Workers' protest demanding fulfillment of various demands in the lap of rain raya

ಮಳೆರಾಯನ ಮಡಿಲಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ಮಳೆರಾಯನ ಮಡಿಲಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೂರನೇ ದಿನದ ಪ್ರಾರಂಭ. ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದ ಜಿಲ್ಲಾ ಘಟಕದಿಂದ ಗೋಕುಲ ರಸ್ತೆ ಪ್ರಿಯದರ್ಶಿನಿ ಕಾಲೋನಿಯಲ್ಲಿರುವ ಕಾರ್ಮಿಕರ ಭವನದ ಎದುರು ಸೋಮವಾರ ದಿಂದ ಪ್ರಾರಂಭವಾಗಿ ಇಂದಿಗೆ ಮೂರನೇ ದಿನ ಪ್ರತಿಭಟನೆ ಮುಂದುವರೆದಿದೆ.

ಮಂಗಳವಾರದಂದು ರಾತ್ರಿ ಸರಿ-ಸುಮಾರು ಎಂಟು ಗಂಟೆಗೆ ಏಕಾಏಕಿ ಧಾರಾಕಾರ ಮಳೆಯಲ್ಲಿ ಪ್ರತಿಭಟನೆ ಮುಂದುವರಿಯುತ್ತಿತ್ತು ಈ ಪ್ರತಿಭಟನೆಯು ಅನಿರ್ದಿಷ್ಟಾವಧಿ ಧರಣಿ ಆಗಿರುವುದರಿಂದ ಹುಬ್ಬಳ್ಳಿ-ಧಾರವಾಡ ಕಮಿಷನರಾದ ಎನ್ ಶಶಿಕುಮಾರ್ ಅವರು ಪ್ರತಿಭಟನಾಕಾರರೊಂದಿಗೆ ಮನವಲಿಸುವ ಪ್ರಯತ್ನ ಮಾಡಿದರು ಆದರೂ ಪ್ರತಿಭಟನಾಕಾರರು ಕಾರ್ಮಿಕರ ಇಲಾಖೆಯ ಸಚಿವರು ಬರೋವರೆಗೂ ಪ್ರತಿಭಟನೆ ಮುಂದುವರೆಯುತ್ತದೆ ಎಂದು ತಿಳಿಸಿದರು.

ಹಾಗೆ ನಮ್ಮ ಮನವಿಯನ್ನು ಸ್ವೀಕರಿಸಬೇಕು ತದನಂತರ ನಾವು ಪ್ರತಿಭಟನೆಯನ್ನು ಹಿಂಬಡಿಯುತ್ತೇವೆ ಎಂಬವ ಮಾತನ್ನು ಅಧಿಕಾರಿಗಳಿಗೆ ತಿಳಿಸಿದರು.

ಪ್ರತಿಭಟನಾಕಾರರ ಬೇಡಿಕೆ ಕಾಳಜಿ ಇಲ್ಲಾ ಪ್ರತಿಭಟನೆ ನಿಲ್ಲಿಸುವದರ ಬಗ್ಗೆ ಕುತಂತ್ರಿ ಯೋಚನೆಗಳು ಹಾಗೂ ಬೇರೆಯವರಿಗೆ ಕರೆ ಮಾಡಿ ಸಂದೇಶಗಳು ತಿಳಿಸುವುದಕ್ಕಿಂತ ಮೊದಲು ಪ್ರತಿಭಟನಾಕಾರರಿಗೆ ಕರೆ ಮಾಡಿ ಅವರ ಬಗ್ಗೆ – ಅವರ ಬೇಡಿಕೆಗಳ ಬಗ್ಗೆ ಯಾರ ಜೊತೆಯೂ ಮಾತುಕತೆ ಆಡದೆ ಇರೋದು ವಿಪರ್ಯಾಸ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡರ ಮಾತನಾಡಿ, ಮಕ್ಕಳಿಗೆ ಕೂಡಲೇ ಶೈಕ್ಷಣಿಕ, ಇತರೆ ಧನಸಹಾಯ ಮಂಜೂರು ಮಾಡಬೇಕು. ಅನಾವಶ್ಯಕ ಟೆಂಡ‌ರ್ ಕರೆಯುವುದನ್ನು ಕೂಡಲೇ ಸ್ಥಗಿತಗೊಳಿಸಬೇಕು. 15-20 ವರ್ಷಗಳ ಹಿಂದೆ ಆಗಿರುವ ನೋಂದಣಿ ಆಧರಿಸಿ ಈಗ ಕಾರ್ಮಿಕರ ಕಾರ್ಡ್‌ಗಳನ್ನು ರದ್ದುಪಡಿಸುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು. ಹೆರಿಗೆ ಭತ್ಯೆ, ಹಿರಿಯ ಕಾರ್ಮಿಕರ ಪಿಂಚಣಿ, ಅಂತ್ಯಕ್ರಿಯೆ, ಅಪಘಾತ ಪರಿಹಾರವನ್ನು ಈವರೆಗೂ ಮಂಜೂರು ಮಾಡಿಲ್ಲ ಕೂಡಲೇ ಅದನ್ನು ಬಿಡುಗಡೆ ಮಾಡಬೇಕು. ಅರ್ಜಿ ವಿಲೇವಾರಿಯಲ್ಲಿ ಆಗುತ್ತಿರುವ ವಿಳಂಬ ತಪ್ಪಿಸಬೇಕು ಎಂದು ಒತ್ತಾಯಿಸಿದರು.

ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಸ್ಥಳಕ್ಕೆ ಬಂದು ನಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡುವವರೆಗೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಯಾದಗಿರಿ , ಗುಲ್ಬರ್ಗ, ರಾಯಚೂರು, ಗದಗ, ಹಾವೇರಿ, ಉತ್ತರ ಕನ್ನಡ, ಧಾರವಾಡ ವಿವಿಧ ಜಿಲ್ಲೆಗಳ ಕಾರ್ಮಿಕರ ಸಂಘಗಳು ಭಾಗವಹಿಸಿದ್ದರು. ಅಶ್ವಥ್ ಮರಿಗೌಡ್ರ, ಶಿವು ರಾಠೋಡ, ಶಿವಕುಮಾರ ಬಂಡಿವಡ್ಡರ, ವಾಸು ಲಮಾಣಿ, ಮುಸ್ತಾಕ್ ನದಾಫ್, ಎಸ್.ಪಿ. ಕರಿಸೋಮನಗೌಡ್ರ, ಶರಣಪ್ಪ ರೊಟ್ಟಿ , ಶಿವಕುಮಾರ ಗೌಡ್ರ, ಬೀರಪ್ಪ ಡೊಳ್ಳ, ರಾಜು ದೊರೆ, ಈರಪ್ಪ ವಲ್ಕಂದಿನ್ನಿ , ವೆಂಕಟೇಶ್, ತಿಮ್ಮಪ್ಪ, ತಾಯಪ್ಪ , ರವಿರಾಜ್, ದೇವಿಂದ್ರ ಕಾಲವಾ, ಶಿವಾನಂದ ಅಸೊಟ್ಟಿ, ಲಕ್ಷ್ಮಣ್, ಶಂಕರ್ ಲಂಬಾಣಿ , ಜೋತಿ ಪತ್ತಾರ, ಶಭಿನಾ ಮೇಲಿನಮನಿ, ಇನ್ನಿತರರಿದ್ದರು.

ವರದಿಗಾರ : ಶಿವು ರಾಠೋಡ

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ