ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ ಪಿಎಸ್‌ಐ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಮೋಕಾದಲ್ಲಿ ನಡೆದಿದೆ.
ಮೋಕಾ ಪೊಲೀಸ್ ಠಾಣೆಯ ಪಿಎಸ್‌ಐ ಕೆ.ಕಾಳಿಂಗ ಪತ್ನಿ ಚೈತ್ರಾ (36) ಆತ್ಮಹತ್ಯೆ ಮಾಡಿಕೊ೦ಡಿರುವ ಮಹಿಳೆ.
ಸಹೋದರ ಹಾಗೂ ಇಬ್ಬರು ಸಹೋ ದರಿಯರ ಸಾವಿನಿಂದ ಚೈತ್ರಾ ಮಾನಸಿಕ ಖಿನ್ನತೆಗೆ ಒಳಗಾಗಿದ್ರು ಎನ್ನಲಾಗಿದೆ. 2 ತಿಂಗಳ ಹಿಂದೆ ಚೈತ್ರಾ ಅವರ ಸಹೋದರ ಆತ್ಮಹತ್ಯೆ ಮಾಡಿಕೊಂಡಿದ್ದ. 2 ವರ್ಷಗಳ ಅಂತರದಲ್ಲಿ ಇದ್ದ ಒಬ್ಬ ಸಹೋದರ ಹಾಗೂ ಇಬ್ಬರು ಸಹೋದರಿಯರು ಮೃತಪಟ್ಟಿದ್ರು. ಹೀಗಾಗಿ ಚೈತ್ರಾ ಮಾನಸಿಕ ಖಿನ್ನತೆಗೆ ಒಳಗಾಗಿದ್ರು ಅಂತ ತಿಳಿದುಬಂದಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದರಿಂದ ಶಿವಮೊಗ್ಗದಲ್ಲಿ ಚಿಕಿತ್ಸೆಯನ್ನೂ ಕೊಡಿಸಲಾಗಿತ್ತು.
ಶುಕ್ರವಾರ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಳಗ್ಗೆ ಮಕ್ಕಳನ್ನ ರೆಡಿ ಮಾಡಿದ್ದ ಚೈತ್ರಾ ಪತಿಯ ಜತೆ ಧ್ವಜಾರೋಹಣಕ್ಕೆ ಕಳಿಸಿದ್ರು. ಮಕ್ಕಳು ಹಾಗೂ ಗಂಡ ಮನೆಯಿಂದ ಹೊರ ಹೋಗ್ತಿದ್ದಂತೆ ಚೈತ್ರಾ ನೇಣಿಗೆ ಶರಣಾಗಿದ್ದಾರೆ.