ ತಡಸದ, ಡಾ.ವಿಜಯಕುಮಾರ ಗೂಳಿ, ವೀರೇಶ ಹಂಪನಗೌಡ್ರ, ಡಾ. ಚಂದ್ರಶೇಖರ ಶಿವಯೋಗಿಮಠ, ವಿರುಪಾಕ್ಷಿ ಪತ್ತಾರ, ವಿಶ್ವನಾಥ ಪಾಟೀಲ, ಶಿಕ್ಷಕರಾದ ಸರೋಜಾ ಕಿತ್ತೂರು, ಶಾರದಾ ಮಹಾಂತನವರ, ರಾಜೇಶ್ವರಿ ಜಂಗೀನ, ಅಕ್ಕಮಹಾದೇವಿ ಕುರಜೋಗಿ, ಗೀತಾ ಕೋಳೂರ ಸೇರಿದಂತೆ ಹಸಿರು ತೋರಣ ಬಳಗದ ಸದಸ್ಯರಿದ್ದರು.

ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಸ್ವಾಗತಿಸಿ, ನಿರೂಪಿಸಿದರು. ಸರೋಜಾ ಕಿತ್ತೂರು ವಂದಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹಾಲು ವಿತರಿಸಲಾಯಿತು.

Latest News

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ ಬಂದ್ ಕರೆ ನೀಡುವ ಮೂಲಕ ಮುಂದುವರೆಸಲಾಗಿತ್ತು.ಬoದ್‌ಗೆ ವ್ಯಾಪಾರಸ್ಥರು,ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಎಲ್ಲ ಅಂಗಡಿ

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ