Govt's Mock Funeral: Protest by Madiga Community for Internal Reservation

ಸರ್ಕಾರದ ಅಣಕು ಶವಯಾತ್ರೆಗೆ ದೊರೆಯದ ಅವಕಾಶ: ಒಳಮೀಸಲಿಗಾಗಿ ಮಾದಿಗ ಸಮುದಾಯದಿಂದ ಪ್ರತಿಭಟನೆ

ಸರ್ಕಾರದ ಅಣಕು ಶವಯಾತ್ರೆಗೆ ದೊರೆಯದ ಅವಕಾಶ: ಒಳಮೀಸಲಿಗಾಗಿ ಮಾದಿಗ ಸಮುದಾಯದಿಂದ ಪ್ರತಿಭಟನೆ

ಮುದ್ದೇಬಿಹಾಳ : ಮಾದಿಗ ಒಳಮೀಸಲಾತಿ ಹೋರಾಟ ಸಮಿತಿಯಿಂದ ಶುಕ್ರವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ಸರ್ಕಾರದ ಅಣಕು ಶವಯಾತ್ರೆಗೆ ಪೊಲೀಸರು ಅವಕಾಶ ಮಾಡಿಕೊಡಲಿಲ್ಲ. ಆದರೆ ಪ್ರತಿಭಟನಾಕಾರರು ಅಂಬೇಡ್ಕರ್ ಸರ್ಕಲ್‌ದಿಂದ ತಹಸೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದರು.

ವಕೀಲ ಕೆ.ಬಿ.ದೊಡಮನಿ ಮಾತನಾಡಿ, ಆಳುವ ಸರ್ಕಾರಗಳು ಸಾರ್ವಜನಿಕ ನ್ಯಾಯ ಕೊಟ್ಟಿಲ್ಲ. ಸುಪ್ರೀಂಕೋರ್ಟ್ ನಿರ್ದೇಶನ ಇದ್ದರೂ ಸಿಎಂ ಸಿದ್ಧರಾಮಯ್ಯ ಅಹಿಂದ ನಾಯಕ, ಶೋಷಿತ ಸಮುದಾಯದ ಪರ ಎಂದು ಹೇಳುತ್ತಾ ಮೇಲ್ವರ್ಗದ ಗುಲಾಮರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಂಸದ ಗೋವಿಂದ ಕಾರಜೋಳ ಅವರು ತಮ್ಮ ಸರ್ಕಾರ ಇದ್ದಾಗ ಏನು ಮಾಡಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳಲಿ. ನಮ್ಮ ಸಮಾಜದ ಎಮ್.ಎಲ್.ಎ, ಎಂಪಿಗಳು ಸಮಾಜವನ್ನು ಸರ್ಕಾರಗಳ ಮುಂದೆ ಅಡ ಇಟ್ಟಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡ ಮಾರುತಿ ಸಿದ್ಧಾಪೂರ ಮಾತನಾಡಿ, ಮೀಸಲಾತಿ ಹೆಸರಿನಲ್ಲಿ ಬಲಾಢ್ಯ ಸಮುದಾಯದವರು ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಚುನಾವಣೆ ಸಮಯದಲ್ಲಿ ಕೊಟ್ಟ ಆಶ್ವಾಸನೆಯನ್ನು ಈಡೇರಿಸಲು ಈ ಸರ್ಕಾರಕ್ಕೆ ಆಗಿಲ್ಲ.ರಾಜಕಾರಣಿಗಳು ನಮ್ಮ ಸಮುದಾಯದ ಪರ ಇಲ್ಲ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ತಮ್ಮದೇ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ಒಳಮೀಸಲಾತಿ ಜಾರಿಗೆ ಮುಂದಾಗಬೇಕು. ಒಳಮೀಸಲು ಜಾರಿ ಬಗ್ಗೆ ಖರ್ಗೆ ರಾಹುಲ್ ಹೆಸರು ಹೇಳಿದರೆ, ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ ಹೆಸರು ಹೇಳುತ್ತಾರೆ. ಒಬ್ಬರ ಮೇಲೊಬ್ಬರು ಹಾಕುತ್ತಾ ಒಳಮೀಸಲು ಕಲ್ಪಿಸುವುದಕ್ಕೆ ವಿಳಂಬ ಮಾಡುತ್ತಿದ್ದಾರೆ ಎಂದು ದೂರಿದರು.

ಮುಖಂಡ ದುರಗಪ್ಪ ದೊಡಮನಿ ಮಾತನಾಡಿ, ಸಂವಿಧಾನದ ಆಶಯದಂತೆ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿಲ್ಲ. ನಮ್ಮ ಸಮುದಾಯಕ್ಕೆ ನಿಜವಾದ ನಾಯಕರು ಮಾತ್ರ ಹೋರಾಟಕ್ಕೆ ಬರಲಿ. ಒಳಮೀಸಲು ಪರ ಎನ್ನುತ್ತಾ ಬ್ರಿಟಿಷರಂತೆ ಕೆಲವರು ನಡೆದುಕೊಳ್ಳುತ್ತಿದ್ದಾರೆ. ಮಾದಿಗ ಸಮುದಾಯವನ್ನು ಕಳೆದ 35 ವರ್ಷಗಳಿಂದ ವಂಚಿಸಿದ್ದಾರೆ ಎಂದು ದೂರಿದರು.

ಮುಖಂಡರಾದ ಬಾಲಚಂದ್ರ ಹುಲ್ಲೂರ , ಶೇಖಪ್ಪ ಮಾದರ, ಆನಂದ ಮುದೂರ ಮಾತನಾಡಿದರು. ತಹಸೀಲ್ದಾರ್ ಕೀರ್ತಿ ಚಾಲಕ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ವಕೀಲರಾದ ಪಿ.ಬಿ.ಮ್ಯಾಗೇರಿ ಮನವಿ ಪತ್ರ ಓದಿದರು. ವಕೀಲ ಮಹೇಶ ದೊಡಮನಿ, ರಮೇಶ ತಳವಾರ, ಮಲ್ಲಪ್ಪ ಬಸರಕೋಡ, ನೀಲಪ್ಪ ಸಿದ್ದಾಪೂರ, ಡಿ.ಡಿ.ಯರಝೇರಿ, ಮುತ್ತು ಅಮರಗೋಳ, ಮಾರುತಿ ಧನ್ನೂರ, ಕಾಳಪ್ಪ ಅರ್ಜಿ, ಪ್ರಭು ತಳಗೆ, ಲಕ್ಷ್ಮಣ ಕಾಳಗಿ, ಪರಶು ನಾಗೂರು, ಮುತ್ತು ಸಿದ್ದಾಪೂರ, ಶಂಕ್ರಪ್ಪ ತಂಗಡಗಿ, ಬಸವರಾಜ ಅರಸನಾಳ, ಮಾಯಮ್ಮ ಮಾದರ, ಶಿಲ್ಪಾ ಮಾದರ, ನೀಲಮ್ಮ ಮಾದರ ಇದ್ದರು. ಮುಂಜಾಗ್ರತಾ ಕ್ರಮವಾಗಿ ಸಿಪಿಐ ಮೊಹ್ಮದ ಫಸಿವುದ್ದೀನ್, ಪಿಎಸ್‌ಐ ಸಂಜಯ ತಿಪರೆಡ್ಡಿ ತಮ್ಮ ಸಿಬ್ಬಂದಿಯೊಂದಿಗೆ ಭದ್ರತೆ ಒದಗಿಸಿದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು