Skill Training Center at Dharwad, Mysore: Labor Minister Santosh Lad meeting

ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

ಬೆಂಗಳೂರು, ಜುಲೈ31: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಧಾರವಾಡ ಮತ್ತು ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರಗಳನ್ನು ಆರಂಭಿಸಲು ಉದ್ದೇಶಿಸಿದ್ದು, ಈ ಸಂಬಂಧ ವಿಕಾಸಸೌಧದಲ್ಲಿ ನಡೆದ ಪ್ರಾತ್ಯಕ್ಷೆಯನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಅಧಿಕಾರಿಗಳೊಂದಿಗೆ ವೀಕ್ಷಿಸಿದರು.

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಹೆಚ್ಚುವರಿ ಕೌಶಲ್ಯಗಳನ್ನು ಕಲಿಸಲು ಜಾಗತಿಕ ಮಟ್ಟದ ವೃತ್ತಿ ತರಬೇತಿ ಮತ್ತು ಕೌಶಲ್ಯ ಉನ್ನತೀಕರಣ, ಕಾರ್ಮಿಕರ ನೈಪುಣ್ಯ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲು ಮಂಡಳಿಯು ಮುಂದಾಗಿದೆ. ಉನ್ನತೀಕರಿಸಿದ ಕೌಶಲ್ಯ ಕೇಂದ್ರಗಳು ಇವಾಗಿದ್ದು, ಈ ಸಂಬಂಧ ಈಗಾಗಲೇ ಇಲಾಖೆಯು ಹಲವು ಹೆಜ್ಜೆಗಳನ್ನು ಇಟ್ಟಿದೆ. ಇತ್ತೀಚೆಗೆ ಭಾಗಿದಾರರೊಂದಿಗೆ ಕೌಶಲ್ಯ ಕೇಂದ್ರಗಳ ಬಗ್ಗೆ ಕಾರ್ಯಾಗಾರವನ್ನೂ ಆಯೋಜಿಸಲಾಗಿತ್ತು.

ಇಂದು ನಡೆದ ಪ್ರಾತ್ಯಕ್ಷಿಕೆಯಲ್ಲಿ ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರೋಹಿಣಿ ಸಿಂಧೂರಿ ದಾಸರಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿಗಳಾದ ಭಾರತಿ, ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆಯ ನಿರ್ದೇಶಕರಾದ ಶ್ರೀನಿವಾಸ್, ಮಂಡಳಿಯ ಉಪ ಕಾರ್ಮಿಕ ಆಯುಕ್ತರಾದ ಜಾನ್ಸನ್ ಮಂಡಳಿಯ ಜಂಟಿ ಕಾರ್ಯದರ್ಶಿಗಳಾದ ಉಮೇಶ್ ಪಾಲ್ಗೊಂಡಿದ್ದರು.

Latest News

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.

MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

ಮುದ್ದೇಬಿಹಾಳ ; ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಬುಧುವಾರ ಮಕರ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು ತಳಿರು ತೋರಣಗಳಿಂದ ಕಬ್ಬು ,ಮಡಕೆ ಕುಡಿಕೆ ಗಳಿಂದ ವಿಶೇಷವಾಗಿ ರಂಗೋಲಿ ಮಧ್ಯದಲ್ಲಿ ಅಲಂಕರಿಸಲಾಗಿತ್ತು ಶಾಲಾ ವಿದ್ಯಾರ್ಥಿಗಳು ಶಿಕ್ಷಕ ಶಿಕ್ಷಕಿಯರು ಸಾಂಪ್ರದಾಯಿಕ ಉಡುಪು ಧರಿಸಿ ಹಬ್ಬದ ಸಡಗರಕ್ಕೆ‌ ಮೆರಗು ತಂದರು,ವಿದ್ಯಾರ್ಥಿಗಳು ಜನಪದ ಹಾಗೂ ಮಕರ ಸಂಕ್ರಾಂತಿ ಹಬ್ಬದ ವಿಶೇಷತೆ ಬಿಂಬಿಸುವ ಹಾಡುಗಳಿಗೆ ಹೆಜ್ಜೆಹಾಕಿದರು ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಬಸಮ್ಮ ಸಿದರಡ್ಡಿ ಕಾರ್ಯದರ್ಶಿ