I am not an opportunistic politician: Nad Gowda

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ ಎಂದು ಮಾಜಿ ಶಾಸಕ ನಡಹಳ್ಳಿಗೆ ಶಾಸಕ ಸಿ. ಎಸ್. ನಾಡಗೌಡ ಪ್ರತ್ಯುತ್ತರ ನೀಡಿದ್ದಾರೆ.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಬಡವಾಗಿಲ್ಲ. ಈ ವರ್ಷ 53 ಸಾವಿರ ಕೋಟಿ ರೂ., ಮುಂದಿನ ವರ್ಷ 60 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರವೇ ಜಿಡಿಪಿಯಲ್ಲಿ ರಾಜ್ಯದ ಸ್ಥಾನಮಾನದ ಕುರಿತು ಹೆಮ್ಮೆ ವ್ಯಕ್ತಪಡಿಸಿದೆ. ಜಿಡಿಪಿಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿ ಇದೆ ಎಂದರು.

ಎರಡು ವರ್ಷದಲ್ಲಿ ಹಣ ನಾನು ಎಷ್ಟು ಹಣ ತಂದಿದ್ದೇನೆ. ಬಿಜೆಪಿ ಸರ್ಕಾರದ ಕೊನೆಯ ವರ್ಷದಲ್ಲಿ ಆರ್ಥಿಕ ಶಿಸ್ತು ಎಷ್ಟಿತ್ತು. ಜನರಿಗೆ ಉಪಯೋಗಕಾರಿ ಕೆಲಸಗಳನ್ನು ಕೈಗೊಳ್ಳುವ ಬದಲು ಸ್ವಹಿತದ ಕೆಲಸಗಳನ್ನೇ ಆಯ್ಕೆ ಮಾಡಿಕೊಂಡು ಕಾಂಗ್ರೆಸ್ ಸರ್ಕಾರದ ಮೇಲೆ 1.20 ಲಕ್ಷ ಕೋಟಿ ರೂ.ಬಾಕಿ ಹೊರೆ ಹೊರೆಸಿದ್ದಾರೆ ಎಂದು ಆರೋಪಿಸಿದರು.

ಕೆರೆ ತುಂಬುವ ಯೋಜನೆಗೆ ನೀಲನಕ್ಷೆ ಸಿದ್ದಪಡಿಸಿದ್ದು ಖರ್ಗೆ, ಸಿದ್ದರಾಮಯ್ಯ ಹಾಗೂ ಎಂ.ಬಿ.ಪಾಟೀಲರು ಕೊನೆಯ ಹಳ್ಳಿಗಳಿಗೆ ನೀರು ತಲುಪಿಸುವುದಕ್ಕೆ ಬೇಕಾದ ಯೋಜನೆ ರೂಪಿಸುವ ಜೊತೆಗೆ ಬೇಸಿಗೆಯಲ್ಲಿ ರೈತರಿಗೆ ಸಮಸ್ಯೆಯಾಗಬಾರದು ಎಂದು ಕೆರೆ ತುಂಬುವ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದರು.

ಬೂದಿಹಾಳ ಪೀರಾಪೂರ ಯೋಜನೆ ಕಾಂಗ್ರೆಸ್ ಮಾಡಿದೆ. ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಅಭಿವೃದ್ಧಿ ಆಗಿಲ್ಲ ಎನ್ನುವವರು ನಡೆದಿರುವ ಕೆಲಸಗಳನ್ನು ಗಮನಿಸಲಿ. ಅಮೃತ .2 ಯೋಜನೆಯಡಿ 14 ಕೋಟಿ ಕೆಲಸಕ್ಕೆ ಟೆಂಡರ್ ಮುಗಿದಿದೆ.ಮುದ್ದೇಬಿಹಾಳ ಮೆಗಾಮಾರ್ಟ್ ನಿರ್ಮಾಣಕ್ಕೆ ಹೆಚ್ಚುವರಿಯಾಗಿ 5 ಕೋಟಿ ಬಿಡುಗಡೆ ಮಾಡಲಾಗಿದೆ. ಮುದ್ದೇಬಿಹಾಳ, ತಾಳೀಕೋಟಿ, ನಾಲತವಾಡ ಪಟ್ಟಣಗಳ ಅಭಿವೃದ್ಧಿಗೆ 20 ಕೋಟಿ ರೂ. ಸಿ.ಎಂ ಅಭಿವೃದ್ಧಿ ಅನುದಾನದಲ್ಲಿ ನೀಡಲಾಗಿದೆ. ಮುದ್ದೇಬಿಹಾಳ ಆರೋಗ್ಯ ಕೇಂದ್ರದ ದುರಸ್ತಿಗೆ 1.70 ಕೋಟಿ ನೀಡಲಾಗಿದೆ. ಶಿರಾಡೋಣ ಲಿಂಗಸೂರು ರಸ್ತೆಯನ್ನು 5 ಕೋಟಿ ರೂ. ವೆಚ್ಚದಲ್ಲಿ ಆಯ್ದ ಸ್ಥಳಗಳಲ್ಲಿ ಅಭಿವೃದ್ಧಿ ಪಡಿಸಲು ಹಣ ಬಿಡುಗಡೆ ಮಾಡಿದೆ. ಲೋಕೋಪಯೋಗಿ ಇಲಾಖೆಯಡಿ ವಿಜಯಪುರ ದಿಂಡವಾರ ರಸ್ತೆ ಅಭಿವೃದ್ಧಿಗೆ ಕೆಶಿಪ್ ಅಡಿ 300ಕೋಟಿ ಅನುದಾನ ನಿಗದಿಗೊಳಿಸಲಾಗಿದೆ ಎಂದು ಶಾಸಕರು ಅಭಿವೃದ್ಧಿ ಕೆಲಸಗಳ ಕುರಿತು ಮಾಹಿತಿ ಹಂಚಿಕೊಂಡರು.

ತಮ್ಮ ಅಧಿಕಾರ ಅವಧಿಯಲ್ಲಿ ಒಂದಾದರೂ ಮೊರಾರ್ಜಿ ಸ್ಕೂಲ್ ತಂದಿದ್ದಾರೆಯೇ ಎಂದು ನಡಹಳ್ಳಿ ಅವರನ್ನು ಪ್ರಶ್ನಿಸಿದ ನಾಡಗೌಡರು, ಇಣಚಗಲ್‌ನಲ್ಲಿ ಅಲ್ಪಸಂಖ್ಯಾತರ ವಸತಿ ಶಾಲೆ ಆರಂಭಿಸಲಾಗಿದೆ. ಕಂಪೌಂಡಗೆ 2 ಕೋಟಿ ಬಿಡುಗಡೆ ಮಾಡಲಾಗುವುದು. ಬಿದರಕುಂದಿ ಆರ್‌ಎಂಎಸ್‌ಎ ಶಾಲೆಯನ್ನು 8.65 ಕೋಟಿಯಲ್ಲಿ ಕಟ್ಟಿಸಲಾಗಿದೆ. ಸರೂರ ರೇವಣಸಿದ್ದೇಶ್ವರ ದೇವಸ್ಥಾನದ ಸಮುದಾಯ ಭವನದ ಅಭಿವೃದ್ಧಿಗೆ 4 ಕೋಟಿ ನೀಡಲಾಗಿದೆ. ಯಲಗೂರು ದೇವಸ್ಥಾನದ ಅಭಿವೃದ್ಧಿಗೆ 2 ಕೋಟಿ ನೀಡಲಾಗಿದೆ. ಮುದ್ದೇಬಿಹಾಳ ತಹಸೀಲ್ದಾರ್ ಕಚೇರಿ ರಿಪೇರಿಗೆ 4 ಕೋಟಿ ರೂ ಪ್ರಸ್ತಾವನೆ ಸಲ್ಲಿಸಲಾಗುತ್ತಿದ್ದು ಹೊಸದಾಗಿ ನವೀಕರಣ ಮಾಡಲು ಉದ್ದೇಶಿಸಲಾಗಿದೆ ಎಂದು ಶಾಸಕ ನಾಡಗೌಡರು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮುಖಂಡ ವಾಯ್. ಎಚ್. ವಿಜಯಕರ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ, ನಾಮನಿರ್ದೇಶಿತ ಸದಸ್ಯ ಗೋಪಿ ಮಡಿವಾಳರ ಇದ್ದರು.

ಹಸಿರು ಶಾಲು ಹಾಕಿಕೊಂಡು ರೈತರನ್ನೇ ಮರೆತಿದ್ದೀರಿ, ನಿಮ್ಮ ಅಧಿಕಾರವಧಿಯಲ್ಲಿ ಕೃಷಿ ಸಂಶೋಧನಾ ಕೇಂದ್ರ ತಂದು ಆರಂಭಿಸಬಹುದಿತ್ತು. ಯಾಕೆ ಕೇವಲ ಹಸಿರು ಶಾಲು ಹಾಕಿಕೊಂಡು ರೈತನ ಮಗ ಎನ್ನುತ್ತಿರಲ್ಲ ರೈತರಿಗೆ ಅನುಕೂಲ ಮಾಡಿಕೊಡಬಹುದಾಗಿತ್ತಲ್ಲ. ಯಾಕೆ ಮಾಡಿಲ್ಲ ಎಂದು ನಡಹಳ್ಳಿ ಅವರ ಹೆಸರು ಪ್ರಸ್ತಾಪಿಸದೇ ನಾಡಗೌಡರು ಪ್ರಶ್ನಿಸಿದರು.

Latest News

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.

MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

ಮುದ್ದೇಬಿಹಾಳ ; ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಬುಧುವಾರ ಮಕರ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು ತಳಿರು ತೋರಣಗಳಿಂದ ಕಬ್ಬು ,ಮಡಕೆ ಕುಡಿಕೆ ಗಳಿಂದ ವಿಶೇಷವಾಗಿ ರಂಗೋಲಿ ಮಧ್ಯದಲ್ಲಿ ಅಲಂಕರಿಸಲಾಗಿತ್ತು ಶಾಲಾ ವಿದ್ಯಾರ್ಥಿಗಳು ಶಿಕ್ಷಕ ಶಿಕ್ಷಕಿಯರು ಸಾಂಪ್ರದಾಯಿಕ ಉಡುಪು ಧರಿಸಿ ಹಬ್ಬದ ಸಡಗರಕ್ಕೆ‌ ಮೆರಗು ತಂದರು,ವಿದ್ಯಾರ್ಥಿಗಳು ಜನಪದ ಹಾಗೂ ಮಕರ ಸಂಕ್ರಾಂತಿ ಹಬ್ಬದ ವಿಶೇಷತೆ ಬಿಂಬಿಸುವ ಹಾಡುಗಳಿಗೆ ಹೆಜ್ಜೆಹಾಕಿದರು ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಬಸಮ್ಮ ಸಿದರಡ್ಡಿ ಕಾರ್ಯದರ್ಶಿ