Protest from the right wing community Ny. Demand to reject Nagmohandas report

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್ ಮಾತನಾಡಿ, ನಗರ ಮತ್ತು ಗ್ರಾಮ ಪಂಚಾಯತ್‌ನಲ್ಲಿ ಬೂತ ತೆರೆಯದೇ ಮನೆಗಳಿಗೆ ಚೀಟಿ ಅಚಿಟಿಸುವ ಮೂಲಕ ಸಮೀಕ್ಷೆ ಪೂರ್ಣವಾಗಿದೆ ಎಂದು ತಪ್ಪು ವರದಿ ನೀಡಲಾಗಿದ್ದು ಇದರಲ್ಲಿ 1.47 ಕೋಟಿ ಬದಲು 1.16 ಕೋಟಿ ಜನರ ವರದಿ ಸಲ್ಲಿಕೆಯಾಗಿದೆ. ಅದರಲ್ಲಿ ಆಯೋಗವು 1.05 ಕೋಟಿ ಮಾತ್ರ ಸರ್ವೆ ಮಾಡಿದೆ. 40 ಲಕ್ಷ ಜನರು ಸಮೀಕ್ಷೆಯಿಂದ ಹೊರಗುಳಿದಿದ್ದಾರೆ ಎಂದು ದೂರಿದರು.

ಕೆಲವು ಬಲಗೈ ಜಾತಿಗಳನ್ನು ತಪ್ಪಾಗಿ ಪ್ರವರ್ಗ-ಎ ಗೆ ಸೇರಿಸಲಾಗಿದ್ದು ಬಲಗೈ ಸಮುದಾಯದ ಜನಸಂಖ್ಯೆಯನ್ನು ಒಡೆದು ತೋರಿಸಲಾಗಿದೆ ಎಂದು ದೂರಿದರು. ಅವೈಜ್ಞಾನಿಕವಾಗಿರುವ ನಾಗಮೋಹನದಾಸ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು. ಹೊಲೆಯ ಹಾಗೂ ಮಾದಿಗ ಸಮುದಾಯ ಒಂದೆ ಜೋಡೆತ್ತು ಇದ್ದಂತೆ ಇಬ್ಬರು ಸಮುದಾಯದವರಿಗೂ ಸಮಾನ ನ್ಯಾಯ ದೊರಕಿಸಿಕೊಡುವ ಕಾರ್ಯ ವರದಿಯಿಂದಾಗಬೇಕಿತ್ತು ಎಂದು ಹೇಳಿದರು.

ತಹಸೀಲ್ದಾರ್ ಕೀರ್ತಿ ಚಾಲಕ್ ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಪ್ರೊ. ಪಿ. ಎಚ್. ಉಪ್ಪಲದಿನ್ನಿ, ಮುಖಂಡರಾದ ಸಿದ್ದು ಕಟ್ಟಿಮನಿ, ದೌರ್ಜನ್ಯ ತಡೆ ಸಮೀತಿ ಸದಸ್ಯ ಮಲ್ಲು ತಳವಾರ, ಎಸ್. ಆರ್. ಕಟ್ಟೀಮನಿ, ಅಶೋಕ ಪಾದಗಟ್ಟಿ, ಶಿವಪುತ್ರ ಅಜಮನಿ, ಪ್ರಕಾಶ್ ಚಲವಾದಿ ಮಾತನಾಡಿದರು.

ಪುರಸಭೆ ಸದಸ್ಯ ಶಿವು ಶಿವಪೂರ, ಚಲವಾದಿ ಮಹಾಸಭೆ ತಾಲೂಕು ಅಧ್ಯಕ್ಷ ರೇವಣಪ್ಪ ಹರಿಜನ, ಯಲ್ಲಪ್ಪ ಚಲವಾದಿ, ಮಹಾಂತೇಶ ಚಲವಾದಿ, ಕೆ.ಎಂ.ಇಬ್ರಾಹಿಂಪೂರ, ಶ್ರೀಕಾಂತ ಚಲವಾದಿ, ಶರಣು ಚಲವಾದಿ, ಸಂಗು ಚಲವಾದಿ, ಸಿದ್ದು ಚಲವಾದಿ, ಮಂಜುನಾಥ ಬಸರಕೋಡ, ಪ್ರಶಾಂತ ಕಾಳೆ, ಮಂಜುನಾಥ್ ಕಟ್ಟಿಮನಿ, ದೇವರಾಜ್ ಹಂಗರಗಿ, ಎಚ್. ಆರ್. ಗಂಜಾಳ ಇದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ