ಬೆಂಗಳೂರಲ್ಲಿ ಭೀಕರ ಅಗ್ನಿ ಅವಘಡ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ!

ಬೆಂಗಳೂರಲ್ಲಿ ಭೀಕರ ಅಗ್ನಿ ಅವಘಡ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ!

ಬೆಂಗಳೂರು: ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಮೃತಪಟ್ಟಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಳಗ್ಗೆಯಿಂದ ಸತತ ಕಾರ್ಯಾಚರಣೆ ನಡೆಸಿ ಇಬ್ಬರ ಶವ ಹೊರಕ್ಕೆ ತೆಗೆದಿದೆ.

ಮೂವರ ಶವ ಹೊರ ತೆಗೆಯಲು ಕಾರ್ಯಾಚರಣೆ ಮುಂದುವರೆಸಿದೆ.

ಮೃತರನ್ನು ಮದನ್ (38) ಪತ್ನಿ ಸಂಗೀತಾ (33) ಮಕ್ಕಳಾದ ಮಿತೇಶ್ (8) ವಿಹಾನ್ (5) ಎಂದು ಗುರುತಿಸಲಾಗಿದೆ. ಮತ್ತೊಂದು ಮಹಡಿಯಲ್ಲಿದ್ದ ಸುರೇಶ್ ಕೂಡ ಬೆಂಕಿಗೆ ಸಿಲುಕಿ ಸಜೀವ ದಹನರಾಗಿದ್ದಾರೆ.

ಮೊದಲು ಕೆಳಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ನಂತರ ಅದು ಮೇಲಿನ ಮಹಡಿಗೆ ಕೂಡ ಆವರಿಸಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಲ್ಲರೂ ಓಡಿಹೋಗಿ ತಮ್ಮ ಜೀವ ಉಳಿಸಿಕೊಂಡಿದ್ದಾರೆ. ಆದರೆ ಒಂದು ಫ್ಯಾಮಿಲಿಗೆ ಮಾತ್ರ ಬೆಂಕಿಗೆ ಸಿಲುಕಿದೆ.

ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ. ಅಗ್ನಿ ಅವಘಡದಿಂದ ಭಾರಿ ಪ್ರಮಾಣದ ವಸ್ತುಗಳು ಕೂಡ ಸುಟ್ಟು ಕರಕಲಾಗಿದೆ ಎಂದು ಹೇಳಲಾಗುತ್ತಿದೆ.

ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ 3:30 ರ ವೇಳೆಗೆ ಈ ಅವಘಡ ಸಂಭವಿಸಿದೆ.

Latest News

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್